ಶಾಲಾ ಕಾಲೇಜುಗಳಲ್ಲಿ ಮೇಳೈಸಿದ ಕನ್ನಡ ಕಂಪು

ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನದಡಿ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ, ಕನ್ನಡ ಸಂಕಲ್ಪ

Team Udayavani, Oct 29, 2021, 1:39 PM IST

ಪಲಶ್ರುತಿ

ದೊಡ್ಡಬಳ್ಳಾಪುರ: 66ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನದಡಿ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಏಕಕಾಲದಲ್ಲಿ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಕನ್ನಡದ ಪ್ರಾತಿನಿಧಿಕ ಇಲಾಖೆಗಳ ಮೂಲಕ ರಾಜ್ಯ ಸರ್ಕಾರ ಕರೆ ನೀಡಿದ್ದ ಈ ಅಭಿ ಯಾನದಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತ ಗಾಯನ ಹಾಗೂ ಕನ್ನಡದ ಸಂಕಲ್ಪ ಕೈಗೊಂಡಿದ್ದು ವಿಶೇಷವಾಗಿತ್ತು.

ನಾಡಗೀತೆಯೊಂದಿಗೆ ಆರಂಭವಾಗಿ, ಕನ್ನಡ ಗೀತೆ ಗಳಾದ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ. ಕೆ.ಎಸ್‌.ನಿಸಾರ್‌ ಅಹಮದ್‌ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು -ಸಾಮೂಹಿಕ ಗೀತ ಗಾಯನವನ್ನು ಸಹಸ್ರಾರು ಕಂಠಗಳಲ್ಲಿ ಪ್ರಸ್ತುತ ಪಡಿಸಲಾಯಿತು.

ಸಂಕಲ್ಪ: ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇ ನೆಂದು ಸಂಕಲ್ಪ ಮಾಡುತ್ತೇನೆ ಎಂಬ ವಾಕ್ಯಗಳನ್ನು ಹೇಳುವ ಮೂಲಕ ಕನ್ನಡ ಬಳಕೆಯ ಸಂಕಲ್ಪ ಕೈಗೊಳ್ಳಲಾಯಿತು.

 600 ವಿದ್ಯಾರ್ಥಿಗಳು ಭಾಗಿ: ನಗರದ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಅಂತಾರಾಷ್ಟ್ರೀಯ ಪ್ರೌಢಶಾಲೆ ನೇತೃತ್ವದಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಲೇಜಿನ ಮೆಟ್ಟಿಲುಗಳ ಮೇಲೆ ನಿಂತು ಏಕಕಾಲಕ್ಕೆ ಕನ್ನಡ ಗೀತ ಗಾಯನ ನಡೆಸುವ ಮೂಲಕ ಕನ್ನಡಕ್ಕಾಗಿ ನಾವು – ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನದಲ್ಲಿ ಪಾಲ್ಗೊಂಡರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಆರ್‌.ರವಿಕಿರಣ್‌, ಅಂ.ರಾ ವಸತಿ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಬಿ. ವಿಜಯಕುಮಾರ್‌, ಎಸ್‌ಡಿಯುಐಎಂ ಉಪಪ್ರಾಂಶು ಪಾಲರಾದ ಪಿ.ಚೈತ್ರಾ, ವಾಣಿಜ್ಯ ವಿಭಾಗ ಮುಖ್ಯಸ್ಥ ಕೆ.ದಕ್ಷಿಣಾಮೂರ್ತಿ, ಸಾಂಸ್ಕೃತಿಕ ಸಂಚಾಲಕ ಡಾ. ಎಂ.ಚಿಕ್ಕಣ್ಣ ಮತ್ತಿತತರು ಪಾಲ್ಗೊಂಡಿದ್ದರು.

ದೇವರಾಜ ಅರಸು ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ಗೀತೆ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹಾಂತೇಶ್‌, ಉಪನ್ಯಾಸಕರು, ಮತ್ತು ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಕೊಂಗಾಡಿಯಪ್ಪ ಪ.ಪೂ ಕಾಲೇಜು: ಕೊಂಗಾಡಿಯಪ್ಪ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು. ವಿದ್ಯಾಸಂಸ್ಥೆಯ ನಿರ್ದೇಶಕ ಜಗದೀಶ್‌ ಬಾಬು, ಪ್ರಾಂಶುಪಾಲ ಎನ್‌.ಆನಂದ ಮೂರ್ತಿ, ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲ ನಾರಾಯಣಸ್ವಾಮಿ, ಕಾಲೇಜಿನ ಹಿರಿಯ ಉಪನ್ಯಾಸಕ ಸತ್ಯನಾರಾಯಣ್‌, ಎನ್‌ಸಿಸಿ ಅಧಿಕಾರಿ ಎನ್‌. ಶ್ರೀನಿವಾಸ್‌, ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ಶ್ರೀಕಾಂತ, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಇದನ್ನೂ ಓದಿ:- ನಟ ಪುನೀತ್ ರಾಜಕುಮಾರ್ ಗೆ ಹೃದಯಾಘಾತ: ಆಸ್ಪತ್ರೆಗೆ ಸಿಎಂ ಭೇಟಿ, ವೈದ್ಯರು ಹೇಳಿದ್ದೇನು?

ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನಗರದ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್‌.ಶ್ರೀನಿವಾಸಯ್ಯ ಮಾತನಾಡಿ, ಕನ್ನಡದ ಬಗ್ಗೆ ಎಲ್ಲರೂ ಅಭಿಮಾನ ಮೂಡಿಸಿಕೊಳ್ಳಬೇಕು. ರಾಜ್ಯೋತ್ಸವದ ಅಂಗವಾಗಿ ಇಂದಿನಿಂದ ಕನ್ನಡದಲ್ಲಿಯೇ ಮಾತನಾಡು, ಭಾಷಣ ಸ್ಪರ್ಧೆ, ಗೀತ ಗಾಯನ , ಪ್ರಬಂಧ, ಕನ್ನಡ ಅಂಕಿಗಳನ್ನು ಬರೆಯುವುದು, ಒಗಟು ಬಿಡಿಸುವುದು, ಅಂತ್ಯಾಕ್ಷರಿ ಮೊದಲಾದ ಸ್ಪರ್ಧೆಗಳನ್ನು ಏರ್ಪಡಿಸಿ, ವಿದ್ಯಾರ್ಥಿಗಳಿಗೆ ಕನ್ನಡದ ಬಗ್ಗೆ ಅಭಿಮಾನ ಮೂಡಿಸಲಾಗುತ್ತಿದೆ ಎಂದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ನರಸಿಂಹಮೂರ್ತಿ ಸೇರಿದಂತೆ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಅರವಿಂದ ವಿದ್ಯಾಸಂಸ್ಥೆ : ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಆಯೋಜಿಸಿರುವ ಸಾಮೂಹಿಕ ಗೀತ ಗಾಯನ ಅರ್ಥಪೂರ್ಣವಾಗಿದೆ ಎಂದು ಅರವಿಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌ ತಿಳಿಸಿದರು. ಕಾರ್ಯಕ್ರಮದಲ್ಲಿ ಖಜಾಂಚಿ ಡಿ.ಕೆ. ವೆಂಕಪ್ಪ. ಪ್ರಾಂಶುಪಾಲ ಎಂ.ಸಿ.ಮಂಜುನಾಥ್‌, ಸಂಸ್ಥೆಯ ಎಲ್ಲಾ ವಿಭಾಗಗಳ ಉಪನ್ಯಾಸಕರು ಶಿಕ್ಷಕರು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.