ವಿಶ್ವವಿದ್ಯಾಲಯಗಳು ಜಾಗತಿಕವಾಗಿ ಗುರುತಿಸಿಕೊಳ್ಳಲಿ


Team Udayavani, Dec 17, 2018, 11:33 AM IST

m2-vishva.jpg

ಮೈಸೂರು: ಭಾರತೀಯ ವಿಶ್ವವಿದ್ಯಾಲಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್‌.ಆರ್‌.ನಿರಂಜನ ತಿಳಿಸಿದರು. ಮಹಾರಾಜ ಎಜುಕೇಷನ್‌ ಟ್ರಸ್ಟ್‌ ವತಿಯಿಂದ ನಗರದ ರಾಜೇಂದ್ರ ಕಲಾಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಮೈಸೂರು ವಿವಿ ಕುಲಪತಿ ಪ್ರೊ.ಜೆ. ಹೇಮಂತ್‌ಕುಮಾರ್‌ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಯಾವುದೇ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಲ್ಲಿ ಬೌದ್ಧಿಕಮಟ್ಟವನ್ನು ವೃದ್ಧಿಸಬೇಕಾದರೆ, ಸಂಶೋಧನೆಗಳು ಕ್ರಮಬದ್ಧವಾಗಿ ನಡೆಯಬೇಕಾದರೆ ಸಮರ್ಪಕ ಶಿಕ್ಷಕರ ವೃಂದವನ್ನು ಹೊಂದಬೇಕು. ಆಗ ಮಾತ್ರವೇ ವಿವಿಗಳು ರಾಷ್ಟ್ರೀಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ. ಭಾರತೀಯ ವಿವಿಗಳು ಸಹ ಆಕ್ಸ್‌ಫ‌ರ್ಡ್‌, ಕೇಂಬ್ರಿಡ್ಜ್ ವಿವಿಗಳ ಮಟ್ಟಕ್ಕೆ ಬೆಳೆಯುವ ಮೂಲಕ ಜಾಗತಿಕಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದ ಅವಶ್ಯತೆ ಇದೆ ಎಂದರು.  

ಮೈಸೂರು ವಿಶ್ವವಿದ್ಯಾಲಯಕ್ಕೆ ಸುದೀರ್ಘ‌ ಇತಿಹಾಸವಿದ್ದು, ಗುಣಮಟ್ಟದ ಶಿಕ್ಷಣ, ಪಾಕೃತಿಕ ವಾತಾವರಣ ಹಾಗೂ ಸಂಶೋಧನೆಗಳು ಇದಕ್ಕೆ ಪ್ರಮುಖ ಕಾರಣ. ಇಲ್ಲಿ ಓದಿ ಪ್ರಾಧ್ಯಾಪಕರಾಗಿರುವವರು ಬಹಳ ಎತ್ತರಕ್ಕೆ ಬೆಳೆದಿದ್ದಾರೆ. ಕುಲಪತಿ ಹುದ್ದೆ ಎಂಬುದು ಹೆಮ್ಮೆ ಪಡುವಂತಹ ಸ್ಥಾನವಲ್ಲ. ಅದೊಂದು ಮುಳ್ಳಿನ ಕುರ್ಚಿಯಾಗಿದ್ದು, ಗಟ್ಟಿಯಾಗಿ ಕುಳಿತಷ್ಟು ಚುಚ್ಚುತ್ತಾ ಹೋಗುತ್ತದೆ.

ಹೊಸ ಸವಾಲು, ಜವಾಬ್ದಾರಿಗಳನ್ನು ಪರಿಚಯಿಸುತ್ತದೆ. ಎಲ್ಲಾ ಪ್ರಾಧ್ಯಾಪಕರಿಗೂ ಕುಲಪತಿಯಾಗುವ ಅರ್ಹತೆ ಇರುತ್ತದೆ. ಆದರೆ ಕೆಲವರಿಗಷ್ಟೇ ಆ ಅವಕಾಶ ದೊರೆಯಲಿದೆ ಎಂದ ಅವರು, ಪ್ರೊ.ಜಿ.ಹೇಮಂತ್‌ ಕುಮಾರ್‌ ಅವರಿಗೆ ಈ ಅವಕಾಶ ಲಭಿಸಿದ್ದು, ಇತಿಹಾಸದ ಪುಟಗಳಲ್ಲಿ ಬರೆಯುವಂತಹ ಕೆಲಸ ಮಾಡಲಿ ಎಂದು ಆಶಿಸಿದರು. 

ವಿಶ್ರಾಂತ ಕುಲಪತಿ ಪ್ರೊ.ಕೆ.ಚಿದಾನಂದ ಗೌಡ ಮಾತನಾಡಿ, ಮಹಾರಾಜ ಕಾಲೇಜು ಮದ್ರಾಸ್‌ ವಿವಿ ಅಧೀನದಲ್ಲಿತ್ತು. ಹೊಸದಾಗಿ ಮೈಸೂರು ವಿವಿ ಪ್ರಾರಂಭಿಸಲು ಮೊದಲು ಮದ್ರಾಸ್‌ ವಿವಿ ಒಪ್ಪಿರಲಿಲ್ಲ. ನಂತರ ಇದರ ಅವಶ್ಯಕತೆಯನ್ನು ವಿವರಿಸಿದಾಗ ಅವಕಾಶ ಲಭಿಸಿತು. ಹೀಗಾಗಿ ಶತಮಾನದ ಇತಿಹಾಸವಿರುವ ಮೈಸೂರು ವಿವಿಗೆ ತನ್ನದೆ ಇತಿಹಾಸವಿದ್ದು, ಇದರ ಘನತೆಯನ್ನು ಉಳಿಸಿ-ಬೆಳೆಸಬೇಕಾದ ಜವಾಬ್ದಾರಿ ನೂತನ ಕುಲಪತಿಗಳ ಮೇಲಿದೆ ಎಂದು ಹೇಳಿದರು.  

ಇದೇ ಸಂದರ್ಭದಲ್ಲಿ ಮಹಾರಾಜ ಎಜುಕೇಷನ್‌ ಟ್ರಸ್ಟ್‌ನಿಂದ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪೊ›.ಜಿ.ಹೇಮಂತ್‌ಕುಮಾರ್‌ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ತಮಗೆ ಉಡುಗೊರೆಯಾಗಿ ನೀಡಲಾದ ತಾಯಿಯ ಪ್ರತಿಮೆ ಕಂಡು ಭಾವುಕರಾದ ಹೇಮಂತ್‌ಕುಮಾರ್‌, ತಾಯಿಯೊಂದಿಗೆ ಕಳೆದ ದಿನಗಳನ್ನು ಸ್ಮರಿಸಿದರು. 

ಸಮಾರಂಭದಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಡಾ. ಶಾಂತಿವ್ರತಾನಂದಜೀ ಮಹಾರಾಜ್‌, ಮಹಾರಾಜ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಎಸ್‌.ಮುರಳಿ, ಗೋಪಾಲಸ್ವಾಮಿ ಶಿಶು ವಿಹಾರ ಸಂಸ್ಥೆ ಡಾ.ಎ.ಎಸ್‌.ಚಂದ್ರಶೇಖರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.