ದುಶ್ಚಟ ಮುಕ್ತರನ್ನಾಗಿಸಿದರೆ ರಾಮರಾಜ್ಯ ನಿರ್ಮಾಣ ಸಾಧ್ಯ

Team Udayavani, Jun 8, 2019, 3:00 AM IST

dushchata

ಮೈಸೂರು: ದುಶ್ಚಟ ಹಾಗೂ ಮಾದಕ ವಸ್ತುಗಳಿಂದ ಜನರು ದೂರ ಇರುವಂತೆ ಮಾಡಿ, ನಿಷ್ಕಲ್ಮಶ ಭಾವನೆಯಿಂದ ಕುಟುಂಬ ಹಾಗೂ ತನ್ನ ಪರಿಸರದಲ್ಲಿ ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಾತ್ರ ಗಾಂಧೀಜಿ ಕನಸಿನಂತೆ ರಾಮರಾಜ್ಯ ರೂಪಿಸಲು ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಪಿ.ಗಂಗಾಧರ ರೈ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ಕಚೇರಿಯಲ್ಲಿ ನಡೆದ ಅಖೀಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ಉದ್ಘಾಟಿಸಿ ಮಾತನಾಡಿದರು.

ಪ್ರೇರಕ ಶಕ್ತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್‌ ಪ್ರಾಯೋಜಕತ್ವದಲ್ಲಿ ಅಖೀಲ ಕರ್ನಾಟಕ ಜನ ಜಾಗೃತಿ ವೇದಿಕೆಯಿಂದ ಮೈಸೂರು ಜಿಲ್ಲೆಯಲ್ಲಿ 31ಮದ್ಯವರ್ಜನ ಶಿಬಿರಗಳನ್ನು ನಡೆಸಿ 3463 ಮದ್ಯವ್ಯಸನಿಗಳನ್ನು ಪಾನ ಮುಕ್ತರನ್ನಾಗಿಸಿದೆ. ಕುಟುಂಬ ಹಾಗೂ ಸಮುದಾಯದಲ್ಲಿ ನೆಮ್ಮದಿ ಜೀವನ ನಡೆಸಿಕೊಂಡು ಕುಟುಂಬಗಳ ಬಲವರ್ಧನೆಗೆ ಪ್ರೇರಕ ಶಕ್ತಿಯಾಗಿದ್ದಾರೆಂದರು.

ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಹಂದನಹಳ್ಳಿ ಸೋಮಶೇಖರ್‌ ಮಾತನಾಡಿ, ಯುವ ಪೀಳಿಗೆ ದುಶ್ಚಟ ಹಾಗೂ ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದು ಇವರಲ್ಲಿ ಜಾಗೃತಿಯನ್ನು ಮೂಡಿಸಬೇಕಿದೆ. ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಜಿಲ್ಲಾ ಜನ ಜಾಗೃತಿ ವೇದಿಕೆ ಸಜ್ಜಾಗಬೇಕೆಂದರು.

ವಿವಿಧ ಯೋಜನೆ: ಯೋಜನೆ ಜಿಲ್ಲಾ ನಿರ್ದೇಶಕ ವಿಜಯ್‌ಕುಮಾರ್‌ ನಾಗನಾಳ ಮಾತನಾಡಿ, 2019-20ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 6 ಮದ್ಯವರ್ಜನ ಶಿಬಿರಗಳು, 100 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳು, ನವಜೀವನ ಸಮಿತಿಗಳ ಬಲವರ್ಧನೆ, ನವಜೀವನ ಸಮಿತಿ ಸದಸ್ಯರಿಗೆ ಸ್ವ-ಉದ್ಯೋಗ ಮಾಡಲು ಯೋಜನೆಯಿಂದ ಶೇ.10ರಷ್ಟು ಒಬ್ಬ ಸದಸ್ಯರಿಗೆ 10 ಸಾವಿರ ರೂ. ವರೆಗೆ ಅನುದಾನ, ನವಜೀವನ ಸಮಿತಿ ಸದಸ್ಯರಿಗೆ ಸ್ವ ಸಹಾಯ ಸಂಘ ರಚಿಸಲು ಪ್ರೋತ್ಸಾಹ ನೀಡುವುದು.

ನವ ಜೀವನ ಸಮಿತಿಯ ಪೋಷಕರ ಸಭೆ ಹಾಗೂ ನವ ಜೀವನ ಸದಸ್ಯರಿಗೆ ಉಚಿತ ಸ್ವ-ಉದ್ಯೋಗ ತರಬೇತಿ ಒದಗಿಸಲು ಜಿಲ್ಲಾ ಜನಜಾಗೃತಿ ವೇದಿಕೆ ಮುಂದಾಗಿದೆ. ಈ ಕಾರ್ಯಕ್ರಮವನ್ನು ಪ್ರಸ್ತುತ ವರ್ಷದಲ್ಲಿ ಉತ್ತಮ ರೀತಿಯಲ್ಲಿ ಸಮುದಾಯಕ್ಕೆ ಒದಗಿಸಿಕೊಡುವ ಬಗ್ಗೆ ಜನಜಾಗೃತಿ ವೇದಿಕೆ ಸಮಿತಿ ಸದಸ್ಯರು ಪ್ರಯತ್ನಿಸಬೇಕೆಂದರು.

ಗೌರವ ಸಲಹೆಗಾರರಾದ ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಮಾದೇಗೌಡ, ಸಮಿತಿ ಸದಸ್ಯರಾದ ಕಿರಗಸೂರು ಶಂಕರ್‌, ವರದರಾಜು, ಮೂರ್ತಿ, ಕನ್ನಡ ಪ್ರಮೋದ್‌, ಶಕುಂತಲಾ, ಆರ್‌.ಗೋಪಾಲ್‌, ನಾಗರಾಜು, ಹೊನ್ನನಾಯಕ್‌, ಪ್ರಸನ್ನಕುಮಾರ್‌, ರಾಮೇಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಆನಂದ್‌.ಕೆ, ಸಂಜೀವನಾಯ್ಕ, ಯಶೋಧಶೆಟ್ಟಿ, ಗಾಯತ್ರಿ, ಆನಂದ್‌ಗೌಡ, ಶಶಿಧರ್‌, ಚಂದ್ರಶೇಖರ್‌ ಯು.ಎನ್‌., ಭಾಸ್ಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.