ಕೋಟೆ ಗಡಿಯಲ್ಲಿ ಮುಚ್ಚಿದ್ದ ಬಾರ್‌ ತೆರೆಯಲು ಪರಿಶೀಲನೆ


Team Udayavani, Sep 19, 2018, 11:53 AM IST

m4-kote.jpg

ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದಲ್ಲಿ ತಾತ್ಕಾಲಿಕವಾಗಿ ಮುಚ್ಚಿದ್ದ ಬಾರ್‌ಗಳನ್ನು ಮತ್ತೆ ತೆರೆಯಲು ಅನುಮತಿ ಕೋರಿ ಮಾಲಿಕರು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಬಕಾರಿ, ಪೊಲೀಸ್‌ ಹಾಗೂ ಅರಣ್ಯಾಧಿಕಾರಿಗಳ ತಂಡ ಬಾರ್‌ ತೆರೆಯುವ ಸ್ಥಳ ಪರಿಶೀಲಿಸಿದರು. 

ಹಲ ವರ್ಷಗಳ ಹಿಂದೆ ಮದ್ಯದಂಗಡಿ ತೆರೆದಿತ್ತು. ಕೆಲ ಅಡೆತಡೆಗಳಿಂದಾಗಿ ಅವುಗಳನ್ನು ಮುಚ್ಚಿಸಲಾಗಿತ್ತು. ಆದರೆ ಸರ್ಕಾರದ ಇತ್ತೀಚಿನ ಆದೇಶದನ್ವಯ ಮತ್ತೆ ಬಾರ್‌ ತೆರೆಯಲು ಅನುಮತಿ ಕೋರಿ ಮಾಲಿಕರು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಪರಿಶೀಲಿಸಿದರು.

ಈಗಾಗಲೇ ಡಿ.ಬಿ.ಕುಪ್ಪೆ ವ್ಯಾಪ್ತಿಯ ಹೊಸ ತಿಮ್ಮನಹಳ್ಳಿ, ಡಿ.ಬಿ.ಕುಪ್ಪೆ, ಮಚ್ಚಾರು ಸೇರಿ 3 ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಇನ್ನೂ ಈಗ ಪರಿಶೀಲನೆ ನಡೆಸುತ್ತಿರುವ ಮದ್ಯದಂಗಡಿಗಳು ಹಿಂದೆಯೇ ತೆರೆಯಲಾಗಿದ್ದು, ಕೆಲ ಕಾರಣಗಳಿಂದ ಬಾರ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಿಸಲಾಗಿತ್ತು.

ಹೊಸ ಆದೇಶ: ಕಳೆದ ಆ.31ರಲ್ಲಿ ರಾಜ್ಯ ಸರ್ಕಾರ 2011ರ ಜನಗಣತಿಯ ಅನ್ವಯ 5 ಸಾವಿರ ಜನಸಂಖ್ಯೆಗೂ ಹೆಚ್ಚಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿನಾಯಿತಿ ನೀಡಿ ಮದ್ಯದಂಗಡಿ ತೆರೆಯಬಹುದು ಎಂದು ಆದೇಶ ನೀಡಿದೆ.

ಮಾಲಿಕರ ಆರೋಪ: ಡಿ.ಬಿ.ಕುಪ್ಪೆ ಗಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 3 ಬಾರ್‌ಗಳ ಮಾಲಿಕರು ಮುಚ್ಚಿರುವ ಬಾರ್‌ಗಳನ್ನು ತೆರೆದರೆ ತಮ್ಮ ವ್ಯಾಪಾರಕ್ಕೆ ಹೊಡೆತ ಬೀಳುತ್ತದೆ ಎಂದು ಭಾವಿಸಿ ಕೆಲರನ್ನು ಎತ್ತಿಕಟ್ಟಿ  ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳಿಗೆ ಬಾರ್‌ ತೆರೆಯಲು ಅನುಮತಿ ನೀಡಬೇಡಿ ಎಂದು ಮನವಿ ಕೊಡಿಸುತ್ತಿದ್ದಾರೆ ಎಂದು ಬಾರ್‌ ಮತ್ತೆ  ತೆರೆಯಲು ಉದ್ದೇಶಿಸಿರುವ ಬಾರ್‌ ಮಾಲಿಕರು ಆರೋಪಿಸಿದ್ದಾರೆ.

ಮನವಿ ಸ್ವೀಕರಿಸಿದ ಮಾತನಾಡಿದ ಅಧಿಕಾರಿಗಳು, ಹಿಂದೆ ಮುಚ್ಚಿಸಿದ್ದ ಬಾರ್‌ಗಳನ್ನು ಸರ್ಕಾರದ ಹೊಸ ಆದೇಶದಂತೆ ಮತ್ತೆ ತೆರೆಯಲು ಬಾರ್‌ ಮಾಲಿಕರು ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಮೇಲಧಿಕಾರಿಗಳ ಆದೇಶದಂತೆ ಸ್ಥಳ ಪರಿಶೀಲನೆ ನಡೆಸಿದ್ದೇವೆ. ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಂಡದಲ್ಲಿ ಡಿವೈಎಸ್‌ಪಿ ಭಾಸ್ಕರ್‌ ರೈ, ಅಬಕಾರಿ ಡಿವೈಎಸ್‌ಪಿ ಶಿವಪ್ರಸಾದ್‌, ಡಿ.ಬಿ.ಕುಪ್ಪೆ ಅರಣ್ಯ ಇಲಾಖೆಯ ಆರ್‌ಎಫ್‌ಒ ಸುಬ್ರಹ್ಮಣ್ಯ, ಅಬಕಾರಿ ನಿರೀಕ್ಷಕ ಆರ್‌.ಬಿ.ಹೊಸಳ್ಳಿ ಇನ್ನಿತರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.