ಮತ ಮಾರಾಟಕ್ಕೆ ಇಲ್ಲ ಎಂಬ ತತ್ವಕ್ಕೆ ಮತದಾರರು ಬದ್ದರಾಗಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

Team Udayavani, Jan 19, 2023, 4:06 PM IST

 ಮತ ಮಾರಾಟಕ್ಕೆ ಇಲ್ಲ ಎಂಬ ತತ್ವಕ್ಕೆ ಮತದಾರರು ಬದ್ದರಾಗಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಮೈಸೂರು: ಯುವಕರು ಪ್ರಜಾಪ್ರಭುತ್ವ ವ್ಯವಸ್ಥೆಯ ಕಾವಲುಗಾರರಾಗಬೇಕು. ಪ್ರತಿಯೊಬ್ಬ ಮತದಾರರು ನನ್ನ ಮತ ಮಾರಾಟಕ್ಕೆ ಇಲ್ಲ ಎಂಬ ತತ್ವಕ್ಕೆ ಅನುಗುಣವಾಗಿ ಮತ ಚಲಾಯಿಸಬೇಕು ಆಗ ಮಾತ್ರ ಚುನಾವಣೆ ವ್ಯವಸ್ಥೆಯನ್ನು ಸುಧಾರಣೆ ಮಾಡಲು ಸಾಧ್ಯ ಎಂದು ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.

ಇಲ್ಲಿನ ಕಲಾಮಂದಿರದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಕುರಿತು ಗುರುವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೈಸೂರು ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳವಾಗಿದೆ. ಇಡೀ ಜಗತ್ತಿಗೆ ಪ್ರಜಾ ಪ್ರಭುತ್ವದ ಬುನಾದಿಯನ್ನು ಬಸವಣ್ಣನವರ ಅನುಭವ ಮಂಟಪ ಹಾಕಿಕೊಟ್ಟಿತು, 1881 ರಲ್ಲೆ ಮೈಸೂರು ಮಹಾರಾಜರು ಪ್ರಜಾ ಪ್ರಭುತ್ವದ ಬುನಾದಿ ಹಾಕಿಕೊಟ್ಟರು ಎಂದರು.

ನಮಗೆ ಸ್ವಾತಂತ್ರ್ಯ ಬಂದು 75 ವರ್ಷ ಆಯಿತು. ಸ್ವಾತಂತ್ರ್ಯ ತಂದು ಕೊಡುವಲ್ಲಿ ಮಹನೀಯರ ಸಾಧನೆ ಅಪಾರ. ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ ಕೊರತೆ ಇತ್ತು. ವಿದೇಶ ದಿಂದ ಆಹಾರ ತರಿಸಲಾಗುತ್ತಿತ್ತು. ಆದರೆ ಇಂದು ಆಹಾರದ ಸ್ವಾವಲಂಬನೆ ಸಾಧಿಸಿದ್ದೇವೆ. ಇದಕ್ಕೆ ಕಾರಣ ನಮ್ಮ ರೈತರು. ಸ್ವಾತಂತ್ರ್ಯ ಬಂದಾಗ 299 ರೂ ತಲಾ ಆದಾಯ ಇತ್ತು ಇಂದು  1,18, 235 ಇದೆ. ಇಂದು 35 ಉಪಗ್ರಹಗಳನ್ನು ಏಕಕಾಲದಲ್ಲಿ ಹಾರಿಸುವ ಸಾಮರ್ಥ್ಯ ಹೊಂದಿದ್ದೇವೆ. ನಮ್ಮ ದೇಶದ ಸೈನ್ಯ ಬಲಿಷ್ಟ ವಾಗಿದೆ. ಆರೋಗ್ಯ ಕ್ಷೇತ್ರ ಉತ್ತಮವಾಗಿದ್ದು, ಕೋವಿಡ್ ಸಂದರ್ಭದಲ್ಲಿ ಲಸಿಕೆ ಕಂಡು ಹಿಡಿದು ನಮ್ಮ ದೇಶದ ಪ್ರಜೆಗಳಿಗೆ ಮಾತ್ರವಲ್ಲದೆ ಹೊರ ದೇಶಗಳಿಗೂ ಲಸಿಕೆ ಪೂರೈಕೆ ಮಾಡಲಾಗಿದೆ. ಜಿ20 ದೇಶಗಳ ಅಧ್ಯಕ್ಷತೆ ವಹಿಸಿ ಕೊಳ್ಳುವ ಕಾಲ ಬಂದಿದೆ ಎಂದರು.

ನಮ್ಮ ಸಂವಿಧಾನ ಜಗತ್ತಿನ ಅತಿ ಶ್ರೇಷ್ಠ ಸಂವಿಧಾನ. ಸಾಮಾನ್ಯ ಪ್ರಜೆ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿ ಆಗಿರುವುದು ಇದಕ್ಕೆ ಕಾರಣ ನಮ್ಮ ಸಂವಿದಾನ ಎಂದರು.

ಚುನಾವಣೆಗಳು ಇಂದು ಹಣ, ಹೆಂಡದ ಮೇಲೆ ನಡೆಯುತ್ತಿವೆ. ಇದಕ್ಕೆ ಸಂವಿಧಾನಬದ್ಧ ಸಂಸ್ಥೆಗಳು ಹಾಗೂ ಜನರು ಕಾರಣರಾಗಿದ್ದಾರೆ. ಕಾರ್ಯಾಂಗದಲ್ಲಿ ಇರುವ ಜಟಿಲತೆ ಹಾಗೂ ಅಧಿಕಾರಿಗಳ ಕಾರ್ಯವೈಖರಿಯಿಂದ ಜನರು ತತ್ತರಿಸುತ್ತಿದ್ದಾರೆ. ಸರ್ಕಾರದ 3 ಅಂಗಗಳಲ್ಲಿಯೂ ಲೋಪಗಳು ಕಂಡುಬರುತ್ತಿವೆ.  ಸಮಾಜದಲ್ಲಿ ಕಲಬೆರಕೆಯ ಆಹಾರಗಳು ಕಂಡುಬರುತ್ತಿವೆ. ಕೇವಲ ಹಣಗಳಿಕೆಯ ಏಕಮೇವ ಉದ್ದೇಶ ದಿಂದ ಸಮಾಜದ ವವಸ್ಥೆಯನ್ನು ಹಾಳುಮಾಡಿದ್ದೇವೆ. ರಾಜಕಾರಣಿಗಳ ಇಂದಿನ ಮನಸ್ಥಿಗೆ ಮತದಾರರೇ ಕಾರಣ, ರಾಜಕಾರಣಿಗಳ ಮತ ಕೇಳಲು ಬಂದಾಗ ಮೂಲ ಸೌಕರ್ಯಗಳನ್ನು ಕೇಳುವ ಬದಲು, ಆಸೆ ಆಮಿಷಗಳಿಗೆ ಒಳಗಾಗುತ್ತಿರಿ ಎಂದರು.

ಮತದಾರರು ಮತವನ್ನು ಮಾರಾಟಕ್ಕೆ ಇಡಬೇಡಿ. ಉತ್ತಮ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯ ಮತವನ್ನು ಚಲಾವಣೆ ಮಾಡಿ. ಚುನಾವಣಾ ಆಯೋಗ ಸ್ವತಂತ್ರ ಸಂವಿಧಾನಬದ್ಧ ಸಂಸ್ಥೆ, ಇದು ನಿರಂತರವಾಗಿ ಚುನಾವಣೆ ವ್ಯವಸ್ಥೆಯನ್ನು ಸುಧಾರಣೆ ಮಾಡಬೇಕು. ಚುನಾವಣಾ ಆಯೋಗದ ಜವಾಬ್ಧಾರಿ ಹೆಚ್ಚಿದೆ ಎಂದರು.

ಶೆಡ್ಯೂಲ್ 10 ನ್ನು ಸಂವಿಧಾನದಲ್ಲಿ ಜಾರಿಗೆ ತಂದು ಪಕ್ಷಾಂತರ ನಿಷೇದ ಕಾಯ್ದೆ ಜಾರಿಗೆ ತಂದು ಉತ್ತಮ ಕಾರ್ಯ ಮಾಡಲಾಗಿದೆ. ಮತದಾನದಲ್ಲಿ ನೋಟಾ ಹಾಕಲು ಅಧಿಕಾರ ನೀಡಲಾಗಿದೆ. ವಿವಿಧ ಸಮಿತಿಗಳು ಚುನಾವಣಾ ಸುಧರಣೆಗೆ ಹಲವು ವರದಿಗಳನ್ನು ನೀಡಿದ್ದು ಅವನ್ನು ಅಳವಡಿಸಿಕೊಳ್ಳಲಾಗಿದೆ ಎಂದರು.

ನನ್ನ ಮತ ಮಾರಾಟಕ್ಕೆ ಇಲ್ಲ ಎಂಬ ತತ್ವಕ್ಕೆ ಪ್ರತಿಯೊಬ್ಬರೂ ಬದ್ಧವಾಗಿರಬೇಕು. ಇದು ಅಭಿಯಾನದ ರೀತಿ ಜಾರಿಯಾಗಬೇಕು. ಹಿರಿಯರು ಮುಕ್ತವಾಗಿ ಯುವಕರಿಗೆ ಸಲಹೆ ಸೂಚನೆಗಳನ್ನು ನೀಡಬೇಕು. ಪಿಐಎಲ್ ಕಾರಣದಿಂದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಧಾರಣೆಗಳು ಆಗಿವೆ. ತ್ವರಿತವಾಗಿ ನ್ಯಾಯ ದೊರೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ  ನಾಗೇಂದ್ರ, ತನ್ವೀರ್ ಸೇಠ್, ಮೇಯರ್  ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪೂರ್ಣಿಮಾ, ಉಪ ಮೇಯರ್ ರೂಪಾ, ಮಹಾ ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.