ವಾರೆಂಟ್‌ದಾರನ 2ನೇ ಪತ್ನಿ, ಮಕ್ಕಳ ಮೇಲೆ ಪೊಲೀಸರ ಹಲ್ಲೆ: ಆರೋಪ


Team Udayavani, Feb 28, 2017, 1:12 PM IST

mys6.jpg

ಎಚ್‌.ಡಿ.ಕೋಟೆ: ಜೀವನಾಂಶ ಪ್ರಕರಣದಲ್ಲಿ ವಿಚಾರಣೆಗೆ ಪದೇಪದೆ ಗೈರುಹಾಜರಾಗುತ್ತಿದ್ದ ವಾರೆಂಟ್‌ದಾರನ ಬಂಧನಕ್ಕೆ ಹೋಗಿದ್ದ ಪೊಲೀಸರು ವಾರೆಂಟ್‌ದಾರನ 2ನೇ ಪತ್ನಿ ಹಾಗೂ ಆಕೆಯ ಇಬ್ಬರು ಪುತ್ರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರಿಂದ ಹಲ್ಲೆಗೊಳಗಾಗಿ ದ್ದಾರೆ ಎನ್ನಲಾದ ತಾಲೂಕಿನ ಆಲನಹಳ್ಳಿ ಗ್ರಾಮದ ಚೌಡಮ್ಮ ಈಕೆಯ ಪುತ್ರರಾದ ಸ್ವಾಮಿನಾಯ್ಕ ಮತ್ತು ಪ್ರಕಾಶ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಏನದು ಘಟನೆ: ಆಲನಹಳ್ಳಿ ಗ್ರಾಮದ ಕರಿನಾಯ್ಕ ತನ್ನ ಮೊದಲ ಪತ್ನಿ ಸಣ್ಣದೇವಮ್ಮನಿಂದ ದೂರಾಗಿ ಚೌಡಮ್ಮ ಎಂಬುವವರೊಂದಿಗೆ ಜೀವನ ನಡೆಸುತ್ತಿದ್ದರು. ಪತಿಯ ವಿರುದ್ಧ ನ್ಯಾಯಾಲಯದ ಮೊರೆ ಹೋದ ಮೊದಲ ಪತ್ನಿ ಸಣ್ಣದೇವಮ್ಮ ಜೀವನಾಂಶ ಕೊಡಿಸುವಂತೆ ನ್ಯಾಯಾಲಯದಲ್ಲಿ ದೂರು ದಾಖಲಿ ಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇಪದೆ ವಿಚಾರಣೆಗೆ ಗೈರುಹಾಜರಾಗುತ್ತಿದ್ದ ಕರಿನಾಯ್ಕನನ್ನು ಬಂಧಿಸಿ ಕರೆತರುವಂತೆ ನ್ಯಾಯಾಲಯ ವಾರಂಟ್‌ ಜಾರಿ ಮಾಡಿ ಪೊಲೀಸರಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರಿನಾಯ್ಕನ ಬಂಧನಕ್ಕಾಗಿ ಪೊಲೀಸರು ಭಾನುವಾರ ತಡರಾತ್ರಿ ಆಲನಹಳ್ಳಿ ಕರಿನಾಯ್ಕನ ಮನೆಯ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಈ ಸಂದರ್ಭದಲ್ಲಿ ಚೌಡಮ್ಮ ಮತ್ತು ಮಕ್ಕಳಾದ ಸ್ವಾಮಿನಾಯ್ಕ ಹಾಗೂ ಪ್ರಕಾಶ ಮೂವರ ಮೇಲೆ ಪೊಲೀಸರು ಲಾಠಿ ಹಾಗೂ ಬೂಟಿನಿಂದ ಹೆಂಗಸು ಅನ್ನುವ ಅನುಕಂಪ ಇಲ್ಲದೆ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿ ಎಂದು ಮೂರು ಮಂದಿಗೂ ಲಾಠಿಯಿಂದ ಹಲ್ಲೆ ನಡೆಸಿರುವ ಗಾಯಗಳ ಗುರುತುಗಳಿವೆ. ಪೊಲೀಸರ ಹಲ್ಲೆಯಿಂದ ಗಾಯಗೊಂಡ ಮೂವರು ಘಟನೆ ಬಳಿಕ ಆಂಬ್ಯುಲೆನ್ಸ್‌ನಲ್ಲಿ ತಾಲೂಕು ಕೇಂದ್ರ ಸ್ಥಾನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಶಾಸಕರಿಂದ ಧರಣಿ: ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಚಿಕ್ಕಣ್ಣ ಮತ್ತವರ ಬೆಂಬಲಿಗರಾದ ಚಾಕಹಳ್ಳಿ ಕೃಷ್ಣ, ಪ್ರಕಾಶ, ಸಿ.ಪಿ.ಎಂ. ಶಿವಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು ಗಾಯಾಳುಗಳಿಂದ ಮಾಹಿತಿ ಪಡೆದು ಕೊಂಡರು. ಬಳಿಕ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಆಸ್ಪತ್ರೆ ಎದುರಿನಲ್ಲಿ ರಸ್ತೆತಡೆ ನಡೆಸಿದರು.

ಪರಿಣಾಮವಾಗಿ ಮುಕ್ಕಾಲು ತಾಸಿಗೂ ಅಧಿಕ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು. ಬಳಿಕ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಎಚ್‌.ಡಿ.ಕೋಟೆ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಅಶೋಕ್‌ ಘಟನೆ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರು. ಈ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಹಿರಿಯ ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.