ಭೇರ್ಯ ಭಾಗದ 22 ಕೆರೆಗಳಿಗೆ ನೀರು: ಸಾ.ರಾ.ಮಹೇಶ್‌


Team Udayavani, Aug 28, 2017, 12:06 PM IST

mys5.jpg

ಭೇರ್ಯ: ಮುಕ್ಕನಹಳ್ಳಿ ಕೆರೆಯಿಂದ ಭೇರ್ಯ ಭಾಗದ 22 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶಿತ ಏತನೀರಾವರಿ ಯೋಜನೆಗೆ ಮುಂದಿನ ಹದಿನೈದು ದಿನದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್‌ ತಿಳಿಸಿದರು.

ಸಮೀಪದ ಕುರುಬಹಳ್ಳಿ ಗ್ರಾಮದಲ್ಲಿ 4 ಲಕ್ಷ ರೂ.ವೆಚ್ಚದ ನೂತನ ಶ್ರೀಗಣಪತಿ ದೇವಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಈ ಯೋಜನೆಗೆ 6.50 ಕೋಟಿ ರೂ.ಬಿಡುಗಡೆಯಾಗಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು ಡಿಸೆಂಬರ್‌ ವೇಳೆಗೆ ಕಾಮಗಾರಿ ಮುಗಿಯಲಿದೆ ಎಂದು ಹೇಳಿದರು.

ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ತಾನು ನಡೆಸಿದ ಪ್ರತಿಭಟನಾ ಧರಣಿಗೆ ಮಣಿದ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಈಗಾಗಲೇ ಹಾರಂಗಿ, ಹೇಮಾವತಿ ಜಲಾಶಯದ ನಾಲೆಗಳಿಂದ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲಾಗುತ್ತಿದೆ ಎಂದು ಹೇಳಿದರು. 

ತರಾಟೆ: ಹೇಮಾವತಿ ಎಡದಂಡೆ ನಾಲೆಯಿಂದ ಕೃಷ್ಣರಾಜನಗರ ತಾಲೂಕಿನ ಗುಳುವಿನಅತ್ತಿಗುಪ್ಪೆ ಭಾಗದ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುತ್ತಿಲ್ಲ ಎಂಬ ರೈತರ ದೂರಿನ ಹಿನ್ನೆಲೆಯಲ್ಲಿ  ಹೇಮಾವತಿ ನಾಲಾ ವಿಭಾಗದ ಇಇ ಮೋಹನ್‌ರಾಜ್‌ ಅರಸ್‌ರನ್ನು ದೂರಾವಾಣಿ ಮೂಲಕ ಶಾಸಕರು ತರಾಟೆಗೆ ತೆಗೆದುಕೊಂಡರು.

ಜಲಾಶಯದ ಕೊನೆಭಾಗದಲ್ಲಿರುವ  ತಾಲೂಕಿನ ಕೆರೆಗಳನ್ನು ಮೊದಲು ತುಂಬಿಸಿದ ಬಳಿಕವಷ್ಟೇ ನಿಮ್ಮ ಮಂತ್ರಿ ವ್ಯಾಪ್ತಿಯ ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಕೆರೆಗಳನ್ನು ತುಂಬಿಸಬೇಕು ಎಂದು ಸೂಚಿಸಿದರು. ಬಳಿಕ ಶಾಸಕರು 1.50 ಕೋಟಿ ರೂ.ವೆಚ್ಚದ ಕುರುಬಹಳ್ಳಿ ಗೇಟ್‌-ಮೇಲೂರು ರಸ್ತೆ ಹಾಗೂ ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಡಿ ಮೇಲೂರು-ಸಂಕನಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಎ.ಟಿ.ಸೋಮಶೇಖರ್‌, ಎಪಿಎಂಸಿ ನಿರ್ದೇಶಕ ಕುಪ್ಪಳ್ಳಿ ಸೋಮು, ತಾಪಂ ಮಾಜಿ ಸದಸ್ಯ ಕೃಷ್ಣೇಗೌಡ, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಮುಖಂಡರಾದ ಚನ್ನಪ್ಪಾಜಿ, ಗೌತಮ್‌, ಲೋಕೋಪಯೋಗಿ ಎಇಇ ಪ್ರಸಾದ್‌, ಎಇ ಮುದ್ದಪ್ಪ, ಗ್ರಾಪಂ ಸದಸ್ಯೆ ಮಂಗಳಮ್ಮ, ಮಮತಾ, ಜೆಡಿಎಸ್‌ ಮುಖಂಡ ನರೇಂದ್ರ, ರಾಮಕೃಷ್ಣ, ನಾಟನಹಳ್ಳಿ ಮಂಜು, ಮೇಲೂರು ನಾರಾಯಣ್‌, ಕುರುಬಹಳ್ಳಿ ಮೇಲೂರು ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.