ನಮ್ಮಲ್ಲಿ ಇಂದಿಗೂ ಅಸ್ಪೃಶ್ಯ, ಸ್ಪೃಶ್ಯ ಭಾರತವಿದೆ

Team Udayavani, Aug 11, 2018, 12:09 PM IST

m2-deshadalli.jpg

ಮೈಸೂರು: ಇಂದಿಗೂ ದಲಿತರು ತಮ್ಮ ಕೇರಿಬಿಟ್ಟು ಹೊರಬರುವುದನ್ನು ಸಹಿಸಿದ ಮನಸ್ಥಿತಿ ಜೀವಂತವಾಗಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ಆತಂಕ ವ್ಯಕ್ತಪಡಿಸಿದರು. 

ಪ್ರೊ.ಅರವಿಂದ ಮಾಲಗತ್ತಿ ಅಭಿನಂದನಾ ಸಮಿತಿ ವತಿಯಿಂದ ಮೈಸೂರು ವಿವಿ ಮಾನಸಗಂಗೋತ್ರಿಯ ರಾಣಿಬಹದ್ದೂರ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರೊ.ಅರವಿಂದ ಮಾಲಗತ್ತಿ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಮ್ಮಲ್ಲಿ ಇಂದಿಗೂ ಅಸ್ಪೃಶ್ಯ ಭಾರತ’ ಹಾಗೂ “ಸ್ಪೃಶ್ಯ ಭಾರತ’ ಎಂಬ ಎರಡು ದೇಶಗಳಿವೆ. ಇದರಿಂದಾಗಿ 21ನೇ ಶತಮಾನದಲ್ಲೂ ದಲಿತರ ಕೇರಿ, ಓಣಿಗಳು ಹಾಗೆ ಉಳಿದುಕೊಂಡಿದ್ದು, ಈ ಕೇರಿಗಳಲ್ಲಿ ಅನೇಕ ಪ್ರತಿಭಾವಂತರಿದ್ದಾರೆ ಎಂದರು.

ಆದರೆ ಅನೇಕ ದಲಿತರು ಅಕ್ಷರ ಬಲದಿಂದ ಮಾತನಾಡಲು ಶುರು ಮಾಡಿದ್ದು, ಇಂದಿನ ಜಾಗತೀಕರಣದ ಪ್ರಭಾವದಿಂದ ದಲಿತರನ್ನು ಸ್ವೀಕಾರ ಮಾಡುವ ಮನಸುಗಳೂ ಸೃಷ್ಟಿಯಾಗಿವೆ. ಹೀಗಾಗಿ ದಲಿತರ ಬಗ್ಗೆ ಹಿಂದಿನಷ್ಟು ತಿರಸ್ಕಾರ, ವಿರೋಧಗಳು ವ್ಯಕ್ತವಾಗದ ಮಟ್ಟಿಗೆ ಮನಸ್ಸುಗಳು ಬದಲಾವಣೆಯಾಗಿವೆ ಎಂದು ತಿಳಿಸಿದರು. 

ಶೋಷಿತರು, ಅಲ್ಪಸಂಖ್ಯಾತರು, ಹಿಂದುಳಿದವರೆಲ್ಲ ದಲಿತರು ಎಂದು ಸಾಹಿತಿ ಪ್ರೊ.ಸಿ.ಪಿ.ಕೃಷ್ಣಕುಮಾರ್‌ ಹೇಳಿದ್ದಾರೆ. ಆದರೆ ಹಿಂದುಳಿದವರು, ಶೋಷಿತರು ಯಾರು ದಲಿತರಲ್ಲ, ಬದಲಿಗೆ ಸಮಾಜದಲ್ಲಿರುವ ಅಸ್ಪೃಶ್ಯರು ಮಾತ್ರವೇ ದಲಿತರಾಗಿದ್ದಾರೆ.

ಇವರು ಆರ್ಥಿಕ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರಣದಿಂದ ಇಂದಿಗೂ ಊರ ಹೊರಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹೀಗಾಗಿ ಊರು ಕೇರಿ ಎಂಬ ಬೇಧ ಭಾವ ದೂರವಾಗಿ, ದಲಿತ ಕೇರಿಯಲ್ಲಿರುವವರು ಊರಿನ ಮಧ್ಯಭಾಗದಲ್ಲಿ ನೆಲಸುವಂತಾಗಬೇಕು. ಈ ಮೂಲಕ ಊರನ್ನು ಬದಲಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್‌ ಮಾತನಾಡಿ, ಅರವಿಂದ ಮಾಲಗತ್ತಿ ಅವರು ಒಬ್ಬ ಸೀಮಾತೀತ ಲೇಖಕರಾಗಿದ್ದು, ಅವರ ಸಾಹಿತ್ಯದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಅಂಶಗಳಿವೆ. ಇಂದು ಆಧುನಿಕ ಸಾಹಿತ್ಯ ತಿರುವಿನಲ್ಲಿದ್ದು, ಈ ಬದಲಾವಣೆಗೆ ಕಾರಣರಾದವರ ಸಾಲಿನಲ್ಲಿ ಅರವಿಂದ ಮಾಲಗತ್ತಿ ಮುಂಚೂಣಿಯಲ್ಲಿದ್ದಾರೆ. ಅವರು “ಮೂಕನಿಗೆ ಬಾಯಿ ಬಂದಾಗ’ ಎಂಬ ಕೃತಿ ಬರೆದ ಸಂದರ್ಭದಲ್ಲಿ ನಾನು ಹೇಳಿದ ಮಾತುಗಳು ಸತ್ಯವಾಗಿವೆ.

ಮಾಲಗತ್ತಿ ಅವರ ಈ ಕೃತಿಯು ಬಂದ್‌ ಆಗಿದ್ದ ಬಾಯಿಗಳನ್ನು ತೆರೆಸಿ, ಮೂಕರಿಗೆ ನಾಲಗೆ ಕೊಟ್ಟಿದೆ. ಹೀಗಾಗಿ ಮಾಲಗತ್ತಿ ಅವರನ್ನು ಕನ್ನಡದ ದಲಿತ ಸಾಹಿತ್ಯದ ದೈತ್ಯ ಎಂದು ಕರೆಯಬಹುದಾಗಿದೆ. ದಲಿತ ಎನ್ನುವುದು ಒಂದು ಅವಸ್ಥೆ, ಶೋಷಿತರು, ದಮನಿತರು, ಅವಕಾಶ ವಂಚಿತರು ಎಲ್ಲರೂ ದಲಿತರೆ ಎಂದು ಪ್ರತಿಪಾದಿಸಿದರು. 

ಡಾ.ಅರವಿಂದ ಮಾಲಗತ್ತಿ ಅವರ ಕವಿತೆಗಳ ಗಾಯನ, ನೃತ್ಯ ರೂಪಕ “ಗಿಳಿ ಕುಂತು ಕೇಳಾವೋ’ ಧ್ವನಿ ಮುದ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಂಗೀತ ನಿರ್ದೇಶಕ ಹಂಸಲೇಖ, ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಟಿ.ಕೆ.ಉಮೇಶ್‌, ಕುಲಸಚಿವ ಪ್ರೊ.ಆರ್‌.ರಾಜಣ್ಣ, ಪ್ರೊ.ಅರವಿಂದ ಮಾಲಗತ್ತಿ ಅಭಿನಂದನಾ ಸಮಿತಿ ಕಾರ್ಯಾಧ್ಯಕ್ಷ$ಪ್ರೊ.ಎನ್‌.ಎಂ.ತಳವಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.