ವಿವಿಧ ಬೇಡಿಕೆ ಈಡೇರಿಕೆಗಾಗಿ ಪೊರಕೆ ಚಳವಳಿ


Team Udayavani, May 26, 2017, 12:40 PM IST

mys2.jpg

ಮೈಸೂರು: ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕ ಮಹಾಸಂಘ‌ದ ಸದಸ್ಯರು ಗುರುವಾರ ನಗರದಲ್ಲಿ ಪೊರಕೆ ಚಳವಳಿ ನಡೆಸಿದರು.

2016ರಲ್ಲಿ ರಾಜ್ಯ ಸಚಿವ ಸಂಪುಟ ಸಬೆಯಲ್ಲಿ ಚರ್ಚಿಸಿ 2017ರ ಮಾರ್ಚ್‌ ತಿಂಗಳೊಳಗೆ ವಿಶೇಷ ನೇಮಕಾತಿ ನಿಯಮ ರೂಪಿಸಿ ಎಲ್ಲಾ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲು ನಿರ್ಧರಿಸಿತ್ತು. ಆದರೆ ಇದುವರೆಗೂ ಯಾವುದೇ ನಿರ್ಧಾರ‌ ಕೈಗೊಳ್ಳದಿರುವುದು ಖಂಡನೀಯ ಎಂದು ಆರೋಪಿಸಿ ಪೊರಕೆ ಚಳವಳಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಪೊರಕೆ ಚಳವಳಿ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ಸರ್ಕಾರ ನಾಲ್ಕು ವರ್ಷಗಳಿಂದ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಎಲ್ಲಾ ಪೌರಕಾರ್ಮಿಕರನ್ನು ಕಾಯಂ ಮಾಡುವುದಾಗಿ ನೀಡಿರುವ ಆಶ್ವಾಸನೆ ಅನುಷ್ಠಾನಕ್ಕೆ ತರಬೇಕು.

ಮುಂದಿನ 15 ದಿನಗಳೊಳಗೆ ರಾಜ್ಯ ಸರ್ಕಾರ ಸಚಿವ ಸಂಪುಟದ ತೀರ್ಮಾನದಂತೆ ಗುತ್ತಿಗೆ ಪದ್ಧತಿ ರದ್ದು ಮಾಡದಿದ್ದಲ್ಲಿ ಜೂನ್‌ 12ರಿಂದ ರಾಜ್ಯಾದ್ಯಂತ ಸ್ವತ್ಛತಾ ಕಾರ್ಯ ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದರು. ಇದಕ್ಕೂ ಮುನ್ನ ನಗರದ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪೌರಕಾರ್ಮಿಕರು,  ನಂತರ ಸಯ್ನಾಜಿರಾವ್‌ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.

ರಾಜ್ಯ ನಗರ ಪಾಲಿಕೆ, ನಗರಸಬೆ, ಪುರಸಭೆಗಳ ಪೌರಕಾರ್ಮಿಕ ಮಹಾಸಂಘದ ಉನ್ನತ ಸಮಿತಿ ಅಧ್ಯಕ್ಷ ಎನ್‌.ಮಾರ, ಪ್ರಮುಖರಾದ ಟಿ. ಶ್ರೀನಿವಾಸ್‌, ಎಸ್‌.ಮುರಗೇಶ್‌, ನರಸಿಂಹ, ಆರ್‌.ವಿಜಯ್‌, ಅರುಣ್‌ಕುಮಾರ್‌, ಕುಮಾರಸ್ವಾಮಿ, ಕೆ.ಪಳನಿ, ಎಂ.ರಾಜೀವ್‌, ಎನ್‌.ಗಣೇಶ್‌, ಎಂ.ಮಹದೇವು, ಧನರಾಜ್‌, ಜಿ.ಮಹದೇವ, ಅಶೋಕ್‌ ಇತರರು ಇದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.