ಮೈಕೊರೆಯುವ ಮಾಗಿ ಚಳಿ ಆರಂಭ

ಜಿಲ್ಲೆಯಲ್ಲಿ ಉಷ್ಣಾಂಶ ತೀವ್ರ ಇಳಿಕೆ, ಭಾನುವಾರ 14 ಡಿಗ್ರಿ ಸೆಲ್ಸಿಯಸ್‌ ದಾಖಲು

Team Udayavani, Nov 23, 2020, 4:12 PM IST

ಮೈಕೊರೆಯುವ ಮಾಗಿ ಚಳಿ ಆರಂಭ

ಮೈಸೂರು: ಮಳೆಗಾಲ ಕಳೆದು ಮೈ ಕೊರೆಯುವ ಮಾಗಿಯ ಚಳಿ ಎಲ್ಲೆಡೆ ಆರಂಭವಾಗಿದ್ದು, ಜನರು ಚಳಿಯಿಂದ ರಕ್ಷಣೆ ‌ ಪಡೆಯಲು ಬೆಚ್ಚನೆ ಉಡುಪುಗಳ ಮೊರೆ ಹೋಗಿದ್ದಾರೆ.

ಮುಂಜಾನೆ ಸೂರ್ಯ ನೆತ್ತಿಗೆ ಬಂದರೂ ಚಳಿ ಇರುವುದರಿಂದ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಜೊತೆಗೆ ಸಂಜೆಯಾಗುತ್ತಿದ್ದಂತೆ ‌ ಶೀತಗಾಳಿಯೊಂದಿಗೆ ನಿಧಾನವಾಗಿ ಮೈ ಕೊರೆಯುವ ಚಳಿ ಶುರುವಾಗುತ್ತಿದೆ.ಹಗಲಿನಲ್ಲಿ ಸುಡುವ ಬಿಸಿಲು, ರಾತ್ರಿ ಮೈ ಕೊರೆಯುವ ಚಳಿ ಆವರಿಸುತ್ತದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮಾಗಿಯ ಚಳಿ ತೀವ್ರತೆ ಹೆಚ್ಚಿದೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಚಳಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿಮತ್ತಷ್ಟು ಹೆಚ್ಚಾಗಲಿದೆ. ನಗರದಲ್ಲಿ ವಾರದ ಹಿಂದೆ ಗರಿಷ್ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಭಾನುವಾರ ನಗರ ಪ್ರದೇಶದಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇನ್ನು ಗ್ರಾಮಾಂತರ ಭಾಗದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಜನರುಸೂರ್ಯನ ಕಿರಣಗಳು ಬೀಳುವವರೆಗೂ ಮನೆಯಿಂದ ಹೊರಬರುವುದಕ್ಕೆ ಹಿಂದೇಟು ಹಾಕುವಂತಾಗಿದೆ.

ಬೆಚ್ಚನೆ ಉಡುಪುಗಳಿಗೆ ಹೆಚ್ಚಿದ ಬೇಡಿಕೆ: ಮೈ ಕೊರೆಯುವ ಚಳಿಗೆ ತತ್ತರಿಸಿರುವ ಜನರು ಬೆಚ್ಚನೆಯ ಉಡುಪುಗಳಿಗೆ ಮೊರೆ ಹೋಗಿದ್ದಾರೆ. ಜನರು ಸ್ವೆಟರ್‌, ಜಾಕೆಟ್‌, ಶಾಲು, ಕಾಲು ಚೀಲ, ಕೈ ಚೀಲ, ಟೋಪಿ, ಕಿವಿ ಮುಚ್ಚುವ ಬಟ್ಟೆ ಸೇರಿ ದಪ್ಪನೆಯ ಹೊದಿಕೆಗಳ ಖರೀದಿಗೆ ಮುಂದಾಗಿದ್ದು, ನಗರದಲ್ಲಿ ಈಗ ಬೆಚ್ಚನೆಯ ಉಡುಪುಗಳಿಗೆ ಬೇಡಿಕೆ ಬಂದಿದೆ. ಜೊತೆಗೆ ಇವುಗಳ ಬೆಲೆಯೂ ತುಸು ಏರಿಕೆ ಕಂಡಿದೆ.

ಮಹಿಳೆಯರಿಗಾಗಿ ಚಳಿಗಾಲದ ಫ್ಯಾಷನ್‌ ಉಡುಪುಗಳು ಸಹ ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ನಗರದ ಪ್ರಮುಖ ಮಾಲ್‌ಗ‌ಳಲ್ಲಿ, ಡಿ.ದೇವರಾಜಅರಸುರಸ್ತೆ,ಸಯ್ನಾಜಿರಾವ್‌ ರಸ್ತೆಗ ಳಲ್ಲಿರುವ ಬಟ್ಟೆ ಮಳಿಗೆಗಳಲ್ಲಿ, ಗಾಂಧಿ ಚೌಕ ರಸ್ತೆಗಳ ಫ‌ುಟ್‌ಪಾತ್‌ ಗಳಲ್ಲಿ ಹೆಚ್ಚಾಗಿ ಮಾರಾಟವಾಗುತ್ತಿವೆ. ಈಗಾಗಲೇ ಚಳಿ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚ ಳಿಯ ತೀವ್ರತೆ ಹೆಚ್ಚಾಗುತ್ತಿದೆ. ಭಾನುವಾರ‌ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಕ ‌ಳೆದ ಎರಡು ವ‌ರ್ಷಗಳಿಂದ ಉತ್ತಮವಾದ ಮಳೆ ಬಿದ್ದಿರುವ ‌ ಕಾರಣ ಹಾಗೂ ಕೆಆರ್‌ಎಸ್‌ ಜಲಾಶಯ ಇನ್ನೂ ತುಂಬಿರುವ ಕಾರಣ ಮುಂದಿನ ದಿನಗ ‌ಳಲ್ಲಿ ನಗರದಲ್ಲಿ ಚಳಿ ಇನ್ನೂ ಹೆಚ್ಚಾಗುವಾ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸಿ ನೀರು, ಶುಚಿ ಆಹಾರ ಸೇವಿಸಿ :  ಚಳಿಗಾಲದಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಎದುರಾಗುವ ಸಾಧ್ಯತೆಗಳಿವೆ. ಕಾಲಿನ ಹಿಮ್ಮಡಿ, ತುಟಿ ಸೇರಿದಂತೆ ಕೈಕಾಲಿನ ಚರ್ಮ ಒಣಗಲಿದೆ. ಈ ಬಗ್ಗೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮದತ್ತ ಗಮನವಿಡಬೇಕು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಿಕೊಳ್ಳುವ ಜೊತೆಗೆ ಕುದಿಸಿಆರಿಸಿದ ನೀರು, ಬಿಸಿ ಹಾಗೂ ಶುಚಿಯಾದ ಆಹಾರ ಸೇವಿಸಬೇಕು. ಫ್ರಿಡ್ಜ್ನಲ್ಲಿ ಹೆಚ್ಚು ಹೊತ್ತು ಇಟ್ಟ ಆಹಾರ ಬಳಸಬಾರದು. ದೂಳಿನಿಂದ ದೂರವಿರಬೇಕು. ಚೆನ್ನಾಗಿ ಒಣಗಿಸಿದ ಬಟ್ಟೆಯನ್ನು ಮೈತುಂಬಾ ಧರಿಸುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.