ಯಾದಗಿರಿ 2.71 ಲಕ್ಷ ಕ್ಯೂಸೆಕ್‌ ನೀರು ಹರಿವು

Team Udayavani, Aug 5, 2019, 3:46 PM IST

5-AGUST-34

ನಾರಾಯಣಪುರ: ಬಸವಸಾಗರ ಜಲಾಶಯದ ಕ್ರಸ್ಟ್‌ಗೇಟ್ ಮೂಲಕ ಹರಿಯುತ್ತಿರುವ ನೀರಿನ ದೃಶ್ಯವನ್ನು ಪ್ರವಾಸಿಗರು ವೀಕ್ಷಿಸಿದರು.

ನಾರಾಯಣಪುರ: ಬಸವಸಾಗರ ಜಲಾಶಯದಿಂದ 21 ಕ್ರಸ್ಟ್‌ಗೇಟ್‌ಗಳನ್ನು ತೆರೆದು ರವಿವಾರ ಬೆಳಗ್ಗೆ 2.71 ಲಕ್ಷ ಕ್ಯೂಸೆಕ್‌ ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ.

ಕಳೆದ ಒಂದು ವಾರದಿಂದಲು ನದಿ ಪಾತ್ರಕ್ಕೆ ಗರಿಷ್ಠ ಪ್ರಮಾಣದ ನೀರು ಬಿಡುಗಡೆ ಮಾಡಿದ್ದರಿಂದ ನದಿ ಪಾತ್ರದಲ್ಲಿ ಬರುವ ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗಿದ್ದು, ನದಿ ಮಾರ್ಗವಾಗಿ ಬರುವ ಸೇತುವೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅಣೆಕಟ್ಟು ಅಧಿಕಾರಿಗಳ ಮಾಹಿತಿಯಂತೆ ಪ್ರಸ್ತುತ ಜಲಾಶಯಕ್ಕೆ ಎಷ್ಟು ಒಳಹರಿವಿನ ಪ್ರಮಾಣ ಇದೆಯೋ ಅಷ್ಟೇ ಪ್ರಮಾಣದ ಹೊರಹರಿವನ್ನು ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದ ಕೃಷ್ಣಾ ಜಲನಯನ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆ ಪ್ರಭಾವ ಕೃಷ್ಣಾ ನದಿಗೆ ಪ್ರವಾಹ ಉಂಟಾಗಿ ರಾಜ್ಯದ ಆಲಮಟ್ಟಿ ಹಾಗೂ ನಾರಾಯಣಪುರ ಉಭಯ ಜಲಾಶಯಗಳಿಗೆ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. ಒಂದೊಮ್ಮೆ ಬಸವಸಾಗರಕ್ಕೆ ಒಳಹರಿವು ಹೆಚ್ಚಾದರೆ ಒಳಹರಿವಿನ ಪ್ರಮಾಣದಷ್ಟೆ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುವುದು ಎಂದು ಅಣೆಕಟ್ಟು ಮೂಲಗಳಿಂದ ತಿಳಿದು ಬಂದಿದೆ.

ಪ್ರಸ್ತುತ ಜಲಾಶಯ ಗರಿಷ್ಠ ಮಟ್ಟದಲ್ಲಿ 490.05 ಮೀಟರ್‌ಗೆ ನೀರು ಬಂದು ತಲುಪಿದ್ದು, 24.91 ಟಿಎಂಸಿ ಅಡಿ ನೀರು ಸಂಗ್ರಹವಿದೆ ಎಂದು ತಿಳಿದು ಬಂದಿದೆ.

ರಜೆದಿನ ಪ್ರವಾಸಿಗರ ದಂಡು: ರಜೆ ದಿನವಾದ ರವಿವಾರ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ದಂಡು ಬಸವಸಾಗರಕ್ಕೆ ಆಗಮಿಸಿ ಜಲಾಶಯದ ಕ್ರಸ್ಟ್‌ಗೇಟ್ ಮೂಲಕ ನದಿ ಪಾತ್ರಕ್ಕೆ ಹರಿಬಿಡಲಾದ ಭಾರೀ ಪ್ರಮಾಣದ ನೀರು ಹರಿಯುವ ಸೊಬಗನ್ನು ಕಣ್ತುಂಬಿಕೊಂಡರು. ಜಲಾಶಯ ವೀಕ್ಷಣೆಗಾಗಿ ಪ್ರವಾಸಿಗರ ತಂದಿದ್ದ ದ್ವಿಚಕ್ರ ಸೇರಿದಂತೆ ಇತರೆ ವಾಹನಗಳು ಜಲಾಶಯ ಮಾರ್ಗ ಸೇರಿದಂತೆ ಛಾಯಾ ಭಗವತಿ ರಸ್ತೆ ಮಾರ್ಗವಾಗಿ ಸಂಚರಿಸಿದ್ದರಿಂದ ಕೆಲ ಸಮಯದವರೆಗೆ ಎರಡು ರಸ್ತೆಗಳಿಗೆ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು. ಸ್ಥಳೀಯ ಪೊಲೀಸ್‌ ಠಾಣೆ ಪಿಎಸೈ ಚಿದಾನಂದ ಕಾಶಪ್ಪಗೋಳ ನೇತೃತ್ವದ ಸಿಬ್ಬಂದಿಗಳು ವಾಹನ ದಟ್ಟನೆ ನಿಯಂತ್ರಿಸುವಲ್ಲಿ ಹರಸಾಹಸಪಟ್ಟು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.