ಕ್ರೀಡೆಗಳಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿ

ಸೋಲು-ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ: ಹನುಮಂತ ನಾಯಕ

Team Udayavani, Aug 29, 2019, 11:21 AM IST

29-Agust-12

ನಾರಾಯಣಪುರ: ಕೊಡೇಕಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ರಾಜಾ ಜೀತೇಂದ್ರ ನಾಯಕ ಜಹಾಗೀರದಾರ ಚಾಲನೆ ನೀಡಿದರು.

ನಾರಾಯಣಪುರ: ಹೊರಾಂಗಣ ಕ್ರೀಡೆಗಳು ಶಾಲಾ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾಗಿದ್ದು, ಮಕ್ಕಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಉತ್ತಮ ಪಡಿಸಿಕೊಳ್ಳಬೇಕು ಎಂದು ಆರ್‌ಟಿಜೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹನುಮಂತ ನಾಯಕ ಹೇಳಿದರು.

ಕೊಡೇಕಲ್ ಪಟ್ಟಣದ ಯುಕೆಪಿ ಕ್ಯಾಂಪ್‌ ಬಳಿಯ ಕ್ರೀಡಾಗಂಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರ್‌ಟಿಜೆ ಶಿಕ್ಷಣ ಸಂಸ್ಥೆ ಸಹಭಾಗಿತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಕೊಡೇಕಲ್ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಕ್ರೀಡೆಗಳಲ್ಲಿ ಸೋಲು-ಗೆಲುವು ಸಮನಾಗಿ ಸ್ವೀಕರಿಸುವ ಮನೋಭಾವ ಮಕ್ಕಳು ಬೆಳಸಿಕೊಳ್ಳಬೇಕು.ತೀರ್ಪುಗಾರರು ಪಾರದರ್ಶಕ ತೀರ್ಪನ್ನು ನೀಡುವ ಮೂಲಕ ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಸುರಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್‌. ಪೊಲೀಸ್‌ ಪಾಟೀಲ ಮಾತನಾಡಿ, ಹೆಚ್ಚಿನ ಕ್ರೀಡಾ ಪ್ರತಿಭೆಗಳು ಗ್ರಾಮೀಣ ಭಾಗದಿಂದ ರಾಷ್ಟ್ರ ಮಟ್ಟದವರೆಗೂ ಬೆಳಕಿಗೆ ಬರುತ್ತಿದ್ದಾರೆ. ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಲೇಬೇಕು ಎಂದರು.

ಸಸಿಗೆ ನಿರೇಯುವ ಮೂಲಕ ಚಾಲನೆಗೊಂಡ ಕ್ರೀಡಾಕೂಟದಲ್ಲಿ ಸ್ಥಳೀಯ ರಾಜ ಮನೆತನದ ರಾಜಾ ಜೀತೇಂದ್ರ ನಾಯಕ ಜಹಾಗೀರದಾರ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಬಬಲುಗೌಡ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ದೈಹಿಕ ಶಿಕ್ಷಕ ಬಸವರಾಜ ಮಂಟೆ ನಡೆಸಿಕೊಟ್ಟ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ಬಸನಗೌಡ ಬಿರಾದಾರ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.

ಸಂಗಣ್ಣ ಮಹಲಿನಮಠ ಸಾನ್ನಿಧ್ಯ, ನೀಲಕಂಠಸ್ವಾಮಿ ವಿರಕ್ತಮಠ ನೇತೃತ್ವ ವಹಿಸಿದ್ದರು. ರಂಗನಾಥ ದೊರೆ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಎನ್‌.ಡಿ. ನಾಯಕ, ತಾಪಂ ಸದಸ್ಯ ಮೋಹನ ಪಾಟೀಲ, ಗ್ರಾಪಂ ಅಧ್ಯಕ್ಷೆ ಅಯ್ಯಮ್ಮ ಹೊಳೆಪ್ಪ ಮ್ಯಾಗೇರಿ, ಡಾ| ಬಿ.ಎಂ. ಹಳ್ಳಿಕೋಟೆ, ದವಲಸಾಬ ಕಮತಗಿ, ಎನ್‌ಜಿಒ ಅಧ್ಯಕ್ಷ ಸಂಜೀವ ದರಬಾರೆ, ಪ್ರದೀಪ ಬೀಸೆ, ವೀರಸಂಗಪ್ಪ ಅಂಬಲಿಹಾಳ, ಸೋಮಲಿಂಗಪ್ಪ ದೊರೆ, ಬಾಲಾಜಿ, ತಿರುಪತಿ ಚವ್ವಾಣ, ಶಿವಲಿಂಗಪ್ಪ, ಅಮರಣ್ಣ ಹುಡೇದ, ದೇವು ಗೋಪಾಳೆ, ಮಲ್ಲು ನವಲಗುಡ್ಡ, ಸಂಗಣ್ಣ ಹುಬ್ಬಳ್ಳಿ, ಗೌಡಪ್ಪಗೌಡ, ಇಸಿಒ ಯಮನಪ್ಪ, ಬಿಆರ್‌ಪಿ ಗುರು ರಾಠೊಡ, ಬಸವಂತಭಟ್ ಜ್ಯೋಶಿ, ಬಸವರಾಜ ಜೀರಾಳ, ಬಸನಗೌಡ ಪೊಲೀಸ್‌ ಪಾಟೀಲ, ಚಂದ್ರಶೇಖರ ಹೊಕ್ರಾಣಿ, ಭೀಮಣ್ಣ ಕಲ್ಯಾಣಿ, ಭೀಮನಗೌಡ ಬಿರಾದಾರ, ಶರಣಪ್ಪ ಹೂಗಾರ, ವೀರಣ್ಣಗೌಡ ಸೇರಿದಂತೆ ವಲಯದ ಏಳು ಕ್ಲಸ್ಟರ್‌ಗಳ ಸಿಆರ್‌ಪಿಗಳು, ಮುಖ್ಯ ಗುರುಗಳು, ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನಾಗನಗೌಡ ಸ್ವಾಗತಿಸಿದರು. ಕೋರಿಸಂಗಯ್ಯ ಗಡ್ಡದ್‌ ನಿರೂಪಿಸಿದರು. ಭೀಮರಾಯ ಐಕೂರು ವಂದಿಸಿದರು.

ಪ್ರಾಥಮಿಕ ವಿಭಾಗದ ಮಕ್ಕಳಿಂದ ಖೋ ಖೋ, ಕಬಡ್ಡಿ, ಥ್ರೋಬಾಲ್, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್‌, ಬಾಲ್ ಬ್ಯಾಡ್ಮಿಂಟನ್‌ ಸೇರಿದಂತೆ ನಾನಾ ಮಾದರಿ ಆಟೋಟಗಳು ಜರುಗಿದವು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.