ಹೈನುಗಾರಿಕೆಯಿಂದ ನಿಶ್ಚಿತ ಆದಾಯ

ಪಶುಸಂಗೋಪನೆಯನ್ನು ಉದ್ಯಮವಾಗಿಕೊಂಡಲ್ಲಿ ಆರ್ಥಿಕ ಸಬಲತೆ: ಡಾ| ತಿಪ್ಪೇಸ್ವಾಮಿ

Team Udayavani, Jul 13, 2019, 3:52 PM IST

13-July-36

ನಾಯಕನಹಟ್ಟಿ: ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಶಿವಮೊಗ್ಗ ಹಾಲು ಉತ್ಪಾದಕರ ಸಂಘದ ಉಪ ವ್ಯವಸ್ಥಾಪಕ ಡಾ| ತಿಪ್ಪೇಸ್ವಾಮಿ ಮಾತನಾಡಿದರು.

ನಾಯಕನಹಟ್ಟಿ: ನಿಶ್ಚಿತ ಆದಾಯಕ್ಕೆ ಹೈನುಗಾರಿಕೆ ಸಹಕಾರಿ ಎಂದು ಶಿವಮೊಗ್ಗ ಹಾಲು ಉತ್ಪಾದಕರ ಸಂಘದ ಉಪ ವ್ಯವಸ್ಥಾಪಕ ಡಾ| ತಿಪ್ಪೇಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿಯಲ್ಲಿ ನಿಶ್ಚಿತ ಆದಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಇದಕ್ಕೆ ಹಲವಾರು ಕಾರಣಗಳಿವೆ. ನೀರು, ವಿದ್ಯುತ್‌, ಉತ್ಪನ್ನಗಳ ದರದಲ್ಲಿನ ಏರಿಳಿತಗಳಿಂದ ಕೃಷಿಯಲ್ಲಿ ನಿಶ್ಚಿತ ಆದಾಯ ನಿರೀಕ್ಷಿಸುವುದು ಸಾಧ್ಯವಿಲ್ಲ. ಆದರೆ ಹೈನುಗಾರಿಕೆಯಲ್ಲಿ ಸ್ಪಷ್ಟವಾದ ನಿಯಮಗಳನ್ನು ಅನುಸರಿಸಿದರೆ ಉತ್ತಮ ಆದಾಯ ದೊರೆಯುವುದು ಸಾಧ್ಯವಿದೆ. ಪ್ರತಿ ಹತ್ತು ಲೀಟರ್‌ಗೆ ಐದು ಕೆಜಿ ಪಶು ಆಹಾರ ಹಾಗೂ ಪ್ರತಿ ದಿನ ಎರಡು ಬಾರಿ ಖನಿಜಾಂಶಗಳನ್ನು ನೀಡಬೇಕು. ಸರಿಯಾದ ಪೋಷಣೆಯಿದ್ದರೆ ಉತ್ತಮ ಆದಾಯ ಪಡೆಯಲು ಸಾಧ್ಯ ಎಂದರು.

ಒಕ್ಕೂಟ ಪ್ರತಿ ಲೀಟರ್‌ ಹಾಲಿಗೆ 27 ರೂ. ನೀಡುತ್ತಿದೆ. ಪ್ರತಿ ಲೀಟರ್‌ ಹಾಲಿಗೆ ಸರ್ಕಾರ 6 ರೂ. ಸಹಾಯಧನ ಒದಗಿಸುತ್ತಿದೆ. ಹೀಗಾಗಿ ರೈತರು ಪಶುಸಂಗೋಪನೆಯನ್ನು ಉದ್ಯಮವಾಗಿ ಮಾಡಿಕೊಳ್ಳಬೇಕು. ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘ 1.77 ಲಕ್ಷ ರೂ. ವಾರ್ಷಿಕ ಲಾಭ ಗಳಿಸಿದೆ. ಇದು ಇನ್ನಷ್ಟು ಹೆಚ್ಚಬೇಕು. ಸಮೀಪದಲ್ಲಿ ಬೃಹತ್‌ ಹಾಲು ಶೀತಲೀಕರಣ ಕೇಂದ್ರ ಸ್ಥಾಪನೆ ಆಗಿರುವುದರಿಂದ ಇಲ್ಲಿನ ಕೇಂದ್ರಕ್ಕೆ ಲಾಭಾಂಶ ಕಡಿಮೆಯಾಗಿದೆ ಎಂದು ತಿಳಿಸಿದರು.

ನಾಯಕನಹಟ್ಟಿ ಪಟ್ಟಣಕ್ಕೆ ಬೃಹತ್‌ ಹಾಲು ಶೀತಲೀಕರಣ ಕೇಂದ್ರ (ಬಿಎಂಸಿ) ನೀಡಬೇಕೆಂದು ನಿರ್ದೇಶಕರಾದ ಟಿ.ಕೆ. ಮುರುಗೇಶ್‌, ರಾಜಣ್ಣ ಮತ್ತಿತರರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಉಪ ವ್ಯವಸ್ಥಾಪಕ ಡಾ| ತಿಪ್ಪೇಸ್ವಾಮಿ, ಸಂಘದಿಂದ ಬಿಎಂಸಿಗೆ ನಿರ್ಣಯ ಅಂಗೀಕರಿಸಿ ನೀಡಿದ ನಂತರ ಇದರ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ತೀರ್ಮಾನಿಸಲಾಗುವುದು. ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಬಿಎಂಸಿ ಕೇಂದ್ರ ನೀಡಲಾಗುವುದು ಎಂದರು.

ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಿ. ತಿಪ್ಪೇಸ್ವಾಮಿ, ಪಪಂ ಸದಸ್ಯ ಮನ್ಸೂರ್‌,ವಿಸ್ತರಣಾಧಿಕಾರಿ ಕೃಷ್ಣಕುಮಾರ್‌, ಸಂಘದ ಕಾರ್ಯದರ್ಶಿ ಬಿ.ಎಂ. ಪ್ರೇಮರಾಜ್‌, ಮಂಡಳಿ ನಿರ್ದೇಶಕರಾದ ಎಂ. ಶಿವಾನಂದ್‌, ಮುರುಗೇಶ್‌, ಪಾಲಯ್ಯ, ಪರಮೇಶ್ವರಪ್ಪ, ಗಂಗಮ್ಮ, ಬಿ. ವಿಶ್ವನಾಥ್‌, ಬಿ. ತಿಪ್ಪೇಸ್ವಾಮಿ, ಯೋಗೀಶ್‌, ವೀರೇಶ್‌, ಎನ್‌.ಟಿ. ನಾಗರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.