ಮಿಂಚು ಪ್ರತಿಬಂಧಕ ಅಳವಡಿಕೆ ಮಂಜೂರಾತಿಗೆ ಮೀನ-ಮೇಷ

ನಾಲ್ಕು ವರ್ಷಗಳ ಹಿಂದಿನ ಪ್ರಸ್ತಾವನೆ ಕಡತದಲ್ಲೇ ಬಾಕಿ!

Team Udayavani, May 18, 2019, 12:18 PM IST

18-May-10

ಮಿಂಚು ಪ್ರತಿಬಂಧಕ.

ಪುತ್ತೂರು: ಪ್ರತಿವರ್ಷವೂ ಜಿಲ್ಲೆಯಲ್ಲಿ ಮಿಂಚು, ಸಿಡಿಲಿನ ಆರ್ಭಟ ದಿಂದ ಜೀವಹಾನಿ ಸಹಿತ ಅಪಾರ ನಷ್ಟ ಸಂಭವಿಸುತ್ತಿದೆ. ಆದರೆ ಮಿಂಚು ಪ್ರತಿಬಂಧಕ ಅಳವಡಿಕೆಯ ಕುರಿತು ನಾಲ್ಕೂವರೆ ವರ್ಷ ಗಳ ಹಿಂದೆ ಜಿಲ್ಲಾಡಳಿತವು ಸರಕಾರಕ್ಕೆ ಸಲ್ಲಿ ಸಿದ್ದ ಪ್ರಸ್ತಾವನೆಗೆ ಇನ್ನೂ ಮಂಜೂರಾತಿ ಸಿಕ್ಕಿಲ್ಲ.

ಪುತ್ತೂರು ತಾಲೂಕಿನ ಎರಡು ಕಡೆ ಪ್ರಾಯೋಗಿಕ ಅನುಷ್ಠಾನದ ಜತೆಗೆ ಜಿಲ್ಲೆಯ 11 ಕಡೆಗಳಲ್ಲಿ ಮಿಂಚು ಪ್ರತಿಬಂಧಕ ಅಳವಡಿಕೆಗೆ 25 ಲಕ್ಷ ರೂ.ಗಳ ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಮಿಂಚು-ಸಿಡಿಲಿನ ತೀವ್ರತೆ ಹೆಚ್ಚಿರುವಲ್ಲಿ ಮಿಂಚು ಪ್ರತಿಬಂಧಕ ಅಳವಡಿಸಿದಾಗ ಅಲ್ಲಿ ಸಿಡಿಲಿನ ಆಘಾತ ಕಡಿಮೆಯಾಗುತ್ತದೆ. ಹೀಗಾಗಿ ತಂತ್ರಜ್ಞರ ಮಾಹಿತಿ ಪಡೆದೇ ಜಿಲ್ಲಾಡಳಿತವು ನಿರ್ಧಾರಕ್ಕೆ ಬಂದಿತ್ತು. ಆದರೆ ಸರಕಾರ ಮಾತ್ರ ಇದಕ್ಕೆ ಇನ್ನೂ ಅವಕಾಶ ನೀಡಿಲ್ಲ.

2014ರ ಪ್ರಸ್ತಾವನೆ
2014ರಲ್ಲಿ ಜಿಲ್ಲಾಧಿಕಾರಿಯಾ ಗಿದ್ದ ಎ.ಬಿ. ಇಬ್ರಾಹಿಂ ಅವರು ತಂತ್ರಜ್ಞರು ಮತ್ತು ಅಧಿಕಾರಿಗಳ ಸಭೆ ನಡೆಸಿ, 11 ಕಡೆ ಗಳಲ್ಲಿ ಮಿಂಚು ಪ್ರತಿಬಂಧಕ ಅಳವಡಿಸುವ ನಿಟ್ಟಿನಲ್ಲಿ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ನೀಡಿದ್ದರು.

11 ಕಡೆಗಳಿಗೆ ಅನುಷ್ಠಾನ
ಪುತ್ತೂರು ತಾಲೂಕಿನ ಒಳ ಮೊಗರು ಗ್ರಾ.ಪಂ. ಕಚೇರಿ ಬಳಿ ಮತ್ತು ಪ್ರಸ್ತುತ ಕಡಬ ತಾಲೂಕಿ ನಲ್ಲಿರುವ ಕೋಡಿಂಬಾಳ ದೊಡ್ಡಕೊಪ್ಪ ಪ್ರದೇಶ ಸೇರಿದಂತೆ ಸುಳ್ಯದ ಜಾಲ್ಸೂರು ಗ್ರಾ.ಪಂ. ಕಚೇರಿ ಬಳಿ, ದೇವಚಳ್ಳ ಗ್ರಾ.ಪಂ. ವ್ಯಾಪ್ತಿ, ಮಂಗಳೂರಿನ ಅಂಬ್ಲಿಮೊಗರು ಗ್ರಾ.ಪಂ. ಗಡಿಪ್ರದೇಶ, ಮಂಜನಾಡಿ ಗ್ರಾ.ಪಂ. ವ್ಯಾಪ್ತಿಯ ಉರುಮನೆ, ಮೆನ್ನಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕ ಸ್ಮಶಾನ ಪರಿಸರ, ಗುರುಪುರ ಗ್ರಾ.ಪಂ. ಕಚೇರಿ ಬಳಿ, ಪೆರ್ಮುದೆ ಗ್ರಾ.ಪಂ. ವ್ಯಾಪ್ತಿ, ಮೂಡುಬಿದಿರೆ ಶಿರ್ತಾಡಿ ಅಂಚೆ ಕಚೇರಿಯ ಬಳಿ, ಬೆಳ್ತಂಗಡಿಯ ಪುದುವೆಟ್ಟು ಗ್ರಾ.ಪಂ. ವ್ಯಾಪ್ತಿಯ ಬೊಳ್ಮನಾರಿನಲ್ಲಿ ಮಿಂಚು ಪ್ರತಿಬಂಧಕ ಅಳವಡಿಕೆಗೆ ಜಿಲ್ಲಾಡಳಿತ ಸ್ಥಳ ನಿಗದಿ ಮಾಡಿತ್ತು. ಇದಕ್ಕೆ ಮಂಜೂರಾತಿ ದೊರೆತರೆ ಪುತ್ತೂರಿನಲ್ಲಿ 2 ಕಡೆ ಪ್ರಾಯೋಗಿಕ ಅನುಷ್ಠಾನದ ಕುರಿತು ಮಾತುಕತೆ ನಡೆದಿತ್ತು.

10 ಲಕ್ಷ ರೂ. ಹೆಚ್ಚಳ
ಮಂಜೂರಾತಿಯ ಬಳಿಕ ಮಿಂಚು ಪ್ರತಿಬಂಧಕಗಳ ಅನುಷ್ಠಾನದ ಜವಾಬ್ದಾರಿ ಯನ್ನು ಜಿಲ್ಲಾಡಳಿತವು ಖಾಸಗಿ ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯವರು ವಿಚಾರಣೆ ನಡೆಸುವ ಸಂದರ್ಭ ಪ್ರಸ್ತಾವನೆಗೆ ತಾಂತ್ರಿಕ ಮಂಜೂರಾತಿ ಲಭಿಸಿಲ್ಲ ಎನ್ನುವ ಉತ್ತರ ನೀಡುತ್ತಿದ್ದಾರೆ. ಪ್ರಾರಂಭದ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು 35 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆದರೆ ನಾಲ್ಕೂವರೆ ವರ್ಷ ಕಳೆದರೂ ಅನುಷ್ಠಾನಗೊಳ್ಳುವ ಲಕ್ಷಣಗಳು ಮಾತ್ರ ಕಾಣುತ್ತಿಲ್ಲ.

ಮಾಹಿತಿ ಪಡೆದುಕೊಳ್ಳುವೆ
ಜಿಲ್ಲೆಯಲ್ಲಿ ಮಿಂಚು ಪ್ರತಿಬಂಧಕ ಅಳವಡಿಸುವ ಪ್ರಸ್ತಾವನೆಯ ಕುರಿತು ನನಗೆ ಮಾಹಿತಿ ಇಲ್ಲ. ಹೀಗಾಗಿ ಮುಂದೆ ಅದರ ಕುರಿತು ಮಾಹಿತಿ ಪಡೆದುಕೊಂಡು ವಿಚಾರಣೆ ನಡೆಸಿ ಸ್ಪಷ್ಟ ಮಾಹಿತಿಯನ್ನು ನೀಡಲಾಗುವುದು.
– ಶಶಿಕಾಂತ ಸೆಂಥಿಲ್
ದ.ಕ. ಜಿಲ್ಲಾಧಿಕಾರಿ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.