ಕೇಂದ್ರ ಸರ್ಕಾರದ ವಿರುದ್ಧ ವಿಶ್ವಾಸಘಾತುಕ ದಿನಾಚರಣೆ

Team Udayavani, May 27, 2018, 4:15 PM IST

ray-1.jpg

ರಾಯಚೂರು: ದಿನಬಳಕೆ, ಅಡುಗೆ ಅನಿಲ, ತೈಲ ಬೆಲೆ ನಿಯಂತ್ರಿಸದೆ, ಕೊಟ್ಟ ಭರವಸೆ ಈಡೇರಿಸದೆ ನಾಲ್ಕನೇ ವರ್ಷದ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ವಿಶ್ವಾಸಘಾತುಕ ದಿನ ಆಚರಿಸಿದರು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ಧರಣಿ ಕುಳಿತ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ತರಕಾರಿ ಹಾರ ಹಾಕಿಕೊಂಡು, ಖಾಲಿ ಸಿಲಿಂಡರ್‌ ಮುಂದಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅಚ್ಛೆ ದಿನ್‌ ಆಯೇಗಾ ಎಂದು ನಾಲ್ಕು ವರ್ಷ ದೇಶದ ಜನರನ್ನು ವಂಚಿಸಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಯಾವೊಂದು ಭರವಸೆ ಈಡೇರಿಸಿಲ್ಲ. ಆದರೆ, ಈಗ ಯಶಸ್ವಿ ನಾಲ್ಕನೇ ವರ್ಷ ಸಂಭ್ರಮಾಚರಣೆ ಮಾಡುತ್ತಿರುವುದು ಜನರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ. ಹೀಗಾಗಿ ಈ ದಿನವನ್ನು ನಾವು ವಿಶ್ವಾಸಘಾತುಕ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು.

ಅಡುಗೆ ಅನಿಲ ದರ ಗಗನಕ್ಕೇರಿದೆ. ತೈಲ ಬೆಲೆ 80 ರೂ. ತಲುಪಿದೆ. ದಿನಬಳಕೆ ವಸ್ತುಗಳು ಬಡವರ ಕೈಗೆಟುಕದಂತಾಗಿದೆ. ಆದರೆ, ಬಡವರ ಪರ ಎಂದು ಬಡಾಯಿ ಕೊಚ್ಚಿಕೊಳ್ಳುವ ಪ್ರಧಾನಿ, ದೇಶದ ಜನರನ್ನು ಕಷ್ಟದಲ್ಲಿರಿಸಿದ್ದಾರೆ. ನೋಟು ಅಮಾನ್ಯಿಕರಣ, ಜಿಎಸ್‌ಟಿಯಂಥ ಆರ್ಥಿಕ ನೀತಿ ಜಾರಿಗೊಳಿಸುವ ಮೂಲಕ
ದೇಶದ ಜನರನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. ರಾಜ್ಯ ಜಲ ವಿವಾದಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸದೆ ರಾಜ್ಯದ ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. ಹೀಗಾಗಿ ಈ ದಿನವನ್ನು ವಿಶ್ವಾಸಘಾತುಕ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣೆ, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಪಾರಸಮಲ್‌
ಸುಖಾಣಿ, ನಗರಸಭೆ ಉಪಾಧ್ಯಕ್ಷ ಜಯಣ್ಣ, ಜಿ.ಬಸವರಾಜ ರೆಡ್ಡಿ, ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಅಬ್ದುಲ್‌ ಕರೀಂ, ಅಮರೇಗೌಡ ಹಂಚಿನಾಳ, ದರೂರು ಬಸವರಾಜ ಪಾಟೀಲ, ವಸಂತಕುಮಾರ್‌ ಅರೋಲಿ ಸೇರಿ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.