ಐಐಟಿ ಬಳಿಕ ಏಮ್ಸ್‌ ಗೂ ಎಳ್ಳು ನೀರು?

Team Udayavani, Mar 19, 2022, 1:07 PM IST

9IIT

ರಾಯಚೂರು: ಮಹತ್ವದ ಯೋಜನೆಗಳ ವಿಚಾರದಲ್ಲಿ ಜಿಲ್ಲೆಯ ಜನರ ನಿರೀಕ್ಷೆಗಳು ಹುಸಿಯಾಗುತ್ತಲೇ ಬಂದಿದ್ದು, ಈಗ ಅಖೀಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್‌) ವಿಚಾರದಲ್ಲೂ ಅಂಥದ್ದೇ ಸನ್ನಿವೇಶ ಏರ್ಪಟ್ಟಿದೆ.

ಐಐಟಿಯಂಥ ಮಹತ್ವದ ಸಂಸ್ಥೆಯಂತೆ ಏಮ್ಸ್‌ ಕೂಡ ಧಾರವಾಡ ಪಾಲಾಗುವ ಲಕ್ಷಣಗಳು ದಟ್ಟವಾಗಿದ್ದು, ಜಿಲ್ಲೆಗೆ ಮತ್ತೊಮ್ಮೆ ಅನ್ಯಾಯವಾಗುತ್ತಿದೆ. ಶತಾಯ ಗತಾಯ ಜಿಲ್ಲೆಗೆ ಏಮ್ಸ್‌ ತಂದೇ ತರುತ್ತೇವೆ ಎಂದು ಜಂಬ ಕೊಚ್ಚಿಕೊಂಡಿದ್ದ ಜಿಲ್ಲೆಯ ಜನಪ್ರತಿನಿಧಿಗಳು ಅನಗತ್ಯ ಕಾಲಕ್ಷೇಪ ಮಾಡಿದ್ದು, ಸದ್ದಿಲ್ಲದೇ ಧಾರವಾಡದಲ್ಲಿ ಏಮ್ಸ್‌ ಸ್ಥಾಪನೆಗೆ ತಜ್ಞರ ತಂಡ ಸ್ಥಳ ಪರಿಶೀಲನೆ ಮಾಡಿದೆ ಎಂದು ತಿಳಿದು ಬಂದಿದೆ. ಆ ಮೂಲಕ ಜಿಲ್ಲೆಯ ಜನತೆಗೆ ಜನ ನಾಯಕರ ನಯವಂಚನೆ ಮುಂದುವರಿದಿದೆ.

ರಾಜ್ಯಸಭೆ ಸದಸ್ಯ ಕೆ.ನಾರಾಯಣ ಸದನದಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಡಾ| ಭಾರತಿ ಪವಾರ್‌ ಉತ್ತರ ನೀಡಿದ್ದು, ಕರ್ನಾಟಕದಲ್ಲಿ ಏಮ್ಸ್‌ ಸ್ಥಾಪನೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲಿಸಿದೆ ಎಂದಿದ್ದಾರೆ.

ರಾಯಚೂರು ಜಿಲ್ಲೆ ಈ ವಿಚಾರದಲ್ಲಿ ಲೆಕ್ಕಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂಥದ್ದೇ ಸನ್ನಿವೇಶ ಐಐಟಿ ಸ್ಥಾಪನೆ ವಿಚಾರದಲ್ಲೂ ರಾಯಚೂರಿಗೆ ಏಮ್ಸ್‌ ನೀಡುವ ಭರವಸೆಯನ್ನು ಬಿಜೆಪಿ ನಾಯಕರು ಹೇಳಿದ್ದರು.

ಸಚಿವ ಸ್ಥಾನ ನೀಡುವ ವಿಚಾರದಿಂದ ಹಿಡಿದು ಅಡಿಗಡಿಗೆ ಜಿಲ್ಲೆಗೆ ವಂಚನೆಯಾಗುತ್ತಲೇ ಬರುತ್ತಿದ್ದು, ಮಹತ್ವದ ಯೋಜನೆಗಳ ವಿಚಾರದಲ್ಲಿ ರಾಯಚೂರು ಗಣನೆಗೆ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಬೇಡವಾದದ್ದು ಮಾತ್ರ ಲಭ್ಯ

ಈ ಹಿಂದೆ ಐಐಟಿ ಸಂಸ್ಥೆಯನ್ನು ಜಿಲ್ಲೆಗೆ ನೀಡಬೇಕು ಎನ್ನುವ ಕುರಿತು ದೊಡ್ಡ ಹೋರಾಟ ನಡೆಸಲಾಗಿತ್ತು. ಆಗಿನ ಕಾಂಗ್ರೆಸ್‌ ಸರ್ಕಾರ ಕೇಂದ್ರಕ್ಕೆ ಮೂರು ಜಿಲ್ಲೆಗಳ ಹೆಸರು ಶಿಫಾರಸು ಮಾಡಿದ್ದರಿಂದ ಅದು ಧಾರವಾಡ ಪಾಲಾಯಿತು. ಆಗ ಜಿಲ್ಲೆಗೆ ಅನ್ಯಾಯವಾಗಿದ್ದು, ಏಮ್ಸ್‌ ನೀಡುವ ಮೂಲಕ ನ್ಯಾಯ ನೀಡಲಾಗುವುದು ಎಂದು ಜನಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದ್ದರು.

ಈಗ ಅದು ಕೂಡ ಕೈ ತಪ್ಪುವ ಹಂತದಲ್ಲಿದೆ. ಈಚೆಗೆ ಟೆಕ್ಸ್‌ಟೈಲ್‌ ಪಾರ್ಕ್‌ ವಿಚಾರದಲ್ಲೂ ವಿಜಯಪುರ, ಕಲಬುರಗಿ ಜಿಲ್ಲೆಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಆದರೆ, ಜಿಲ್ಲೆಗೆ ಬೇಡವಾದ ವೈಟಿಪಿಎಸ್‌ ಪವರ್‌ ಪ್ಲಾಂಟ್‌ನಂಥ ಯೋಜನೆಗಳು ನೀಡಲಾಗುತ್ತಿದೆ. ಇಎಸ್‌ಐ, ಜಯದೇವ ಹೃದ್ರೋಗ ಕೇಂದ್ರಗಳಂಥ ವೈದ್ಯಕೀಯ ಸಂಸ್ಥೆಗಳು ಮಾತ್ರ ಕಲಬುರಗಿ ಪಾಲಾಗುತ್ತಿವೆ.

ಇನ್ನೂ ಕಾಲ ಮಿಂಚಿಲ್ಲ

ರಾಜ್ಯ ಸರ್ಕಾರ ಶಿಫಾರಸು ಮಾಡಿದ ಮಾತ್ರಕ್ಕೆ, ಕೇಂದ್ರ ಸರ್ಕಾರ ಸ್ಥಳ ಪರಿಶೀಲನೆ ಮಾಡಿದ ತಕ್ಷಣ ಏಮ್ಸ್‌ ಸ್ಥಾಪನೆಯಾದಂತೆ ಅಲ್ಲ. ರಾಯಚೂರು ಜಿಲ್ಲೆಗೆ ಏಮ್ಸ್‌ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಟ್ಟಿ ನಿಲುವು ಪ್ರದರ್ಶಿಸಲು ಇನ್ನೂ ಕಾಲಾವಕಾಶ ಇದೆ. ಅದಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಗಟ್ಟಿಯಾಗಿ ನಿಲ್ಲಬೇಕಿದೆ. ಧಾರವಾಡಕ್ಕೆ ಐಐಟಿ ನೀಡಿದ್ದು, ರಾಯಚೂರಿಗೆ ಏಮ್ಸ್‌ ಸ್ಥಳಾಂತರಿಸಲಿ ಎಂಬ ಹಕ್ಕೊತ್ತಾಯ ಮಾಡಬೇಕಿದೆ. ಸಂಸದರ ನೇತೃತ್ವದ ನಿಯೋಗ ಅವಿರತ ಶ್ರಮಿಸಬೇಕಿದೆ. ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳ ನೆಪ ಹೇಳುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಆ ಯೋಜನೆಗಳು ಜಾರಿಯಲ್ಲಿವೆ ಎಂದು ಮನವರಿಕೆ ಮಾಡಿಕೊಡಬೇಕಿದೆ. ಏಮ್ಸ್‌ ಕೇವಲ ಕರ್ನಾಟಕ ಮಾತ್ರವಲ್ಲದೇ ಆಂಧ್ರ, ತೆಲಂಗಾಣದ ಗಡಿಭಾಗದ ಜನರಿಗೆ ಅನುಕೂಲವಾಗಲಿದೆ ಎಂಬ ವಿಚಾರವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಜಿಲ್ಲೆಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕಿದೆ.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.