Udayavni Special

ವಕೀಲರು ವೃತ್ತಿ ನೈಪುಣ್ಯತೆ ಸಾಧಿಸಲಿ


Team Udayavani, Dec 4, 2018, 2:23 PM IST

ray-5.jpg

ಸಿಂಧನೂರು: ಯುವ ವಕೀಲರು ವೃತ್ತಿಯಲ್ಲಿ ಕ್ರಿಯಾಶೀಲತೆ ಮೈಗೂಡಿಸಿಕೊಂಡು ಕಾರ್ಯೋನ್ಮುಖರಾಗಬೇಕು. ತಮ್ಮನ್ನು
ನಂಬಿ ಬಂದಂತಹ ಕಕ್ಷಿದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸತ್ರನ್ಯಾಯಾಧೀಶರಾದ ಬೈಲೂರು ಶಂಕರರಾಮ್‌ ಕರೆ ನೀಡಿದರು.

ತಾಲೂಕು ನ್ಯಾಯವಾದಿಗಳ ಸಂಘದಿಂದ ನಗರದ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವ ವಕೀಲರು ವೃತ್ತಿ ನೈಪುಣ್ಯತೆ ಗಳಿಸಿಕೊಳ್ಳುವ ಅವಶ್ಯಕತೆ ಇದೆ. ನ್ಯಾಯಕ್ಕಾಗಿ ವಕೀಲರ ಹತ್ತಿರ ನಂಬಿ ಬರುವ ಕಕ್ಷಿದಾರರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು. ಪ್ರೌಢಿಮೆ ಜೊತೆಗೆ ಜನರ ಕ್ಷಮತೆಯನ್ನು ಗಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದರು.

ಡಾ| ಬಾಬು ರಾಜೇಂದ್ರ ಪ್ರಸಾದ್‌ ಅವರ ಜನ್ಮದಿನವನ್ನು ವಕೀಲರ ದಿನವನ್ನಾಗಿ ಆಚರಿಸುತ್ತಿದ್ದೇವೆ. ವಕೀಲರು ಕೇವಲ ಶೋಕಿಗಾಗಿ ಕೋಟು ಹಾಕಿಕೊಂಡು ಕಾಟಾಚಾರಕ್ಕೆ ವಕೀಲಿ ವೃತ್ತಿ ಮಾಡುವುದಲ್ಲ. ನಿಜವಾದ ಅಸ್ತಿತ್ವವನ್ನು ತಮ್ಮದಾಗಿಸಿಕೊಂಡು ಕಕ್ಷಿದಾರರ ಪ್ರತಿಯೊಂದು ತಕರಾರುಗಳ ಸೂಕ್ಷ್ಮತೆ ಅರ್ಥೈಸಿಕೊಂಡು ನ್ಯಾಯಾಲಯದ ಮುಂದೆ ಪ್ರಚುರಪಡಿಸಬೇಕು. ಅಂತಹ ದಾರಿಯಲ್ಲಿ ವಕೀಲರು ಸಾಗಬೇಕು. ಸಾಧಿಸುವ ಗುರಿ ಜೊತೆಗೆ ಗುರುವಿನ ಗುಲಾಮನಾಗಿ ಪ್ರಬುದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಧಾರವಾಡ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಎಚ್‌. ಮಿಟ್ಟಿಲಕೋಡ್‌ ಮಾತನಾಡಿ, ವಕೀಲರೆಂದರೆ ನೊಂದವರ ಧ್ವನಿಯಾಗಿ ನ್ಯಾಯಾಲಯದಲ್ಲಿ ಕೆಲಸ ಮಾಡಿ ಅವರಿಗೆ ನಿಜವಾದ ನ್ಯಾಯ ದೊರಕಿಸಿಕೊಡುವ ಶಕ್ತಿಯಾಗಬೇಕು. ವೃತ್ತಿಯ ಬಗ್ಗೆ ಕಾಳಜಿಯುಳ್ಳ ವಕೀಲರಾಗಿ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವು ಜೊತೆಗೆ ಸಾಮಾಜಿಕ ಕಳಕಳಿ ಮೆರೆಯಬೇಕು. ಅಂದಾಗ ಮಾತ್ರ ವಕೀಲಿ ವೃತ್ತಿಗೆ ನಿಜವಾದ ಅರ್ಥ ಬರುತ್ತದೆ ಎಂದರು.

ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜೆ.ರಾಯಪ್ಪ ವಕೀಲ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಸಿಂಧನೂರು ನ್ಯಾಯಾಧೀಶರಾದ ಸಿ.ವಿ.ಸನತ್‌, ಮಹಾಂತೇಶ ಭೂಸಗೋಳ, ರವಿಕುಮಾರ, ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಸದಸ್ಯರಾದ ಕಾಶಿನಾಥ ಮೊಟಕಪಲ್ಲಿ, ಆಸೀಫ್‌ ಅಲಿ, ಕೆ.ಕೋಟೇಶ್ವರರಾವ್‌, ಹಿರಿಯ ವಕೀಲರಾದ ಎಸ್‌.ಬಿ.ಹಿರೇಗೌಡ್ರು, ಎಚ್‌.ರುದ್ರಗೌಡ, ಹನುಮಂತಪ್ಪ ಗುಡಿ, ಎಂ.ಕಾಳಿಂಗಪ್ಪ, ಎಚ್‌.ರಾಮನಗೌಡ, ವಿರುಪಾಕ್ಷಪ್ಪ ಗದ್ರಟಗಿ, ಆರ್‌.ಮಲ್ಲಯ್ಯ, ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ವಿರುಪಣ್ಣ ಧುಮತಿ ಇತರರು ಇದ್ದರು.

ಟಾಪ್ ನ್ಯೂಸ್

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rayachuru news

ಮಳಿಗೆ ದುರಸ್ತಿ, ಮರು ಹರಾಜಿನತ್ತ ನಗರಸಭೆ ಚಿತ್ತ

rayachuru news

ಸಿಂಧನೂರು ಕ್ಷೇತ್ರದಲ್ಲಿ “ಎನ್‌ಸಿಪಿ’ ಕಸರತ್ತು ಶುರು

25

ಪುರಸಭೆ ಹೈಟೆಕ್‌ ಕಟ್ಟಡ ಹಸ್ತಾಂತರಕ್ಕೆ ಗ್ರಹಣ

25

ರಾಜ್ಯ ಹೆದ್ದಾರಿ ಮೇಲೆ ಗಲೀಜು ನೀರು

24

ಸರ್ಕಾರದ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.