ಏಡ್ಸ್‌ ನಿರ್ಮೂಲನೆಗೆ ಜಾಗೃತಿಯೇ ಮದ್ದು


Team Udayavani, Dec 2, 2018, 2:39 PM IST

vij-3.jpg

ರಾಯಚೂರು: ಮಾರಕ ಕಾಯಿಲೆ ಎಂದೇ ಗುರುತಿಸಲಾದ ಏಡ್ಸ್‌ ಈಗ ಮುಂಚೆಗಿಂತ ಸಾಕಷ್ಟು ನಿಯಂತ್ರಣಕ್ಕೆ ಬಂದಿದೆ. ಗ್ರಾಮೀಣ ಭಾಗದಲ್ಲಿ ಮತ್ತಷ್ಟು ಪ್ರಚಾರ ಮಾಡಿದಲ್ಲಿ ಈ ರೋಗವನ್ನು ಸಂಪೂರ್ಣ ನಿರ್ನಾಮ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬೈಲೂರು ಶಂಕರರಾಮ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಏಡ್ಸ್‌ ತಡೆ ದಿನಾಚರಣೆ ನಿಮಿತ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್‌ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆ ಮತ್ತು ನಿಯಂತ್ರಣ ಘಟಕ, ಭಾರತೀಯ ವೈದ್ಯಕೀಯ ಸಂಘ, ವಕೀಲರ ಸಂಘ ಸೇರಿ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಚ್‌ಐವಿ ರೋಗಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದಾಗ ಅದು ಏಡ್ಸ್‌ ಆಗಿ ಪರಿವರ್ತನೆ ಆಗಲಿದೆ. ಒಮ್ಮೆ ರೋಗಿ ಏಡ್ಸ್‌ಗೆ ತುತ್ತಾದರೆ ನಿವಾರಣೆ ಮಾಡುವುದು ಕಷ್ಟ. ಹೀಗಾಗಿ ಈ ಕಾಯಿಲೆ ಹರಡದಂತೆ ಎಚ್ಚರಿಕೆ ವಹಿಸಬೇಕು. ಎಚ್‌ಐವಿ ವಿವಿಧ ರೂಪದಲ್ಲಿ ಹರಡುವ ಕಾಯಿಲೆಯಾಗಿದೆ. 2011ರಿಂದ ಈ ಕಾಯಿಲೆ ಪ್ರಮಾಣ ಕಡಿಮೆಯಾಗಿದೆ ಎಂಬ ವರದಿಗಳಿವೆ. ರಾಯಚೂರು ತಾಲೂಕಿನಲ್ಲಿ ಏಡ್ಸ್‌ ಪ್ರಕರಣಗಳು ಇಡೀ ಜಿಲ್ಲೆಯಲ್ಲಿಯೇ ಅತೀ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಜಿಲ್ಲಾಧಿಕಾರಿ ಶರತ್‌ ಬಿ. ಮಾತನಾಡಿ, ಇಂಥ ದಿನಗಳು ಕೇವಲ ಆಚರಣೆಗೆ ಸೀಮಿತ ಆಗಬಾರದು. ಜನರಿಗೆ ಈ ಬಗ್ಗೆ ಮಾಹಿತಿ ತಲುಪಬೇಕು. ರಾಯಚೂರು ಜಿಲ್ಲೆ ಏಡ್ಸ್‌ನಲ್ಲಿ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದರು.
 
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಸಿ.ನಾಡಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಕೆ.ಎಸ್‌. ನಸೀರ್‌, ಡಾ| ಸುರೇಂದ್ರ ಬಾಬು, ಡಾ| ಗಣೇಶ ಕೆ., ಡಾ| ವಿಜಯಾ ಕೆ., ರೆಡ್‌ಕ್ರಾಸ್‌ ಸಂಸ್ಥೆ, ಲಯನ್ಸ್‌ ಕ್ಲಬ್‌, ರೆಡ್‌ ರಿಬ್ಬನ್‌ ಕ್ಲಬ್‌ ಹೊಸ ಬೆಳಕು, ಆಪ್ತಮಿತ್ರ ಸಂಸ್ಥೆ ಹಾಗೂ ಎನ್‌ಎಸ್‌ಎಸ್‌, ಎನ್‌ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ಆರೋಗ್ಯ ಇಲಾಖೆ ಕಚೇರಿವರೆಗೆ ಜಾಗೃತಿ ಜಾಥಾ ನಡೆಸಲಾಯಿತು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.