ಬಸವೇಶ್ವರ ದೇಗುಲ ಮುಳುಗಡೆ

•ಲಿಂಗಸುಗೂರು-ದೇವದುರ್ಗ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ ತಾಲೂಕಾಡಳಿತ ಕಟ್ಟೆಚ್ಚರ •ನದಿಗೆ ಇಳಿಯದಂತೆ ಗ್ರಾಮಗಳಲ್ಲಿ ಡಂಗೂರ

Team Udayavani, Jul 30, 2019, 12:57 PM IST

rc-tdy-2

ದೇವದುರ್ಗ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್‌ ನೀರು ಬಿಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಹೂವಿಹೆಡಗಿ ಗ್ರಾಮದ ನದಿ ತೀರದಲ್ಲಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಮುಳುಗಡೆ ಆಗಿ ಗೋಪುರ ಮಾತ್ರ ಕಾಣುತ್ತಿದೆ.

ದೇವದುರ್ಗ: ನಾರಾಯಣಪುರ ಬಸವಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ 1.20 ಲಕ್ಷ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟಿದ್ದರಿಂದ ತಾಲೂಕಿನ ಹೂವಿನಹೆಡಗಿ ಗ್ರಾಮದ ಕೃಷ್ಣ ನದಿ ಸೇತುವೆ ಮುಳುಗಡೆಗೆ ಒಂದು ಅಡಿ ಬಾಕಿ ಇದೆ. ಗ್ರಾಮದ ನದಿ ತೀರದ ಐತಹಾಸಿಕ ಶ್ರೀ ಗಡ್ಡೆಗೊಳ್ಳಿ ಬಸವೇಶ್ವರ ದೇವಸ್ಥಾನ ಮುಳುಗಡೆ ಆಗಿದೆ.

ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಹೂವಿನಹೆಡಗಿ ಗ್ರಾಮದ ನದಿ ತೀರದಲ್ಲಿನ ಶ್ರೀ ಗಡ್ಡೆಗೂಳಿ ಬಸವೇಶ್ವರ ದೇಗುಲ ಮುಳುಗಡೆ ಆಗಿದ್ದು, ದೇವಸ್ಥಾನದಲ್ಲಿ ಪ್ರತಿ ಸೋಮವಾರ ನಡೆಯುವ ವಿಶೇಷ ಪೂಜೆ, ಪುನಸ್ಕಾರ ಸ್ಥಗಿತವಾಗಿವೆ. ಯಾವುದೇ ಸಂದರ್ಭದಲ್ಲಾದರೂ ನಾರಾಯಣಪುರ ಬಸವಸಾಗರ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿ ದಂಡೆಯ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊಪ್ಪರ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ, ಅಣೆಮಲ್ಲೇಶ್ವರ ದೇವಸ್ಥಾನದಲ್ಲಿ ಮುಂಜಾಗ್ರತಾ ಕ್ರಮ ವಹಿಸುವಂತೆ ತಾಲೂಕು ಆಡಳಿತ ದೇವಸ್ಥಾನ ಮಂಡಳಿಗಳಿಗೆ ಎಚ್ಚರಿಸಿದೆ.

ಸಂಚಾರ ಸ್ಥಗಿತ ಸಂಭವ:ಬಸವಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. 2 ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ಪ್ರಮಾಣದಲ್ಲಿ ನದಿಗೆ ನೀರು ಬಿಟ್ಟಲ್ಲಿ ರಾಯಚೂರು-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಈಗಾಗಲೇ ತಿಂಥಣಿ ಬ್ರಿಡ್ಜ್ ಮಾರ್ಗದಲ್ಲಿ ಸೂಚನಾ ಫಲಕ ಅಳವಡಿಸಲು ತಯಾರಿ ನಡೆಸಿದೆ.

ನದಿಗೆ ಇಳಿಯಬೇಡಿ: ಬಸವಸಾಗರ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದ್ದರಿಂದ ನದಿ ಮೈದುಂಬಿ ಹರಿಯುತ್ತಿದ್ದು, ತಾಲೂಕು ಆಡಳಿತ ನದಿಗೆ ಇಳಿಯದಂತೆ ನದಿ ತೀರದ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದೆ.

ತಾಲೂಕಿನ ಕೃಷ್ಣಾನದಿ ತೀರದ ನಿಲವಂಜಿ, ಲಿಂಗದಹಳ್ಳಿ, ಬಾಗೂರು, ಅಂಜಳ, ಅಂಚೆಸೂಗುರು, ಹೇರುಂಡಿ, ಗೋಪಾಳಪುರು, ವಗಂಡಬಳಿ, ಹೂವಿನಹೆಡಗಿ, ದೊಂಡಂಬಳಿ, ಕೊಣಚಪ್ಪಳ್ಳಿ, ಮ್ಯಾದರಗೋಳು, ಕರ್ಕಿಹಳ್ಳಿ, ಪರ್ತಾಪುರು, ಹೂನ್ನೂರು, ಅರಷಿಣಗೆ, ಹಿರೇರಾಯಕುಂಪಿ, ಕೂಳ್ಳೂರು, ಮದರಕಲ್ ಸೇರಿ ಇನ್ನಿತರ ಗ್ರಾಮಗಳ ನಿವಾಸಿಗಳಿಗೆ ನದಿ ಪ್ರವೇಶಕ್ಕೆ ಹೋಗದಂತೆ ತಾಲೂಕು ಆಡಳಿತ ಸೂಚನೆ ನೀಡಿದೆ. ದನಕರುಗಳಿಗೆ ನೀರು ಕುಡಿಸಲು ನದಿ ದಡಕ್ಕೆ ಹೋಗದಂತೆ ಎಚ್ಚರಿಕೆ ನೀಡಿದೆ. ನದಿ ಪ್ರವಾಹಕ್ಕೆ ಸಿಲುಕುವ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಗ್ರಾಮ ಲೆಕ್ಕಾಧಿಕಾರಿಗಳು ಬೀಡು ಬಿಟ್ಟಿದ್ದು ಗ್ರಾಮದಲ್ಲಿ ಕೈಗೊಳ್ಳುವ ಮುಂಜಾಗ್ರತಾ ಕ್ರಮದ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸುತ್ತಿದ್ದಾರೆ.

ಬಸವ ಸಾಗರದಿಂದ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟಿದ್ದು ನದಿ ತೀರದ ಗ್ರಾಮಗಳಲ್ಲಿ ಡಂಗುರ ಸಾರಿ ನದಿಯತ್ತ ಹೋಗದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪ್ರವಾಹ ಎದುರಿಸಲು ತಾಲೂಕು ಆಡಳಿತ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ.•ಮಂಜುನಾಥ, ತಹಶೀಲ್ದಾರ್‌, ದೇವದುರ್ಗ

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.