ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್
Team Udayavani, Dec 7, 2021, 3:15 PM IST
ಕುಷ್ಟಗಿ: ರಾಯಚೂರು ಜಿಲ್ಲೆಯ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಅಲ್ಲಿ ಇದೇ ಮೈತ್ರಿ ಮುಂದುವರೆದರೆ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಗೆ ಯಾವೂದೇ ಪಕ್ಷದ ಸಿಂಬಲ್ ಇಲ್ಲ. ಅವರು ಅಭ್ಯರ್ಥಿ ನೋಡಿ ಓಟ್ ಹಾಕುತ್ತಾರೆ ಎಂದರು.
ಕೊಪ್ಪಳ-ರಾಯಚೂರು ಜಿಲ್ಲೆಗಳ ಯಾವುದೇ ಪಂಚಾಯತಿಯಲ್ಲಿ ಶೇ.80ರಷ್ಟು ಸದಸ್ಯರು ನಮ್ಮ ಪಕ್ಷದ ಆಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಆಭ್ಯರ್ಥಿ ವಿಶ್ವನಾಥ ಬನಹಟ್ಟಿ ಗೆಲ್ಲುವುದು ಖಚಿತ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.