ಎರಡೂ ನದಿ ಬರಿದು: ಹೋಳಿ ಆಚರಣೆಗೆ ಜಲಸಂಕಟ

Team Udayavani, Mar 21, 2019, 12:13 PM IST

bid-3.jpg

ರಾಯಚೂರು: ನಗರ ಸೇರಿ ಜಿಲ್ಲೆಯ ವಿವಿಧೆಡೆ ಗುರುವಾರ ಹೋಳಿ ಸಂಭ್ರಮಾಚರಣೆ ಜೋರಾಗಲಿದ್ದು, ಬಣ್ಣ ಬಳಿದುಕೊಂಡ ಯುವಕರಿಗೆ ನೀರಿನ ಸಮಸ್ಯೆ ಎದುರಾಗಿದೆ. ಜಿಲ್ಲೆಯ ಎರಡು ನದಿಗಳಾದ ಕೃಷ್ಣೆ, ತುಂಗಭದ್ರೆ ನದಿ ಒಡಲು ಬರಿದಾಗಿದ್ದರೆ, ಇತ್ತ ಮನೆಗಳಲ್ಲೂ ನೀರಿನ ಕೊರತೆ ಕಾಡುತ್ತಿದೆ.

ಸಾಮಾನ್ಯವಾಗಿ ಯುವಕರು ಬಣ್ಣದಾಟ ಮುಗಿದ ಬಳಿಕ ಸ್ನಾನಕ್ಕೆ ನದಿಗಳತ್ತ ಹೋಗುವುದು ವಾಡಿಕೆ. ಆದರೆ, ಈ ಬಾರಿ ಎರಡೂ ನದಿಗಳು ಬರಿದಾಗಿವೆ. ಇದರಿಂದ ನದಿಗಳಿಗೆ ತೆರಳಿದರೂ ಅಲ್ಲಲ್ಲಿ ನಿಂತ ನೀರಿನಲ್ಲಿಯೇ ಸ್ನಾನಾದಿ ಕರ್ಮಗಳನ್ನು ಮುಗಿಸಿಕೊಂಡು ಬರಬೇಕಿದೆ. ಇನ್ನು ನಗರದಲ್ಲಿ ಮೂರು ದಿನಕ್ಕೊಮ್ಮೆ ನೀರು ಬಿಡುತ್ತಿರುವ ಕಾರಣ ನೀರಿನ ಅಭಾವ ಕಾಡದೆ ಇರಲಿಕ್ಕಿಲ್ಲ.
 
ಜಿಲ್ಲೆಯ ಕೆಲವೆಡೆ ಗುರುವಾರ, ಮತ್ತೆ ಕೆಲವೆಡೆ ಶುಕ್ರವಾರ ಹಬ್ಬ ಆಚರಿಸಿದರೆ ಕೆಲವೆಡೆ ಆಡುವುದಿಲ್ಲ. ಸಿಂಧನೂರಿನಲ್ಲಿ
ಗುರುವಾರ ರಾತ್ರಿ ಕಾಮದಹನ ಮಾಡಲಾಗುತ್ತಿದ್ದು, ಶುಕ್ರವಾರ ಹಬ್ಬ ಆಚರಿಸಲಾಗುತ್ತಿದೆ. ಇನ್ನು ದೇವದುರ್ಗ ತಾಲೂಕು, ಲಿಂಗಸುಗೂರು ತಾಲೂಕಿನ ಹಟ್ಟಿಯಲ್ಲಿ ಹೋಳಿ ಬದಲಿಗೆ ಯುಗಾದಿಗೆ ಬಣ್ಣದಾಟ ಆಡುತ್ತಾರೆ. ಆದರೆ, ನಗರದಲ್ಲಿ ಗುರುವಾರ ಹಬ್ಬ ಆಚರಣೆಗೆ ಸಿದ್ಧತೆಗಳು ಜೋರಾಗಿಯೇ ನಡೆದಿದ್ದವು. ಕೆಲ ಖಾಸಗಿ ಸಂಸ್ಥೆಗಳು ಹಬ್ಬ ಆಡಲು ವಿಶೇಷ ವ್ಯವಸ್ಥೆ ಮಾಡುವ ಪರಿಪಾಟವಿದ್ದು, ಈ ಬಾರಿಯೂ ಸಿದ್ಧತೆ ಮಾಡಿಕೊಳ್ಳಲಾಗಿದೆ.
 
ವ್ಯಾಪಾರ ವಹಿವಾಟು ಜೋರು: ಬಣ್ಣದಾಟಕ್ಕೆ ಮಾರುಕಟ್ಟೆಗೆ ವಿಧ ವಿಧವಾದ ಬಣ್ಣಗಳು ಲಗ್ಗೆ ಇಟ್ಟಿವೆ. ಕೆಲವೆಡೆ ಪುಡಿ
ಬಣ್ಣಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಆದರೆ, ಬಹುತೇಕ ಕೆಮಿಕಲ್‌ ಮಿಶ್ರಿತ ಬಣ್ಣ ಇರುವುದು ಕಂಡು ಬಂತು. ಸ್ವಲ್ಪವೇ
ಬಳಸಿದರೂ ಚರ್ಮಕ್ಕೆ ಹೆಚ್ಚು ಬಣ್ಣ ಅಂಟಿಕೊಳ್ಳುವಂಥ ಬಣ್ಣಗಳೇ ಕಂಡು ಬಂತು. ಮಾರುಕಟ್ಟೆಯಲ್ಲಿ ಬುಧವಾರ
ಮಕ್ಕಳು, ಪಾಲಕ ರು ಬಣ್ಣ, ಪಿಚಕಾರಿ ಖರೀದಿಸುತ್ತಿರುವುದು ಕಂಡು ಬಂತು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.