ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ
Team Udayavani, May 21, 2022, 12:42 PM IST
ರಾಯಚೂರು: ನಮ್ಮ ಊರಿನಲ್ಲಿ ಪಾನಿಪುರಿ ಮಾರುವರೇ ಗುಜರಾತ್ ನವರು. ಪಾನ್ ಮಸಾಲಾ ಮಾರುವವವರು ಗುಜರಾತ್ ನವರೇ. ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಳೆದ 36 ವರ್ಷದಿಂದಿದೆ. ಜನರಿಗೆ ಜೆಡಿಎಸ್ ಪರಿಚಯ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಕನ್ನಡಿಗರು ಪ್ರಧಾನಿಯಾಗಿದ್ದ ಪಕ್ಷ ನಮ್ಮದು. ಹತ್ತಾರು ನೀರಾವರಿ ಯೋಜನೆಗಳನ್ನು ನಮ್ಮ ದೇವೇಗೌಡರು ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡರೆ ನಾವೇ ದೇಶಕ್ಕೆ ನಂಬರ್ ಒನ್ ಆಗುತ್ತೇವೆ ಎನ್ನುವ ಮೂಲಕ ಬಿಜೆಪಿ ಗುಜರಾತ್ ಮಾಡಲ್ ಪ್ರಚಾರಕ್ಕೆ ಟಾಂಗ್ ಕೊಟ್ಟರು .
ಕಾಂಗ್ರೆಸ್ ಮತ್ತು ಬಿಜೆಪಿ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳಿದ್ದಂತೆ. ಇಬ್ಬರ ನಡುವೆ ಕಮಿಷನ್ ವಿಚಾರವಾಗಿ ಜಗಳ ನಡೆಯುತ್ತಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್ 20 ಪರ್ಸೆಂಟ್, ಬಿಜೆಪಿ 40 ಪರ್ಸೆಂಟ್ ಕಮಿಷನ್ ವಿಚಾರವಾಗಿ ಅವರ ನಡುವೆಯೇ ಜಗಳ ಶುರುವಾಗಿದೆ ಎಂದರು.
ಇದನ್ನೂ ಓದಿ:ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್
ಯಾವುದೋ ಊರಿನಲ್ಲಿ ಇರುವ ಮಸೀದಿ ವಿಚಾರ ನಮ್ಮ ಊರಿನ ಸಾಹೇಬರಿಗೆ ಯಾಕೆ ಬೇಕು. ಕರ್ನಾಟಕದ ಜನರಿಗೆ ಜ್ಞಾನವಾಪಿ ಸಂಬಂಧವಿಲ್ಲದ ವಿಷಯ. ಯುಪಿಯಲ್ಲಿ ಏನು ನಡೆಯುತ್ತಿದೆಯೊ ನಮಗೇನು ಗೊತ್ತು. 1.36 ಕೋಟಿ ಸಾಹೇಬರು, ಆರುವರೆ ಕೋಟಿ ಜನರು ಒಂದೇ ತಾಯಿಮಕ್ಕಳಂತೆ ಇದ್ದೇವೆ. ನಮಗೆ ನಮ್ಮ ನಾಡು ನಮ್ಮ ಊರು ಮುಖ್ಯ. ಇಲ್ಲಿ ಸರ್ವೇ ಮಾಡಬೇಕಾ ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ
ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್ಕುಮಾರ್ ಕಟೀಲ್
ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ;ಲಕ್ಷ್ಮಣ ನಿಂಬರಗಿ, ಹರಿರಾಂ ಶಂಕರ್ ಸೇರಿ ಹಲವರ ವರ್ಗಾವಣೆ