ರಾಯಚೂರು: ತೈಲ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಹೋರಾಟ
Team Udayavani, Jun 11, 2021, 12:18 PM IST
ರಾಯಚೂರು: ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಹಾಗೂ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ನಿಂದ ನಗರದ ವಿವಿಧ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ನಿಂದ ದೇಶ ವ್ಯಾಪಿ ನೀಡಿದ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಹೋರಾಟ ಕೈಗೊಳ್ಳಲಾಗಿದೆ. ನಗರದ ಗಂಜ್ ಸರ್ಕಲ್ ಹಾಗೂ ಗಾಂಧಿ ವೃತ್ತ ಸಮೀಪದ ಬಂಕ್ ಗಳ ಎದುರು ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಕೈಗೆಟುಕದಂತಾಗಿದೆ. ಬಡಜನರಿಗೆ ಆರ್ಥಿಕ ಹೊರೆಯಾಗಿದ್ದು, ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಬೆಲೆ ಇಳಿಕೆ ಸರ್ಕಾರ ಮುಂದಾಗಲಿ ಎಂದು ಒತ್ತಾಯಿಸಿದರು. ಪಕ್ಷದ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ