ಕೋವಿಡ್‌ ನಿರ್ವಹಣೆ ವೈಫಲ್ಯ: ಸವದಿ ಗರಂ


Team Udayavani, Aug 8, 2020, 4:27 PM IST

ಕೋವಿಡ್‌ ನಿರ್ವಹಣೆ ವೈಫಲ್ಯ: ಸವದಿ ಗರಂ

ರಾಯಚೂರು: ಕೋವಿಡ್‌ ಆಸ್ಪತ್ರೆ, ಕೇರ್‌ ಸೆಂಟರ್‌ಗಳಲ್ಲಿ ಸೋಂಕಿತರನ್ನು ನಡೆಸಿಕೊಳ್ಳುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ವರ್ತನೆ ಸುಧಾರಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ , ನೆರೆ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕೋವಿಡ್‌ ಸಂಬಂಧಿಸಿದಂತೆ ರಿಮ್ಸ್‌ ಹಾಗೂ ಒಪೆಕ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ದೂರುಗಳಿವೆ. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಮೂರು ದಿನದಿಂದ ವಿದ್ಯುತ್‌ ಇಲ್ಲ ಎಂದು ವರದಿಯಾಗಿದೆ. ಯಾಕೆ ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ಕೇಳಿದರು. ಈ ಬಗ್ಗೆ ಸ್ಪಷ್ಟೀಕರಣ ಕೇಳಿದಾಗ ಜೆಸ್ಕಾಂ ಅಧಿಕಾರಿ ಸಭೆಗೆ ಗೈರಾಗಿದ್ದರು. ಕೂಡಲೇ ಅವರಿಗೆ ನೋಟಿಸ್‌ ನೀಡುವಂತೆ ಸಚಿವ ಸೂಚಿಸಿದರು.

ಇದಕ್ಕೆ ದನಿಗೂಡಿಸಿದ ಮಾನ್ವಿ ಶಾಸಕ ರಾಜಾ ವೆಂಟಕಪ್ಪ ನಾಯಕ, ಸೋಂಕಿತರು ಒಪೆಕ್‌ನಲ್ಲಿ ಊಟಕ್ಕಾಗಿ ಸಾಲು ನಿಲ್ಲಬೇಕಿದೆ. ಸರ್ಕಾರ ಹಣ ಪಾವತಿಸಿದರೂ ಇಂಥ ಕರ್ಮವೇಕೆ ಎಂದು ದೂರಿದರು. ಇದಕ್ಕೆ ಸಿಂಧನೂರು ಶಾಸಕ ನಾಡಗೌಡ ದನಿಗೂಡಿಸಿದರು. ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಬೇರೆ ಜಿಲ್ಲೆಗಳಲ್ಲಿ ಆಯುಷ್‌ ಇಲಾಖೆಯಿಂದ ಔಷಧ ವಿತರಿಸಳಾಗುತ್ತಿದೆ. ಉಷ್ಣಾಂಶ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ನೀವೇನು ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಅದಕ್ಕೆ ಡಿಎಚ್‌ಒ ಡಾ.ರಾಮಕೃಷ್ಣ ನಿರುತ್ತರರಾದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ, ಡಿಎಚ್‌ಒ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳಿವೆ.

ಕೋವಿಡ್ ಗೆ ಈವರೆಗೂ ಔಷಧ ಸಿಕ್ಕಿಲ್ಲ. ಜನ ಖಾಸಗಿ ಆಸ್ಪತ್ರೆಗೆ ಹೋದರೆ ಲಕ್ಷಾಂತರ ಹಣ ಪಾವತಿಸಬೇಕು. ಬಡವರು ಎಲ್ಲಿಂದ ತರಬೇಕು. ಆದರೆ, ನೀವು ಸರಿಯಾದ ಉಪಚಾರ ಮಾಡದಿರುವುದಕ್ಕೆ ಜನರಲ್ಲಿ ಅಪನಂಬಿಕೆ ಇದೆ. ಸೋಂಕಿತರು ಸರ್ಕಾರಿ ಆಸ್ಪತ್ರೆಗಳಿಗೆ ಬರಲು ಭಯಪಡುತ್ತಿದ್ದಾರೆ. ಸೋಂಕು ಹರಡದಂತೆ ತಡೆಯಲೆಂದೇ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುತ್ತಾರೆ. ಆದರೆ, ಅಲ್ಲೀಯೇ ಅವ್ಯವಸ್ಥೆ ಇದ್ದರೆ ಹೇಗೆ? ಸೋಂಕಿತರನ್ನು ನಿತ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸುವಂತೆ ವೈದ್ಯರಿಗೆ ಸೂಚನೆ ನೀಡಿ ಎಂದು ತಿಳಿಸಿದರು.

ಪ್ರವಾಹ ಎದುರಿಸಲು ಸಿದ್ಧರಾಗಿ: ಪ್ರವಾಹ ಸ್ಥಿತಿ ಬಗ್ಗೆ ಅವಲೋಕಿಸಿದ ಸಚಿವ ಸವದಿ, ನದಿಪಾತ್ರಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಪ್ರವಾಹ ಹೆಚ್ಚಿದ್ದಾಗ ಸಣ್ಣ ಬೋಟ್‌ಗಳಿಂದ ಉಪಯೋಗವಿಲ್ಲ. ಗುಣಮಟ್ಟದ ಬೋಟ್‌ ಖರೀದಿಸಬೇಕು. ನದಿಗೆ ಎಷ್ಟು ಪ್ರಮಾಣದಲ್ಲಿ ನೀರು ಬರುತ್ತವೆ ಎಂಬ ಮಾಹಿತಿ ಆಧರಿಸಿ ಕ್ರಮ ಕೈಗೊಳ್ಳಬೇಕು. ಇತರೆ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಎಂದರು.

ಸಹಾಯಕ ಆಯುಕ್ತ ಸಂತೋಷ ಕಾಮಗೌಡರ್‌ ಮಾತನಾಡಿ, ಕೃಷ್ಣಾನದಿ ತೀರದ ಜನರನ್ನು ಸುರಕ್ಷಿತ ಸ್ಥಳಗಳ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಕೃಷ್ಣಾ ಹಾಗೂ ತುಂಗಭದ್ರಾ ನದಿ ಪ್ರವಾಹ ಪೀಡಿತ 105 ಗ್ರಾಮಗಳಿಗೆ ಸಂಬಂಧಿಸಿ 32 ಗ್ರಾಪಂಗಳಲ್ಲಿ ವಿಪತ್ತು ನಿರ್ವಹಣ ಸಮಿತಿ ರಚಿಸಲಾಗಿದೆ. ನಾರಾಯಣಪುರ ಜಲಾಶಯದಿಂದ ಸುಮಾರು ಮೂರು ಲಕ್ಷ ಕ್ಯೂಸೆಕ್‌ ನೀರು ಹರಿಸಿದರೂ ಸಮಸ್ಯೆ ಇಲ್ಲ ಎಂದು ವಿವರಿಸಿದರು.

ಜಂಟಿ ನಿರ್ದೇಶಕ ತರಾಟೆಗೆ: ಸಿಂಧನೂರು ಶಾಸಕ ವೆಂಕಟರಾವ್‌ ನಾಡಗೌಡ ಮಾತನಾಡಿ, ಕಷ್ಟಪಟ್ಟು ನಮ್ಮ ತಾಲೂಕಿಗೆ ಅಲೊಕೇಶನ್‌ ಮಾಡಿಸಿದ್ದ ಯೂರಿಯಾ ಗೊಬ್ಬರವನ್ನು ಬೇರೆಯವರಿಗೆ ಹಂಚಿಕೆ ಮಾಡಲಾಗಿದೆ. ಗೊಬ್ಬರಕ್ಕಾಗಿ ನಾವು ರೌಡಿಸಂ ಮಾಡಬೇಕೆ ಎಂದು ಪ್ರಶ್ನಿಸಿದರು. ಇದಕ್ಕೆ ಮಾನ್ವಿ ಶಾಸಕ, ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ, ಕೊಪ್ಪಳ ಸಂಸದ ಸಂಗಣ್ಣ ಕರಡಿ ದನಿಗೂಡಿಸಿದರು. ಈ ಕುರಿತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಹಬೀದ್‌ ಮಾತನಾಡಿ, ಬೇಡಿಕೆಯಷ್ಟು ಪೂರೈಕೆಯಾಗಿಲ್ಲ ಎಂದರು.

ಇದರಿಂದ ಬೇಸರಗೊಂಡ ಸಚಿವ, ರಸಗೊಬ್ಬರ ಕೊರತೆ ಇರುವ ನನ್ನ ಗಮನಕ್ಕೆ ಯಾಕೆ ತರಲಿಲ್ಲ. ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರ ಸಮಸ್ಯೆಯಾಗಬಾರದು ಎಂಬುವುದನ್ನು ಆದೇಶಗಳ ಮೂಲಕ ಮಾಹಿತಿ ನೀಡಲಾಗಿದೆ. ಆದರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದರು. ಸಂಸದ ಅಶೋಕಗಸ್ತಿ, ಜಿಲ್ಲಾ ಕಾರಿ ಆರ್‌.ವೆಂಕಟೇಶ ಕುಮಾರ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಿಇಒ ಲಕ್ಷ್ಮೀಕಾಂತರೆಡ್ಡಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.