ಪ್ರಧಾನಿ ಕಚೇರಿ ಆದೇಶಕ್ಕೂ ಕ್ಯಾರೆ ಎನ್ನದ ಜಿಪಂ!


Team Udayavani, Mar 10, 2020, 1:03 PM IST

rc-tdy-2

ರಾಯಚೂರು: ಜಿಲ್ಲಾ ಕೇಂದ್ರದಿಂದ ಕೇವಲ 6 ಕಿಮೀ ಅಂತರದಲ್ಲಿರುವ ತಾಲೂಕಿನ ಕುಕುನೂರು ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರಸ್ತಿ ಮಾಡುವಂತೆ ಪ್ರಧಾನಮಂತ್ರಿ ಕಚೇರಿಯಿಂದ ಸೂಚನೆ ಬಂದರೂ ಜಿಪಂ ಕ್ಯಾರೆ ಎನ್ನುತ್ತಿಲ್ಲ. ಅನಗತ್ಯ ಕಾಲಕ್ಷೇಪ ಮಾಡುತ್ತಿದ್ದು, ನಮ್ಮ ಸಮಸ್ಯೆಗೆ ಇನ್ಯಾರು ಸ್ಪಂದಿಸಿಯಾರು ಎಂಬ ಜಿಜ್ಞಾಸೆ ಮೂಡಿದೆ.

ರಸ್ತೆ ದುರಸ್ತಿ ಮಾಡಿಸುವಂತೆ ಗ್ರಾಮದ ಮುಖಂಡ ರಾಜಶೇಖರ ಪಾಟೀಲ ಪ್ರಧಾನಿ ಕಚೇರಿಗೇ ದೂರು ಸಲ್ಲಿಸಿದ್ದರು. ಇ-ಜನಸ್ಪಂದನ (ಗೌರ್ನೆನ್ಸ್‌) ಆ್ಯಪ್‌ ಮೂಲಕ ಅ.15ರಂದು ಪ್ರಧಾನಮಂತ್ರಿ ಕಚೇರಿಗೆ ಸಲ್ಲಿಸಿದ್ದ ದೂರಿಗೆ ಕೇವಲ 19 ದಿನಗಳಲ್ಲಿ ಸ್ಪಂದನೆ ಸಿಕ್ಕಿತ್ತು. ಜಿಪಂ ಕಚೇರಿಗೆ ಪಿಎಂ ಕಚೇರಿಯಿಂದ ನಿರ್ದೇಶನ ಬಂದಿತ್ತು. ಆದರೆ, ಅದಾಗಿ ನಾಲ್ಕು ತಿಂಗಳಾದರೂ ಈವರೆಗೆ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ವಾಜಪೇಯಿ ಜಾರಿಗೊಳಿಸಿದ ಗ್ರಾಮ ಸಡಕ್‌ ಯೋಜನೆಯಡಿ ಗ್ರಾಮಕ್ಕೆ ರಸ್ತೆ ನಿರ್ಮಿಸಲಾಗಿತ್ತು. ಅದಾದ ಮೇಲೆ ಕೆಲ ವರ್ಷ ನಿರ್ವಹಣೆ ಕಂಡಿದ್ದ ರಸ್ತೆ ತದನಂತರ ಸಂಪೂರ್ಣ ಹಾಳಾಗಿದೆ. ಹೈದರಾಬಾದ್‌ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಈ ಮಾರ್ಗವಾಗಿ ಕುಕುನೂರು ಮಾತ್ರವಲ್ಲದೇ ಮರ್ಚೆಡ್‌, ಜೇಗರಕಲ್‌, ಮಲ್ಲಾಪುರ ಸೇರಿದಂತೆ ವಿವಿಧ ಹಳ್ಳಿಗಳ ನೂರಾರು ಜನ ಓಡಾಡುತ್ತಾರೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ, ಈಗಿನ ರಸ್ತೆ ಸ್ಥಿತಿ ಕಂಡ ಸವಾರರ ಮೂಳೆ ಸಡಿಲಾದರೆ, ವಾಹನಗಳು ಬಿಡಿಭಾಗಗಳು ಕಳಚಿ ಬೀಳುವಂತಾಗಿದೆ.  ಕೇವಲ ಮೂರು ಕಿಮೀ ರಸ್ತೆ ಇದ್ದು, ಅದನ್ನು ದುರಸ್ತಿ ಮಾಡಲು ಇಷ್ಟೆಲ್ಲ ನಿರ್ಲಕ್ಷ್ಯ ತೋರುತ್ತಿರುವುದು ವಿಪರ್ಯಾಸ.

ಸಮನ್ವಯ ಕೊರತೆ: ಜಿಪಂ ಸಿಇಒ ಅವರು ಪಿಎಂಜಿಎಸ್‌ವೈ ವಿಭಾಗದ ಮುಖ್ಯ ಎಂಜಿನಿಯರ್‌ ರಸ್ತೆ ದುರಸ್ತಿ ಮಾಡಲು ಸೂಚಿಸಿದ್ದರು. ಆದರೆ, ಅದಕ್ಕೆ ಪ್ರತ್ಯುತ್ತರ ನೀಡಿದ ಎಂಜಿನಿಯರ್‌, ಕನಿಷ್ಟ 5 ಕಿಮೀ ಮೇಲ್ಪಟ್ಟ ರಸ್ತೆ ಮಾತ್ರ ಪಿಎಂಜಿಎಸ್‌ ವೈ ಯೋಜನೆಯಡಿ ದುರಸ್ತಿ ಮಾಡಬಹುದು. ಕುಕುನೂರು ರಸ್ತೆ ಕೇವಲ 3 ಕಿಮೀ ಇದ್ದು, ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.  ಇನ್ನು ಪಿಆರ್‌ಇಡಿ ಮುಖ್ಯ ಎಂಜಿನಿಯರಿಗೂ ಸಿಇಒ ಪತ್ರ ಬರೆದಿದ್ದಾರೆ. ಆದರೆ, ಪಿಆರ್‌ಇಡಿ ಹಣ ಮಂಜೂರು ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದು ಕೈ ತೊಳೆದುಕೊಂಡಿದೆ. ಈವರೆಗೂ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ.

ಪ್ರಯಾಣಿಕರಿಗೆ ಯಾತನೆ: ವೃದ್ಧರು, ಶಾಲಾ ಮಕ್ಕಳು, ಕೃಷಿಕರು, ಕೂಲಿ ಕಾರ್ಮಿಕರು ಹೀಗೆ ನೂರಾರು ಜನ ಇದೇ ಮಾರ್ಗದಲ್ಲಿ ಓಡಾಡುತ್ತಿದ್ದು, ಸೂಕ್ತ ಸಾರಿಗೆ ಸೌಲಭ್ಯವಿಲ್ಲದೇ ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ. ಸುಡುಬಿಸಿಲಲ್ಲೂ ಮಹಿಳೆಯರು ನಡೆದೇ ಹೋಗಬೇಕಿದೆ. ಕಚ್ಚಾ ರಸ್ತೆಯಾಗಿ ಮಾರ್ಪಟ್ಟ ಕಾರಣ ಖಾಸಗಿ ಆಟೋ ಚಾಲಕರು ಇತ್ತ ತಲೆ ಹಾಕುತ್ತಿಲ್ಲ. ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಗ್ರಾಮದ ಕತೆಯೇ ಹೀಗಾದರೆ ಕುಗ್ರಾಮಗಳ ಗತಿಯೇನು ಎಂದು ಪ್ರಶ್ನಿಸುತ್ತಾರೆ ಪ್ರಯಾಣಿಕರು.

ಕ್ಷೇತ್ರದಲ್ಲಿ ಬೇಡವಾದ ಕಡೆ ಕೋಟ್ಯಂತರ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸುತ್ತಿದ್ದಾರೆ. ಆದರೆ, ಅಗತ್ಯವಿರುವ ಕುಕುನೂರು ರಸ್ತೆ ದುರಸ್ತಿಗೆ ಪ್ರಧಾನಮಂತ್ರಿ ಕಚೇರಿ ಸೂಚಿಸಿದರೂ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ.  ಬಗ್ಗೆ ನಿರಂತರ ಪ್ರಯತ್ನ ನಡೆಸಿದ್ದು, ಅಧಿಕಾರಿಗಳನ್ನು ಭೇಟಿ ಮಾಡಿ ಸಾಕಾಗಿದೆ. ಈಗ ಪಿಆರ್‌ಇಡಿಯಿಂದ ಅನುಮೋದನೆಗೆ ಪತ್ರ ಕಳುಹಿಸಿದ್ದಾಗಿ ತಿಳಿದು ಬಂದಿದೆ. ಶೀಘ್ರದಲ್ಲೇ ದುರಸ್ತಿ ಕೈಗೊಳ್ಳದಿದ್ದಲ್ಲಿ ಎಲ್ಲ ದಾಖಲೆ ಸಮೇತ ಪುನಃ ಇ-ಗೌರ್ನೆನ್ಸ್‌ ಮೂಲಕ ದೂರು ಸಲ್ಲಿಸುವೆ. –ರಾಜಶೇಖರ ಪಾಟೀಲ, ಕುಕುನೂರು ಗ್ರಾಮಸ್ಥ.

ಅಧಿಕಾರಿಗಳು ರಸ್ತೆಗಳ ದುರಸ್ತಿಯನ್ನು ಯಾವ ಯೋಜನೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಪಿಎಂ ಕಚೇರಿ ಸೂಚನೆ ಬಗ್ಗೆ ಗಮನಕ್ಕೆ ಬಂದಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಪರಿಶೀಲಿಸಿ ರಸ್ತೆ ದುರಸ್ತಿಗೆ ಕ್ರಮ ವಹಿಸಲಾಗುವುದು.-ಆರ್‌. ವೆಂಕಟೇಶ ಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11addmission

ಶಾಲೆಗೆ ಹೋಗೋಣ ಬನ್ನಿರೋ…!

17pipe

ಬೇಕಾಬಿಟ್ಟಿ ಪೈಪ್‌ಲೈನ್‌ ಕಾಮಗಾರಿಗೆ ವ್ಯಾಪಕ ಆಕ್ರೋಶ

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

14satyagraha

ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸಹಾಯಕ ಆಯುಕ್ತರ ಭೇಟಿ

13former

ಕೃಷಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.