ಮಗನನ್ನು ಪರೀಕ್ಷೆಗೆ ಕರೆದೊಯ್ಯುವ ವೇಳೆ ಅಪಘಾತ: ತಂದೆ ಸಾವು
Team Udayavani, Jun 25, 2020, 11:38 AM IST
ರಾಯಚೂರು: ಮಗನನ್ನು ಪರೀಕ್ಷೆಗೆ ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿದ್ದು,ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮೀಯ್ಯಾಪುರ ಗ್ರಾಮದ ಬಳಿನಡೆದಿದೆ.
ನಾಗಾರೆಡ್ಡಿ ಮೀಯ್ಯಾಪುರ (52) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ.
ಮೀಯ್ಯಾಪುರ ಗ್ರಾಮದಿಂದ ಗಬ್ಬೂರಿಗೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಮಗನನ್ನು ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಸು ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆಗೆ ತೀವ್ರವಾಗಿ ಪೆಟ್ಟು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗಬ್ಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ