ಕೊರೊನಾ ಸೋಂಕಿತರು ಕಂಡು ಬಂದರೆ ಮಾಹಿತಿ ನೀಡಿ: ಬನದೇಶ


Team Udayavani, Mar 15, 2020, 5:21 PM IST

15-March-32

ದೇವದುರ್ಗ: ಕೊರೊನಾ ಸೋಂಕು ಹಬ್ಬುವುದನ್ನು ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಇದು ಹರಡದಂತೆ ಎಚ್ಚರಿಕೆ ವಹಿಸಲು ತಾಲೂಕಿನ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆ ವೈದ್ಯರು ವಿದೇಶದಿಂದ ಬರುವ ಹಾಗೂ ಶಂಕಿತ ವ್ಯಕ್ತಿಗಳ ಕುಟುಂಬ, ಪ್ರದೇಶದಿಂದ ಬರುವ ರೋಗಿಗಳ ಬಗ್ಗೆ ಕೂಡಲೇ ತಾಲೂಕು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳ ವೈದ್ಯರಿಗೆ ವಿಡಿಯೋ ಕಾನ್ಫ್ರೆನ್ಸ್‌ ನಡೆಸಿ ಅವರು ಮಾತನಾಡಿದರು. ವಿದೇಶದಿಂದ ಬರುವವರು ಮತ್ತು ಭಾರತದಿಂದ  ದೇಶಕ್ಕೆ ಹೋಗಿ ಬರುವವರ ಬಗ್ಗೆ ಎಚ್ಚರದಿಂದಿರಬೇಕು. ಆದ್ದರಿಂದ ಅಂತಹ ವ್ಯಕ್ತಿಗಳು ತಾಲೂಕಿನ ಯಾವುದೇ ವೈದ್ಯರ ಬಳಿ ಚಿಕಿತ್ಸೆಗೆ ಬಂದಾಗ ಅವರ ಪ್ರವಾಸದ ಇತಿಹಾಸ ತಿಳಿದುಕೊಳ್ಳಬೇಕು. ಒಂದು ವೇಳೆ ಅಂತಹ ಪ್ರದೇಶದಿಂದ ಬಂದಿದ್ದರೆ ಅಥವಾ ಕೊರೊನಾಕ್ಕೆ ತುತ್ತಾದ ಪ್ರದೇಶ ಅಥವಾ ಕುಟುಂಬದ ಸಂಬಂಧ ಹೊಂದಿರುವ ವ್ಯಕ್ತಿಗಳು ಬಂದಿದ್ದರೆ, ಕೂಡಲೇ ಮಾಹಿತಿ ನೀಡಬೇಕು. ಅವರನ್ನು ಪರೀಕ್ಷೆಗೊಳಪಡಿಸಿ 14 ದಿನದವರೆಗೆ ನಿಗಾ ವಹಿಸಲಾಗುತ್ತದೆ. ಅಂತಹ ಯಾವುದೇ ಲಕ್ಷಣಗಳು ಕಂಡುಬಂದರೆ ಜಿಲ್ಲಾ ರಿಮ್ಸ್‌ ಆಸ್ಪತ್ರೆಗೆ ಸೇರಿಸಲಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕರಿಗೆ, ಮಕ್ಕಳಿಗೆ ಮಾಸ್ಕ್ ಅವಶ್ಯಕತೆಯಿಲ್ಲ: ಕೊರೊನಾ ಸೋಂಕಿನ ಭಯದಿಂದ ಜನ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳುವಂತೆ ಹೇಳಲಾಗುತ್ತಿದೆ. ಆದರೆ ಆರೋಗ್ಯದಿಂದ ಇರುವ ಯಾರಿಗೂ ಮಾಸ್ಕ್ ಅವಶ್ಯಕತೆ ಇಲ್ಲ. ಶಾಲಾ ಮಕ್ಕಳಿಗೂ ಇದರ ಅಗತ್ಯವಿಲ್ಲ. ವೈದ್ಯರು ಹಾಗೂ ಸಿಬ್ಬಂದಿ ಮಾತ್ರ ತಮ್ಮ ಆರೋಗ್ಯ ರಕ್ಷಣೆಗಾಗಿ ಇವುಗಳನ್ನು ಉಪಯೋಗಿಸಬೇಕೆಂದು ಸ್ಪಷ್ಟಪಡಿಸಿದರು. ಒಂದು ವೇಳೆ ಮಾಸ್ಕ್ ಉಪಯೋಗಿಸಿದರೆ ಅದು ಕೇವಲ 8 ಗಂಟೆ ಮಾತ್ರ ಉಪಯೋಗಿಸಬೇಕು. ಹೆಚ್ಚಿನ ಅವಧಿ ಉಪಯೋಗಿಸಿದರೆ ಅದರಿಂದ ಅಡ್ಡ ಪರಿಣಾಮಗಳು ಬೀರುತ್ತವೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ಎಚ್ಚರಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ: ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಉಹಾ-ಪೋಹಗಳಿಂದ ಜನರು ಭಯ ಭೀತರಾಗಿದ್ದಾರೆ, ಜನರು ಭಯ ಪಡುವ ಅಗತ್ಯವಿಲ್ಲ. ದೇವದುರ್ಗ ತಾಲೂಕಿನಲ್ಲಿ ಯಾರಲ್ಲೂ ಕೊರೊನಾ ಸೋಂಕು ಕಂಡುಬಂದಿಲ್ಲ. ಆದ್ದರಿಂದ ಜನ ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದರು.

ಸ್ವಚ್ಛತೆ ಕಾಪಾಡಿ: ಪ್ರತಿ ಬಾರಿ ಕೈ ತೊಳೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ಕಚೇರಿ ಅಥವಾ ಮನೆಯ ವಸ್ತುಗಳನ್ನು ಸಹ ಸ್ವತ್ಛವಾಗಿರಿಸಿಕೊಳ್ಳಬೇಕು ಎಂದರು. ಯಾವುದೇ ವ್ಯಕ್ತಿಯ ಬಗೆ ಶಂಕೆ ವ್ಯಕ್ತಪಡಿಸಿ ರೋಗಕ್ಕೆ ತುತ್ತಾಗಿದ್ದಾರೆಂದು ಹೇಳುವ ಅಧಿಕಾರ ವೈದ್ಯರು, ಖಾಸಗಿ ವ್ಯಕ್ತಿಗಳಿಗಿಲ್ಲ. ಅಂತಹ ವ್ಯಕ್ತಿ ಕಂಡುಬಂದರೆ ತಾಲೂಕು ಆರೋಗ್ಯ ಇಲಾಖೆ ಸೋಂಕಿತರನ್ನು ಜಿಲ್ಲಾ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಿದೆ. ಅವರನ್ನು ಪರೀಕ್ಷಿಸಿದ ನಂತರ ನಂತರ ಜಿಲ್ಲಾಧಿ ಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ| ಎಚ್‌.ಎ. ನಾಡಗೌಡ, ಪ್ರಧಾನ ಕಾರ್ಯದರ್ಶಿ ಡಾ| ಮಂಜುನಾಥ, ವೈದ್ಯರಾದ ಡಾ| ಬಸವರಾಜ, ಡಾ| ನಾಗರಾಜ, ಡಾ| ನರೇಂದ್ರ ಪಾಟೀಲ, ಡಾ| ಗಿರಿಜಾ, ಡಾ| ಗಿರೀಶ, ಡಾ| ದೇವರಾಜ ದೇಸಾಯಿ, ಡಾ|ಬಸನಗೌಡ ಗಬ್ಬೂರು, ಡಾ| ನಿರ್ಮಲಾ, ಡಾ| ಅಶೋಕ ಇತರರಿದ್ದರು.

ಟಾಪ್ ನ್ಯೂಸ್

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

12-manwi

Yoga Day: ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್

Raichur; ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

20-uv-fusion

UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

19-fusion

Father: ನಮಗಾಗಿ ದುಡಿದ ನಾಯಕ ನಮ್ಮ ಜನಕ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.