ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ

Team Udayavani, Jun 26, 2018, 5:16 PM IST

raichuru-1.jpg

ರಾಯಚೂರು: ಬಹುತೇಕ ಕೃಷಿಕರು ಬಡತನ ಎದುರಿಸುತ್ತಿದ್ದು, ಕೃಷಿಯಿಂದ ಬಂದ ಆದಾಯದಿಂದಲೇ ಜೀವನ ದೂಡುವವರಿದ್ದಾರೆ. ಹೀಗಾಗಿ ಅವರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಸಮರ್ಪಕ ರಸಗೊಬ್ಬರ ವಿತರಿಸುವ ಮೂಲಕ ಉತ್ತಮ ಇಳುವರಿ ಬರುವಂತೆ ಮಾಡುವ ಹೊಣೆ ಇಲಾಖೆಗಳ ಮೇಲಿದೆ ಎಂದು ಗ್ರಾಮೀಣ ಶಾಸಕ ದದ್ದಲ ಬಸನಗೌಡ ಹೇಳಿದರು.

ಕೃಷಿ ಇಲಾಖೆಯಿಂದ ತಾಲೂಕಿನ ಚಂದ್ರಬಂಡಾದಲ್ಲಿ ಹಮ್ಮಿಕೊಂಡಿದ್ದ ಹೋಬಳಿ ವ್ಯಾಪ್ತಿಯ ಸಮಗ್ರ ಕೃಷಿ ಅಭಿಯಾನ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ರೈತರು ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಅವರಿಗೆ ಬೇಕಾದ ಅಗತ್ಯ ಪರಿಕರಗಳನ್ನು ಸಮರ್ಪಕವಾಗಿ ವಿತರಿಸಬೇಕು.

ಎಲ್ಲಿಯೂ ಯಾವ ರೈತರಿಗೂ ಕೊರತೆಯಾಗದಂತೆ ನೋಡಿಕೊಳ್ಳಿ. ರಾಯಚೂರು ತಾಲೂಕು ಬಹುತೇಕ ಬಯಲುಸೀಮೆಯಾಗಿದ್ದು, ಮಳೆಯಾಶ್ರಿತ ಪ್ರದೇಶವಾಗಿದೆ. ಮಳೆ ಬಂದರೆ ಮಾತ್ರ ರೈತರಿಗೆ ಅನುಕೂಲ. ಇಂಥ ವೇಳೆ ಬೀಜ ಮತ್ತು ರಸಗೊಬ್ಬರ, ಕೃಷಿ ಸಾಮಗ್ರಿ ಸಕಾಲಕ್ಕೆ ಸಿಕ್ಕಲ್ಲಿ ಮಾತ್ರ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಅದರ ಜತೆಗೆ ಕೀಟಬಾಧೆ ತಡೆಗೆ ಕಾಲಕಾಲಕ್ಕೆ ಅಗತ್ಯ ಮಾರ್ಗದರ್ಶನ ನೀಡಿ ರೈತರು ಉತ್ತಮ ಫಸಲು ಬೆಳೆಯಲು ಸಹಕರಿಸಬೇಕು ಎಂದರು.

ಸಂಸದ ಬಿ.ವಿ.ನಾಯಕ ಮಾತನಾಡಿ, ರೈತರು ಇಂದು ಸಾಕಷ್ಟು ಸವಾಲು ಎದುರಿಸುವಂತಾಗಿದೆ. ಕಾಲಕಾಲಕ್ಕೆ ಅಗತ್ಯ ಸಲಹೆ, ಮಾರ್ಗದರ್ಶನ ಪಡೆಯಬೇಕು. ಸಮೀಪದ ಕೃಷಿ ಕೇಂದ್ರಗಳಿಗೆ ತೆರಳಿ ಅಧಿಕಾರಿಗಳು, ಕೃಷಿ ಇಲಾಖೆ ತಜ್ಞರನ್ನು ಸಂಪರ್ಕಿಸಿ ಮಾಹಿತಿ ಪಡೆದು ಬೆಳೆ ರಕ್ಷಿಸಿಕೊಳ್ಳಬೇಕು. ಅವೈಜ್ಞಾನಿಕ ಪದ್ಧತಿಗಳಿಂದ ಬೆಳೆ ಹಾನಿ ಮಾಡಿಕೊಂಡರೆ ಮುಂದೆ ನಿಮಗೆ ನಷ್ಟವಾಗಲಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸೂಚಿಸಿದರು. ಜಿಪಂ ಸದಸ್ಯ ಎನ್‌.ಕೇಶವರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸೈಯದ್‌ ಮುಬ್ಜೀರ್‌ ರೆಹಮಾನ್‌ ಇದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.