ದೋಸ್ತಿ ಸರ್ಕಾರ ಬೀಳಿಸುವುದು ಅಸಾಧ್ಯ

Team Udayavani, Jan 17, 2019, 9:40 AM IST

ray-5.jpg

ಗೋರೇಬಾಳ: ಯಾವುದೇ ಕಾರಣಕ್ಕೂ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುವುದಿಲ್ಲ. ಆಪರೇಷನ್‌ ಕಮಲ ನಡೆಸಿ ಸರ್ಕಾರವನ್ನು ಬೀಳಿಸುವುದು ಬಿಜೆಪಿಗೆ ಸಾಧ್ಯವಿಲ್ಲ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಕಂದಾಯ ಇಲಾಖೆಯಿಂದ ಗೊರೇಬಾಳ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. ಬಿಜೆಪಿ ಆಪರೇಷನ್‌ ಕಮಲ ನಡೆಸಿ ಸರ್ಕಾರ ಬೀಳಿಸುತ್ತದೆ ಎಂಬ ವರದಿಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಎಂದರು.

ಹಣದ ಕೊರತೆಯಿಲ್ಲ: ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ 49 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದೆ. ರಾಜ್ಯದಲ್ಲಿ ಅತ್ಯಧಿಕವಾಗಿ ರಾಯಚೂರು ಜಿಲ್ಲೆಯ ಜನತೆ ಸಾಲ ಮನ್ನಾ ಯೋಜನೆಯ ಲಾಭ ಪಡೆಯಲಿದ್ದಾರೆ. ಸಾಲ ಮನ್ನಾ ಹಾಗೂ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರಕ್ಕೆ ಹಣದ ಕೊರತೆಯಿಲ್ಲ. ವಿಪಕ್ಷಗಳು ಜನತೆಯನ್ನು ದಾರಿ ತಪ್ಪಿಸುವ ಕೆಲಕ್ಕೆ ಮುಂದಾಗಿವೆ ಎಂದು ಆರೋಪಿಸಿದರು.

ಮನೆ ನಿರ್ಮಾಣ: ಗೊರೇಬಾಳ ಗ್ರಾಮದಲ್ಲಿ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ನೀಡಲಾಗಿರುವ ಜಾಗೆಯಲ್ಲಿ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಗ್ರಾಮ ವಿಕಾಸ ಯೋಜನೆಯಡಿ 1 ಕೋಟಿ ಅನುದಾನ ನೀಡಿದ್ದೇನೆ. 2 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲಾಗುವುದು. ಮುಂದಿನ ವರ್ಷದ ವೇಳೆಗೆ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ಸಿಸಿ ನಿರ್ಮಿಸಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷ ಶಿವಕುಮಾರ, ತಾಪಂ ಸದಸ್ಯ ಕೆ.ಗುರುರಾಜ, ಜೆಡಿಎಸ್‌ ಅಧ್ಯಕ್ಷ ಲಿಂಗಪ್ಪ ದಡೇಸ್ಗೂರು, ಜೆಡಿಎಸ್‌ ಮುಖಂಡರಾದ ದೊಡ್ಡಮನಿ ಶರಣೇಗೌಡ, ಆರ್‌.ಫಾಲಾಕ್ಷಗೌಡ, ಬಿ.ಮಲ್ಲನಗೌಡ, ಎಂ ಮಲ್ಲನಗೌಡ, ವಿಜಯಲಕ್ಷ್ಮೀ ಇದ್ದರು.

ಅಧಿಕಾರಿಗಳ ಗೈರು: ಕಂದಾಯ ಇಲಾಖೆಯಿಂದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ವೆಂಕಟರಾವ್‌ ನಾಡಗೌಡ ಭಾಗವಹಿಸಿದ್ದರು. ಆದರೆ ಕಂದಾಯ ಇಲಾಖೆಯ ಯಾವ ಅಧಿಕಾರಿಗಳು ಭಾಗವಹಿಸದಿರುವುದು ಮಾತ್ರ ಸೋಜಿಗದ ಸಂಗತಿ. ಜೊತೆಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬದಲಾಗಿ ಸಹಾಯಕ ನಿರ್ದೇಶಕ ಪವನಕುಮಾರ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.