ಸಮಾನತೆ ಹಣತೆ ಹಚ್ಚಿ: ಸಿದ್ದಲಿಂಗ ಶ್ರೀ

Team Udayavani, Feb 10, 2018, 5:19 PM IST

ray-3.jpg

ಗೊರೇಬಾಳ: ವಿಶ್ವ ಸಿಡಿದೊಡೆಯದಂತೆ ಕಾಪಾಡ ಬಲ್ಲುದೆ ಧರ್ಮ. ಮಠಾಧಿಪತಿ ಈ ಧರ್ಮದ ಪ್ರವಾದಿಯಾಗಿ ನಾಡಿನ ಮೂಲೆ-ಮೂಲೆಗೆ ಮಾನವೀಯತೆ ಸಿಂಚನ ಮಾಡಿ ಸಮಾನತೆಯ ಹಣತೆ ಹಚ್ಚಿ ಬೆಳಕು ನೀಡಬೇಕು ಎಂದು ಉಜ್ಜಯನಿ ಸಧರ್ಮ ಸಿಂಹಾಸನಾಧೀಶ್ವರ ಸಿದ್ದಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.

ಸಿಂಧನೂರು ತಾಲೂಕಿನ ತುರುವೀಹಾಳ ಪಟ್ಟಣದಲ್ಲಿ ನಡೆದ ಅಮರಗುಂಡ ದೇವರ ಗುರು ಪಟ್ಟಾಧಿಕಾರ ನಿಮಿತ್ತ ತುರುವೀಹಾಳ ಸಾರ್ವಜನಿಕರು ಆಯೋಜಿಸಿದ್ದ ಅಡ್ಡಪಲ್ಲಕ್ಕಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಭಾರತ ಭವ್ಯ ಪರಂಪರೆಯ ನಾಡು. ಸಂತ, ಮಹಾತ್ಮರ ಬೀಡು. ಜಗತ್ತಿನ ಸರ್ವಶ್ರೇಷ್ಠ ಪುಣ್ಯಭೂಮಿ ಕರ್ನಾಟಕದಲ್ಲಿ ಜನಿಸಿರುವುದೇ ಪುಣ್ಯ. ಪಟ್ಟಾಧಿಕಾರದ ಕಡೆ ಸಾಗಿದ ಅಮರಗುಂಡ ದೇವರಿಂದ ಸಮಾಜ ತುಂಬಾ ನಿರೀಕ್ಷೆ ಮಾಡಿದೆ.

ತನು, ಮನ ಇಂದಿನಿಂದ ಸಮಾಜಕ್ಕೆ ಅರ್ಪಣೆ ಮಾಡಿ ಮುನ್ನಡೆಯಬೇಕಿದೆ ಎಂದರು. ಶಾಸಕ ಪ್ರತಾಪಗೌಡ ಮಾತನಾಡಿ, ಉಜ್ಜಯನಿ ಸಧರ್ಮ ಸಿಂಹಾಸನಾಧೀಶ್ವರ ಸಿದ್ದಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯರ ಪಾದ ಸ್ಪರ್ಷದಿಂದ ತುರುವೀಹಾಳ ಪಟ್ಟಣ ಪುನೀತವಾಗಿದೆ. ಇಂತಹ ಪುಣ್ಯ ಕಾರ್ಯಗಳಲ್ಲಿ ಭಾಗಿಯಾಗಿದ್ದು ನನ್ನ ಪುಣ್ಯ ಎಂದರು.

ನಗರದ ಪ್ರಮುಖ ಬೀದಿಗಳಲ್ಲಿ ಉಜ್ಜಯನಿ ಸಧರ್ಮ ಸಿಂಹಾಸನಾಧೀಶ್ವರ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಜರುಗಿತು. ಪಟ್ಟಣದ ನೂರಾರು ಸುಮಂಗಲಿಯರು ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ 14 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಮರಿಸಿದ್ದಲಿಂಗ ಶಿವಾಚಾರ್ಯರು, ಸೋಮನಾಥ ಶಿವಾಚಾರ್ಯರು, ಮಸ್ಕಿ ಗಚ್ಚಿನ ಮಠದ ವರ ರುದ್ರಮುನಿ ಸ್ವಾಮಿ, ಶಿವಲಿಂಗ ಶಿವಾಚಾರ್ಯರು, ಚೆನ್ನಬಸವ ಶಿವಾಚಾರ್ಯರು, ಮಾಜಿ ಶಾಸಕ ಬಸವನಗೌಡ ಬ್ಯಾಗವಾಟ್‌, ಬಿಜೆಪಿ ಮುಖಂಡ ಆರ್‌. ಬಸನಗೌಡ ತುರುವೀಹಾಳ, ಶಿವಪ್ಪ ಮಸ್ಕಿ, ಮಹಾದೇವಪ್ಪಗೌಡ ಪಾಟೀಲ, ಎಲ್ಲೂಜಿರಾವ್‌ ಕೊರೆಕಾರ್‌, ಬಸವರಾಜಸ್ವಾಮಿ ಹಸಮಕಲ್‌, ಚಿದನಾಂದಯ್ಯ ಗುರುವಿನ್‌, ಮಲ್ಲನಗೌಡ ದೇವರಮನಿ, ಶಿವರಾಜ ಪಾಟೀಲ ಗುಂಜಳ್ಳಿ, ಕರಕಪ್ಪ ಸಾಹುಕಾರ, ಮರಿಯಪ್ಪ ನಾಯಕ, ಪಾರೂಖ ಸಾಬ ಖಾಜಿ, ಚಂದ್ರು ಪವಾಡ ಶೆಟ್ಟಿ, ಹನುಮೇಶ ಬಾಗೋಡಿ ಇದ್ದರು. 

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.