ರೈತರ ಬೆಳೆಗೆ ಎಂಎಸ್‌ಪಿ ಘೋಷಣೆಗೆ ಆಗ್ರಹ


Team Udayavani, Apr 27, 2022, 2:49 PM IST

16protest

ರಾಯಚೂರು: ರೈತರು ಬೆಳೆದ ಎಲ್ಲ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು, ಎಲ್ಲ ಧಾನ್ಯವನ್ನು ಸರ್ಕಾರವೇ ಖರೀದಿಸಬೇಕು. ಗ್ರಾಮೀಣ ಭಾಗದ ಜನರಿಗೆ ಸಮರ್ಪಕ ವಿದ್ಯುತ್‌ ಸರಬರಾಜು ಮಾಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಸಮೀಪದ ಟಿಪ್ಪು ಸುಲ್ತಾನ್‌ ಉದ್ಯಾನವನದಲ್ಲಿ ಸೇರಿದ ಸಂಘದ ಸದಸ್ಯರು, ರೈತ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ರೈತ, ಕಾರ್ಮಿಕ ಹಾಗೂ ಜನಸಾಮಾನ್ಯರ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಸರ್ಕಾರಗಳ ದುರಾಡಳಿತದ ಪರಿಣಾಮ ಇಂದು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ಪರಿಣಾಮ ಕೃಷಿ ಮಾಡುವುದೇ ರೈತರಿಗೆ ಕಷ್ಟವಾಗುತ್ತಿದೆ. ಡೀಸೆಲ್‌ ದರ, ರಸಗೊಬ್ಬರ ದರ, ಕೂಲಿ ದರ ಹೀಗೆ ರೈತರಿಗೆ ಖರ್ಚು ಹೆಚ್ಚಾಗುತ್ತಿದ್ದು, ಮುಕ್ತ ಮಾರುಕಟ್ಟಯಲ್ಲಿ ಧಾನ್ಯಗಳ ಬೆಲೆಯು ಕಡಿಮೆಯಿದೆ. ಇದರಿಂದ ರೈತರು ತೀವ್ರ ನಷ್ಟಕ್ಕೆ ತುತ್ತಾಗುತ್ತಿ ಎಂದು ವಿವರಿಸಿದರು.

ರೈತರ ಪಂಪ್‌ಸೆಟ್‌ಗಳಲ್ಲಿ 10 ಗಂಟೆ ನಿರಂತರ ತ್ರಿಪೇಸ್‌ ವಿದ್ಯುತ್‌ ಸರಬರಾಜು ಮಾಡಬೇಕು. ಟ್ರ್ಯಾಕ್ಟರ್‌ ಹಾಗೂ ಇತರೆ ಕೃಷಿ ಉತ್ಪನ್ನಗಳ ಎಂಆರ್‌ಪಿ ದರಗಳನ್ನು ಕಂಪನಿಗಳು ಅಧಿಕೃತವಾಗಿ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಬೇಕು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯನ್ನು ಮಾಡಬೇಕು, ನರೇಗಾ ಯೋಜನೆಯನ್ನು ಕೃಷಿ ಕ್ಷೇತ್ರಕ್ಕೂ ಅನ್ವಯಿಸಿ ರೈತ ಕುಟುಂಬಗಳಿಗೆ ಗೌರವಧನ ನೀಡಬೇಕು, ರಸಗೊಬ್ಬರದ ಬೆಲೆಯನ್ನು ತಗ್ಗಿಸಬೇಕು, ಪಡಿತರ ಚೀಟಿದಾರರತಿಗೆ ನ್ಯಾಯಬೆಲೆ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಅಡುಗೆ ಎಣ್ಣೆ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್‌, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್‌, ಮುಖಂಡರಾದ ಬಸನಗೌಡ ಬಲ್ಲಟಗಿ, ಬಸನಗೌಡ ಮಲ್ಲಿಗೆಮಡಗು, ದೇವರಾಜ ನಾಯಕ, ಮಲ್ಲಪ್ಪ ಪೂಜಾರಿ, ಮಲ್ಲನಗೌಡೂರು, ಮಲ್ಲಿಕಾರ್ಜುನ ದಿನ್ನಿ ಸೇರಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.