ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಹೋರಾಟ

Team Udayavani, Oct 1, 2019, 3:50 PM IST

ಲಿಂಗಸುಗೂರು: ನೆರೆ ಹಾವಳಿಯಿಂದ ಜನರು ಬೀದಿ ಪಾಲಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಹೋರಾಟ ನಡೆಸುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸೋಮವಾರ ತಾಲೂಕಿನ ಶೀಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು, ನೆರೆಗೆ ಕೊಚ್ಚಿಹೋದ ಶೀಲಹಳ್ಳಿ ಸೇತುವೆ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ನೆರೆಹಾವಳಿಗೆ ಜನರು ಬದುಕು ಕೊಚ್ಚಿ ಹೋಗಿದೆ. ಸಂಪೂರ್ಣ ಮನೆ ಕಳೆದುಕೊಂಡುವರಿಗೆ ಕೇವಲ 10 ಸಾವಿರ ರೂ. ನೀಡಿದ್ದು ಬಿಟ್ಟರೆ ಇನ್ನಾವುದೇ ಪರಿಹಾರ ನೀಡಿಲ್ಲ. ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದ್ದೂ ಇಲ್ಲದಂತಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕಾದ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಈ ಸರ್ಕಾರದ ವಿರುದ್ಧ ಅ ಧಿವೇಶನದಲ್ಲಿ ಹೋರಾಟ ನಡೆಸುವುದಾಗಿ ಹೇಳಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರಕ್ಕಾಗಿ ಬಿಡಿಗಾಸು ನೀಡಿಲ್ಲ. ರಾಜ್ಯದ ಜನರ ಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜ್‌, ಶಾಸಕ ಡಿ.ಎಸ್‌.ಹೂಲಗೇರಿ, ಮಾಜಿ ಸಚಿವ ಆರ್‌.ಬಿ.ತಿಮ್ಮಾಪುರ, ಮಾಜಿ ಸಂಸದ ಬಿ.ವಿ.ನಾಯಕ, ಕೆ.ವಿರೂಪಾಕ್ಷಪ್ಪ, ಜಿಪಂ ಸದಸ್ಯ ಸಂಗಣ್ಣ ದೇಸಾಯಿ, ಮುಖಂಡರಾದ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ, ತಾಪಂ ಸದಸ್ಯ ವಾಹೀದ್‌ ಖಾದ್ರಿ, ಹನುಮಂತ ರೆಡ್ಡಿ ಇತರರು ಇದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಕಲಬುರಗಿ: ಈಗಾಗಲೇ ಘೋಷಣೆಯಾಗಿರುವ ಕಲಬುರಗಿ ರೈಲ್ವೆ ವಿಭಾಗವನ್ನು ಆರಂಭಿಸುವ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಹೋರಾಟದ ರೂಪುರೇಷೆ ರೂಪಿಸಿಲು ಶುಕ್ರವಾರ...

  • „ಸಿದ್ಧಯ್ಯ ಸ್ವಾಮಿ ಕುಕನೂರು ರಾಯಚೂರು: ಸಹಸ್ರಾರು ಮಕ್ಕಳ ಜ್ಞಾನದಾಹ ನೀಗಿಸುತ್ತಿರುವ ರಾಯಚೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳಾಭಾವದ್ದೆ ಸಮಸ್ಯೆ. ಗ್ರಂಥಾಲಯಕ್ಕೆ...

  • „ನಾಗರಾಜ ತೇಲ್ಕರ್‌ ದೇವದುರ್ಗ: ಪಟ್ಟಣದ ಕೋರ್ಟ್‌ ವ್ಯಾಪ್ತಿಯ ಸಾರ್ವಜನಿಕ ಕ್ಲಬ್‌ ಆವರಣ ಹಗಲು ಸಭೆ, ಸಮಾರಂಭಗಳಿಗೆ ವೇದಿಕೆ ಆದರೆ, ರಾತ್ರಿ ಕುಡುಕರ ಅಡ್ಡೆಯಾಗಿ...

  • ರಾಯಚೂರು: ಸಾರ್ವಜನಿಕರಿಂದ ಸಂಗ್ರಹಿಸಿರುವ ತೆರಿಗೆಯಲ್ಲಿ ಶೇ.6ರಷ್ಟನ್ನು ಗ್ರಂಥಾಲಯ ನಿರ್ವಹಣೆಗೆ ನೀಡಬೇಕು ಎಂಬ ನಿಯಮವನ್ನು ಜಿಲ್ಲೆಯ ಸ್ಥಳೀಯ ಸಂಸ್ಥೆಗಳು...

  • ಲಿಂಗಸುಗೂರು: ಚಿನ್ನದ ಉತ್ಪಾದನೆಯಲ್ಲಿ ಏಕಸ್ವಾಮ್ಯತೆ ಸಾಧಿಸಿರುವ ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿ ದಾಖಲೆಯ ಚಿನ್ನ ಉತ್ಪಾದಿಸಿದೆ. 2019-20ನೇ ಸಾಲಿನಲ್ಲಿ...

ಹೊಸ ಸೇರ್ಪಡೆ