ಅವಧಿಗೂ ಮುನ್ನ ತೆನೆ ಬಿಚ್ಚಿದ ಭತ್ತ

ರೈತರಿಗೆ ಗಾಯದ ಮೇಲೆ ಬರೆರೈತರ ನೆರವಿಗೆ ಧಾವಿಸಬೇಕಿದೆ ಸರಕಾರ

Team Udayavani, Feb 23, 2020, 4:45 PM IST

23-February-28

ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಒಂದಿಲ್ಲೊಂದು ಸಂಕಷ್ಟ ಎದುರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ನಾಲ್ಕೈದು ವರ್ಷಗಳಿಂದ ಮಳೆ ಕೊರತೆ, ನೀರಿನ ಅವೈಜ್ಞಾನಿಕ ಬಳಕೆಯಿಂದ ಒಂದೇ ಬೆಳೆ ಪಡೆದ ರೈತರು, ಈ ಬಾರಿ ಬೇಸಿಗೆ ಭತ್ತದ ಬೆಳೆ ನಾಟಿ ಮಾಡಿದ 25 ದಿನಗಳಲ್ಲಿ ತೆನೆ ಬಿಚ್ಚುವ ಮೂಲಕ ರೈತರಲ್ಲಿ ಆತಂಕ ಸೃಷ್ಟಿಸಿದೆ.

ಮುಂಗಾರು ಸುಗ್ಗಿ ಬೆಳೆಗೆ ಸೂಕ್ತ ಬೆಲೆ ಸಿಗದೇ ಬಹುತೇಕ ರೈತರು ಇನ್ನೂ ಭತ್ತವನ್ನು ಮಾರಾಟ ಮಾಡದೇ ಸಂಗ್ರಹ ಮಾಡಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು 90-120 ದಿನಗಳಲ್ಲಿ ಕಟಾವಿಗೆ ಬರುವ ಭತ್ತವನ್ನು ನಾಟಿ ಮಾಡುತ್ತಾರೆ. ನಾಟಿ ಮಾಡಿದ 25 ದಿನಗಳು ಪೂರ್ಣಗೊಳ್ಳುವ ಮುನ್ನವೇ ಬಹುತೇಕ ಭತ್ತದ ಬೆಳೆ ತೆನೆ ಬಿಚ್ಚುವ ಮೂಲಕ ರೈತರನ್ನು ಆತಂಕಕ್ಕೀಡು ಮಾಡಿದೆ.

ಬೇಸಿಗೆ ಹಂಗಾಮಿನ ಭತ್ತದ ಬೆಳೆ ನವೆಂಬರ್‌, ಡಿಸೆಂಬರ್‌ನಲ್ಲಿ ನಾಟಿ ಮಾಡಿ ಮಾರ್ಚ್‌ ಮತ್ತು ಏಪ್ರಿಲ್‌ ಮೊದಲ ವಾರದಲ್ಲಿ ಕಟಾವು ಮಾಡಲಾಗುತ್ತದೆ. ಈ ಭಾರಿ ಬೇಸಿಗೆ ಭತ್ತದ ನಾಟಿ ಜನವರಿ ಮಧ್ಯೆ ಭಾಗದವರೆಗೂ ನಾಟಿ ಕಾರ್ಯ ನಡೆದಿದೆ. ಇದೀಗ ಭತ್ತದ ಬೆಳೆ 20-25 ದಿನಗಳಾಗಿವೆ. ಕಲ್ಗುಡಿ, ಮರಳಿ, ಶ್ರೀರಾಮನಗರ, ಢಣಾಪೂರ, ಮುಸ್ಟೂರು, ಅಯೋಧ್ಯಾ, ಹೊಸಳ್ಳಿ, ಜಂತಗಲ್‌, ಕುಂಟೋಜಿ, ಬರಗೂರು, ಸಿದ್ದಾಪೂರ, ಶಾಲಿಗನೂರು, ಉಳೇನೂರು, ಬೆನ್ನೂರು, ಜಮಾಪೂರ, ಗುಂಡೂರು, ಸಿಂಗನಾಳ ಭಾಗದಲ್ಲಿ 25 ದಿನದ ಭತ್ತದ ಬೆಳೆ ತೆನೆ ಬಿಚ್ಚಿದ್ದು, ಕಾಳುಕಟ್ಟುವ ಸಂದರ್ಭದಲ್ಲಿ ಚಳಿ ವಾತಾವರಣದಿಂದ ಕಾಳು ಜೊಳ್ಳಾಗುವ ಸಂದರ್ಭವಿದೆ.

ಅವಧಿಗೂ ಮುನ್ನ ತೆನೆ ಬಿಚ್ಚುವ ಕುರಿತು ಕೃಷಿ ವಿಜ್ಞಾನಿಗಳು ಸಂಶೋಧನೆ ಮಾಡುವ ಅವಶ್ಯವಿದೆ. ತಾಲೂಕಿನ ಬಹುತೇಕ ಕಡೆ ಭತ್ತದ ಬೀಜ ತಯಾರಿಕಾ ಘಟಕಗಳು ತಲೆ ಎತ್ತಿದ್ದು, ಈ ಕುರಿತು ರೈತರು ದೂರು ನೀಡಿದರೂ ಕೃಷಿ ಇಲಾಖೆ ಅಧಿಕಾರಿಗಳು ಒತ್ತಡಕ್ಕೆ ಮಣಿದು ಬೀಜ ಮಾರಾಟ ಮಾಡಿದ ವ್ಯಕ್ತಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಸರಕಾರ ಕೂಡಲೇ ನಕಲಿ ಭತ್ತದ ಬೀಜ ತಯಾರಿಸುವ ಘಟಕಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ, ಕೃಷಿ ಸಂಶೋಧನಾ ಕೇಂದ್ರ ಬೇಗನೆ ತೆನೆ ಬಿಚ್ಚಿದ ಭತ್ತದ ಕುರಿತು ಸೂಕ್ತ ಸಂಶೋಧನೆ ಮಾಡಿ ರೈತರನ್ನು ರಕ್ಷಣೆ ಮಾಡಬೇಕಿದೆ.

ಬೇಸಿಗೆ ಭತ್ತದ ಬೆಳೆ ನಾಟಿ ಮಾಡಿದ 25 ದಿನಗಳಲ್ಲಿ ತೆನೆ ಬಿಚ್ಚಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಹವಾಮಾನ ವೈಪರಿತ್ಯ ಅಥವಾ ನಕಲಿ ಬೀಜ ಎಂಬ ಕಾರಣ ತಿಳಿಯದಾಗಿದೆ. ಕೂಡಲೇ ಕೃಷಿ ಇಲಾಖೆಯ ಕೃಷಿ ವಿವಿ ಮತ್ತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಬೇಗನೆ ತೆನೆ ಬಿಚ್ಚಿದ ಕುರಿತು ಸಂಶೋಧನೆ ನಡೆಸಿ ಪರಿಹಾರ ಕಲ್ಪಿಸಬೇಕಾಗಿದೆ.
ವಿ. ಪ್ರಸಾದ,
ರೈತ ಕಲ್ಗುಡಿ ಗ್ರಾಮ

ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ರಾತ್ರಿ ಚಳಿ ಕಡಿಮೆಯಾಗಿ ಉಷ್ಣಾಂಶ ಹೆಚ್ಚಾಗಿರುವುದರಿಂದ ಭತ್ತದ ಬೆಳೆ ಬೇಗ ತೆನೆ ಬಿಚ್ಚಿದೆ. ಹತ್ತು ವರ್ಷಗಳ ಹಿಂದೆ ಇಂತಹ ಪರಿಸ್ಥಿತಿಯುಂಟಾಗಿತ್ತು. ಈಗ ಪುನಃ ಇಂತಹ ಸ್ಥಿತಿಯುಂಟಾಗಿದೆ. ರಾತ್ರಿ-ಹಗಲಿನ ಅವ ಧಿಯಲ್ಲಿ 10-15 ನಿಮಿಷಗಳ ವ್ಯತ್ಯಾಸ ಹಾಗೂ ಫೆಬ್ರವರಿ ಮೊದಲ ವಾರ ಇಬ್ಬನ್ನಿ ಬಿದ್ದ ಪರಿಣಾಮ ಬೇಗನೆ ತೆನೆ ಬಿಚ್ಚಲು ಕಾರಣವಾಗಿದೆ. ರಾತ್ರಿ ವೇಳೆ 18 ಡಿಗ್ರಿ ಉಷ್ಣಾಂಶ ಹಗಲಿನಲ್ಲಿ 36 ಡಿಗ್ರಿ ಉಷ್ಣಾಂಶ ಇದ್ದ ಪರಿಣಾಮ ಬೇಗನೆ ತೆನೆ ಬಂದಿದೆ. ಭತ್ತದ ಇಳುವರಿ ಕಡಿಮೆ ಬರುವ ಸಾಧ್ಯತೆ ಇದೆ.
ಡಾ| ಮಹಾಂತ ಶಿವಯೋಗಿ,
ತಳಿ(ಭತ್ತ) ಕೃಷಿ ಸಂಶೋಧನಾ ಕೇಂದ್ರ

„ಕೆ. ನಿಂಗಜ್ಜ

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17pipe

ಬೇಕಾಬಿಟ್ಟಿ ಪೈಪ್‌ಲೈನ್‌ ಕಾಮಗಾರಿಗೆ ವ್ಯಾಪಕ ಆಕ್ರೋಶ

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

14satyagraha

ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸಹಾಯಕ ಆಯುಕ್ತರ ಭೇಟಿ

13former

ಕೃಷಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

12hindu

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.