ನೆರೆ ರಾಜ್ಯಗಳ ಪರವಾನಗಿ ಅಗತ್ಯ

ನವಲಿ ಸಮಾನಾಂತರ ಜಲಾಶಯ ಯೋಜನೆಗೆ ಸುಮಾರು 6 ಸಾವಿರ ಕೋಟಿ ರೂ. ಅಗತ್ಯ: ಕಾರಜೋಳ

Team Udayavani, Feb 24, 2020, 2:55 PM IST

24-February-16

ಗಂಗಾವತಿ: ತುಂಗಭದ್ರಾ ಡ್ಯಾಮ್‌ನಲ್ಲಿ ಸಂಗ್ರಹವಾದ ಹೂಳಿನ ಪ್ರಮಾಣದ ನೀರು ಹರಿದು ಸಮುದ್ರ ಸೇರುವುದನ್ನು ತಪ್ಪಿಸಲು ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ. ಸರಕಾರ ಈ ನಿಟ್ಟಿನಲ್ಲಿ ಸಭೆ ಕರೆದು ಶೀಘ್ರ ಯೋಜನೆ ಅನುಷ್ಠಾನಕ್ಕೆ ಯತ್ನಿಸಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಅವರು ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಂಗಭದ್ರಾ ಡ್ಯಾಮ್‌ ಅಂತರ್‌ ರಾಜ್ಯ ಯೋಜನೆಯಾಗಿದೆ. ಜಲಾಶಯಕ್ಕೆ ಹೊಂದಿಕೊಂಡಂತೆ ನೂತನ ಯೋಜನೆ ಅನುಷ್ಠಾನಕ್ಕೆ ತೆಲಂಗಾಣ, ಆಂಧ್ರಪ್ರದೇಶದ ಪರವಾನಗಿ ಅಗತ್ಯವಿದ್ದು, ಆಯಾ ರಾಜ್ಯಗಳ ನೀರಾವರಿ ಇಲಾಖೆಯ ಮುಖ್ಯಸ್ಥರ ಸಭೆ ನಡೆಸಲಾಗುತ್ತದೆ. ನೂತನವಾಗಿ ನಿರ್ಮಿಸುವ ನವಲಿ ಜಲಾಶಯದಲ್ಲಿ ಶೇ. 35ರಷ್ಟು ನೀರನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಕೊಡಬೇಕಿದೆ.

ಯೋಜನೆಗೆ ಸುಮಾರು 6 ಸಾವಿರ ಕೋಟಿ ರೂ. ಅಗತ್ಯವಿದೆ. ಈ ಯೋಜನೆ ಅನುಷ್ಠಾನಕ್ಕೆ ಸರಕಾರ ಬದ್ಧವಾಗಿದೆ ಎಂದರುವರದಿಗೆ ಸೂಚನೆ: ರಾಯಚೂರು, ಬಳ್ಳಾರಿ ಕೊಪ್ಪಳ ಜಿಲ್ಲೆಗಳಲ್ಲಿ ಭತ್ತದ ಬೆಳೆ ನಾಟಿ ಮಾಡಿದ 25 ದಿನಕ್ಕೆ ತೆನೆ ಬಿಚ್ಚಿದ್ದು ರೈತರಿಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಲಿದೆ. ಭತ್ತದ ಬೆಳೆ ಹವಾಮಾನ ವೈಪರಿತ್ಯ ಅಥವಾ ನಕಲಿ ಬೀಜಗಳ ಕಾರಣಕ್ಕಾಗಿ ಹೀಗಾಗಿದೆ ಎನ್ನುವ ಕುರಿತು ಜಿಲ್ಲಾಡಳಿತದಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಿಬ್ಬಂದಿ ನೇಮಕ ಶೀಘ್ರ: ಸಮಾಜಕಲ್ಯಾಣ ಇಲಾಖೆ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ನಡೆಸಲಾಗುತ್ತದೆ. ಈಗಾಗಲೇ 1005 ಹಾಸ್ಟೆಲ್‌ ವಾರ್ಡನ್‌ಗಳ ನೇಮಕ ಮಾಡಲಾಗುತ್ತಿದೆ. 660 ವಾರ್ಡನ್‌ ಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಉಳಿದವರ ಸಿಂಧುತ್ವ ಪ್ರಮಾಣ ಪತ್ರದ ಕಾರಣಕ್ಕಾಗಿ ಆದೇಶ ಪತ್ರ ಕೊಟ್ಟಿಲ್ಲ. ಶೀಘ್ರ ಉಳಿದವರಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ. 824 ಮೊರಾರ್ಜಿ ವಸತಿ ಶಾಲೆಗಳಿದ್ದು, ಇದರಲ್ಲಿ 435 ಸ್ವಂತ ಕಟ್ಟಡವಿದ್ದು 300 ಕೋಟಿ ವೆಚ್ಚದಲ್ಲಿ ಉಳಿದ ವಸತಿ ಶಾಲೆ ಕಟ್ಟಡ
ನಿರ್ಮಿಸಲಾಗುತ್ತದೆ ಎಂದರು.

ಕನಕಗಿರಿ ಶಾಸಕ ಬಸವರಾಜ ದಢೇಸುಗೂರು, ಸಿಂಗನಾಳ ವಿರೂಪಾಕ್ಷಪ್ಪ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ತಿಪ್ಪೆರುದ್ರಸ್ವಾಮಿ, ಸಿಂಗನಾಳ ಪಂಪಾಪತಿ, ಎಚ್‌. ಗಿರೇಗೌಡ, ಜಿಪಂ ಮಾಜಿ ಸದಸ್ಯ ಪರಶುರಾಮ, ಕಾಮದೊಡ್ಡಿ ದೇವಪ್ಪ, ಮುಸ್ಟೂರು ಮಾರೇಶ, ಶಿವಪ್ಪ ಪೂಜಾರಿ, ಮಲ್ಲಿಕಾರ್ಜುನ ಕಾಮದೊಡ್ಡಿ, ನರಸಿಂಹಲು ಸಾಣಾಪೂರ, ಸಿಂಗನಾಳ ಸುರೇಶ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.