ವೇತನ ಪರಿಷ್ಕರಿಸಲು ಜೆಸ್ಕಾಂ ಗುತ್ತಿಗೆ ಕಾರ್ಮಿಕರ ಆಗ್ರಹ


Team Udayavani, Dec 5, 2017, 4:05 PM IST

ray-.jpg

ರಾಯಚೂರು: ಜಿಲ್ಲೆಯ ವಿವಿಧ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರ
ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಜೆಸ್ಕಾಂ ವಿದ್ಯುತ್‌ ಗುತ್ತಿಗೆ
ಕಾರ್ಮಿಕರ ಸಂಘ ಹಾಗೂ ವಿದ್ಯುತ್‌ ನೌಕರರ ಫೆಡರೇಶನ್‌ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ಹಾಗೂ ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪನಿ ಅಧೀನದ ಜಿಲ್ಲೆಯ ವಿವಿಧ
ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ಕಾರ್ಮಿಕರು ಗುತ್ತಿಗೆ ಆಧಾರದಡಿ ದುಡಿಯುತ್ತಿದ್ದಾರೆ. ಆದರೆ, 2013ರಿಂದ
ಈವರೆಗೆ ಟೆಂಡರ್‌ ಕರೆಯದೆ ಹಳೇ ಪದ್ಧತಿಯಲ್ಲೇ ವೇತನ ನೀಡಲಾಗುತ್ತಿದೆ. ಸುಮಾರು 15ರಿಂದ 18 ವರ್ಷಗಳಿಂದ
ಹೀಗೆ ಕೆಲಸ ಮಾಡಲಾಗುತ್ತಿದೆ. ಉಪ ಕೇಂದ್ರಗಳಲ್ಲಿ ಬೇರೆ ಬೇರೆ ಗುತ್ತಿಗೆದಾರರಡಿ ಕೆಲಸ ಮಾಡುತ್ತಿದ್ದು, 3-4 ತಿಂಗಳಿಗೊಮ್ಮೆ ವೇತನ ಪಾವತಿಸಲಾಗುತ್ತಿದೆ ಎಂದು ದೂರಿದರು.

ನೌಕರರಿಗೆ ಭವಿಷ್ಯನಿಧಿ, ಇಎಸ್‌ಐ ಸೌಲಭ್ಯ ನೀಡದೆ ವಂಚಿಸಲಾಗುತ್ತಿದೆ. ಈ ಬಗ್ಗೆ ಹೋರಾಟ ನಡೆಸಿದರೂ
ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಈ ಕೂಡಲೇ ಹೊಸ ಟೆಂಡರ್‌ ಕರೆದು ಕನಿಷ್ಠ ವೇತನ
ಕಾಯ್ದೆಯಡಿ ವೇತನ ನಿಗದಿ ಮಾಡಬೇಕು, ಉಪ ಕೇಂದ್ರ ನಿರ್ವಹಣಾ ಗುತ್ತಿಗೆದಾರರಿಂದ ವೇತನ ಕೊಡಿಸಲು ತಕ್ಷಣ
ಕ್ರಮ ಕೈಗೊಳ್ಳಬೇಕು, 22 ಕೆವಿ, 110 ಕೆವಿ, 66 ಕೆವಿ, 33 ಕೆವಿ ಉಪ ಕೇಂದ್ರದಲ್ಲಿ ಸಾಮಾನ್ಯ ವಿದ್ಯುತ್‌ ಅವಘಡಗಳು
ತಪ್ಪಿಸುವ ದಿನಬಳಕೆ ಉಪಕರಣಗಳನ್ನು ಕಂಪನಿ ಅಥವಾ ಗುತ್ತಿಗೆದಾರರಿಂದ ಕೊಡಿಸಬೇಕು. ನೌಕರರ ಜೀವನಕ್ಕೆ
ತೊಂದರೆಯಾದಲ್ಲಿ ಗುತ್ತಿಗೆದಾರರೇ ಪರಿಹಾರ ನೀಡಬೇಕು.

ಇಎಸ್‌ಐ, ಪಿಎಫ್‌ ಸೌಲಭ್ಯ ಕಲ್ಪಿಸದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಶೀಘ್ರದಲ್ಲೇ ವೇತನ ಪರಿಷ್ಕರಣೆ
ಟೆಂಡರ್‌ ಕರೆಯಬೇಕು. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಡಿ.11ರಿಂದ ಜಿಲ್ಲಾ ಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಸಂಘದ ಗೌರವಾಧ್ಯಕ್ಷ ಕೆ.ಜಿ.ವೀರೇಶ, ಜಿಲ್ಲಾಧ್ಯಕ್ಷ ಮುದ್ದುರಂಗಪ್ಪ ಜಾಲಹಳ್ಳಿ, ಸಾಯಿನಾಥ್‌, ಮಹೇಶ ಈರಣ್ಣ, ಶ್ರೀಧರ್‌, ಅಮರೇಶ ಸೇರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.