1ನೇ ಹಂತದ ಚುನಾವಣೆಗೆ ಕ್ಷಣಗಣನೆ


Team Udayavani, Dec 21, 2020, 5:26 PM IST

1ನೇ ಹಂತದ ಚುನಾವಣೆಗೆ ಕ್ಷಣಗಣನೆ

ರಾಯಚೂರು: ಜಿಲ್ಲೆಯ 173 ಗ್ರಾಪಂಗಳ ಪೈಕಿ ಮೊದಲ ಹಂತದಲ್ಲಿ 93 ಪಂಚಾಯಿತಿಗಳಿಗೆ ಡಿ.22ರಂದು ನಡೆಯುವ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಯಚೂರು, ದೇವದುರ್ಗ, ಮಾನ್ವಿ ಮತ್ತು ಮಾನ್ವಿ ತಾಲೂಕಿನಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 4438 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಒಟ್ಟು 93 ಗ್ರಾಪಂಗಳ ಪೈಕಿ 82 ಸೂಕ್ಷ್ಮ, 767 ಸಾಮಾನ್ಯ ಮತಗಟ್ಟೆ ಸೇರಿದಂತೆ ಒಟ್ಟು 849 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿ ಜಿಲ್ಲಾಡಳಿತಂದ ತರಬೇತಿ ನೀಡಲಾಗಿದೆ. ಬ್ಯಾಲೆಟ್‌ ಪೇಪರ್‌ ಆಧಾರಿತ ಚುನಾವಣೆಯಾಗಿರುವ ಕಾರಣ ಇವಿಎಂ ಯಂತ್ರಗಳಿಗೆ ವಿಶ್ರಾಂತಿ ಸಿಕ್ಕಂತಾಗಿದೆ. ಅಲ್ಲದೇ, ಪಿಆರ್‌ಒ, ಎಪಿಆರ್‌ಒ ಅಧಿಕಾರಿಗಳಿಗೆ ಮಾತ್ರ ತರಬೇತಿ ನೀಡಲಾಗಿದೆ.

ಪೊಲೀಸ್‌ ಇಲಾಖೆಯಿಂದ ಬಿಗಿ ಭದ್ರತೆ: ಚುನಾವಣೆಯನ್ನೂ ಸುಸೂತ್ರವಾಗಿ ನಡೆಸಲು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಕರ್ತವ್ಯಕ್ಕಾಗಿ ಜಿಲ್ಲೆಯ 52 ಪೊಲೀಸ್‌ ಅಧಿ ಕಾರಿ 981 ಸಿಬ್ಬಂದಿ ಹಾಗೂ 161 ಗೃಹ ರಕ್ಷಕದಳ ಸಿಬ್ಬಂದಿಯನ್ನು ನೇಮಿಸಲಾಗಿದೆ. 46 ಮೊಬೈಲ್‌ ಸೆಕ್ಟರ್‌ 17 ಸೂಪರ್‌ ವೈಸರ್‌ ಮೊಬೈಲ್‌ ಸೆಕ್ಟರ್‌ಗಳಲ್ಲಿ ಅಧಿ  ಕಾರಿಗಳ ನೇಮಿಸಲಾಗಿದೆ. ನಾಲ್ಕು ಕೆಎಸ್‌ಆರ್‌ಪಿ, 10 ಡಿಎಆರ್‌ ತುಕಡಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿಒಳಬರುವ ಮತ್ತು ಹೊರ ಹೋಗುವ ವಾಹನಗಳ ತಪಾಸಣೆ ಮಾಡಲು ಒಟ್ಟು 9 ಚೆಕ್‌ ಪೋಸ್ಟ್‌ಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.

ಅಭ್ಯರ್ಥಿಗಳಿಂದ ಅಂತಿಮ ಪ್ರಚಾರ: ಮೊದಲ ಹಂತದ ಚುನಾವಣೆಗೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ತುರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮತಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಮನವೊಲಿಕೆ ಮಾಡುವ ಕಸರತ್ತು ಮುಂದುವರಿಸಿದ್ದಾರೆ. ಬೆಂಬಲಿಗರು, ಕುಟುಂಬ ಸದಸ್ಯರು, ಬಂಧುಗಳೊಂದಿಗೆ ಮನೆ-ಮನೆಗೆ ತೆರಳಿ ಮತ ಯಾಚಿಸುತ್ತಿದ್ದಾರೆ. ಪ್ರಚಾರದ ವಿಚಾರದಲ್ಲಿ ಆಯೋಗ ಕಟ್ಟುನಿಟ್ಟಿನ ನಿಯಮಗಳನ್ನು ಒಡ್ಡದ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಹಗಲಿರುಳು ಪ್ರಚಾರ ಜೋರಾಗಿದೆ.

ರಾಯಚೂರು ತಾಲೂಕಿನ ಒಟ್ಟು 345 ಮತಗಟ್ಟೆಗಳಿದ್ದು, ಅವಿರೋಧ ಆಯ್ಕೆ ಹಾಗೂ ತಡೆಯಾಜ್ಞೆ ಕಾರಣಕ್ಕೆ ಕೆಲ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ. ಈಗ 296 ಮತಗಟ್ಟೆಗಳನ್ನುಸ್ಥಾಪಿಸಲಾಗಿದೆ. ಅದರಲ್ಲಿ 16 ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಸ್ಯಾನಿಟೈಸೆಶನ್‌ ಕೆಲಸ ನಡೆದಿದೆ. ಕೋವಿಡ್‌ 19 ನಿಯಮಾನುಸಾರವೇ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಾ| ಹಂಪಣ್ಣ ಸಜ್ಜನ್‌, ತಹಶೀಲ್ದಾರ್‌ ರಾಯಚೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.