ಅಭಿವೃದ್ಧಿಗೆ ಹಣ ಕೊಟ್ರೆ ಅವಿರೋಧ ಆಯ್ಕೆ!

|10 ಲಕ್ಷ ರೂ. ನೀಡಲು ಸಿದ್ಧರಾದ ಆಕಾಂಕ್ಷಿಗಳು?|ಜಾತಿ ಆಧಾರದಲ್ಲೂ ನಡೆದಿದೆ ಹಳ್ಳಿ ಫೈಟ್‌

Team Udayavani, Dec 8, 2020, 4:19 PM IST

ಅಭಿವೃದ್ಧಿಗೆ ಹಣ ಕೊಟ್ರೆ ಅವಿರೋಧ ಆಯ್ಕೆ!

ಸಾಂದರ್ಭಿಕ ಚಿತ್ರ

ರಾಯಚೂರು: ಗ್ರಾಪಂ ಚುನಾವಣೆ ಕಣ ದಿನೇದಿನೇ ರಂಗೇರುತ್ತಿದ್ದು, ಹಳ್ಳಿ ಕಟ್ಟೆಯಲ್ಲಿ ಬರೀ ರಾಜಕೀಯದ್ದೇ ಮಾತು. ಗ್ರಾಮಾಭಿವೃದ್ಧಿಗೆ ಹೆಚ್ಚು ಹಣನೀಡಿದವರನ್ನು ಅವಿರೋಧ ಆಯ್ಕೆಮಾಡುವಂಥ ಚರ್ಚೆಗಳು ಕೆಲವೆಡೆ ನಡೆಯುತ್ತಿವೆ.

ಕಳೆದ ಸಾರ್ವತ್ರಿಕ ಚುನಾವಣೆಗೆಹೋಲಿಸಿದರೆ ಈ ಬಾರಿ ಚುನಾವಣೆ ಅಖಾಡಮತ್ತಷ್ಟು ಕಳೆಗಟ್ಟಿದೆ. ಗ್ರಾಮೀಣ ಭಾಗದಲ್ಲಿರಾಜಕೀಯ ಪ್ರಜ್ಞೆ ಹೆಚ್ಚಾಗಿದ್ದು, ಸ್ಪರ್ಧೆಗೆ ನಾನು ನೀನುಎನ್ನುವವರು ಹೆಚ್ಚಾಗಿದ್ದಾರೆ. ಪಕ್ಷಾಧಾರಿತವಲ್ಲದ ಕಾರಣ ಯಾರು ಬೇಕಾದರೂ ತಮ್ಮದೇ ಚಿಹ್ನೆಯಡಿ ಸ್ಪರ್ಧಿಬಹುದು ಎಂಬುದು ಆಕಾಂಕ್ಷಿಗಳಿಗೆ ವರವಾಗಿದೆ. ಇದರಿಂದ ಪ್ರಮುಖ ಪಕ್ಷಗಳ ಕಾರ್ಯಕರ್ತರು ಕೂಡ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಈ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಗ್ರಾಮಸ್ಥರು ಕೂಡ ಗ್ರಾಮಾಭಿವೃದ್ಧಿಗೆ ಯಾರು ಹೆಚ್ಚು ಹಣನೀಡುತ್ತಾರೋ? ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡುವುದಾಗಿ ಮೌಖೀಕ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಸಾಂವಿಧಾನಿಕ ಸ್ಥಾನಮಾನಗಳು ಕೂಡಹಳೇ ಪದ್ಧತಿಯ ಪಂಚಾಯಿತಿ ಕಟ್ಟೆಯಲ್ಲೇ ನಿರ್ಧರಿತವಾಗುವಂತಾಗಿದೆ.

ಚುನಾವಣೆಗೆ ಹಣ, ಬಾಡೂಟ, ಪ್ರಚಾರ ಇತರೆ ಖರ್ಚುಗಳು ಸೇರಿ ಒಬ್ಬ ಸದಸ್ಯ ಐದಾರುಲಕ್ಷದವರೆಗೂ ಖರ್ಚು ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ, ಇಷ್ಟು ಹಣ ಖರ್ಚು ಮಾಡಿಗೆಲ್ಲದಿದ್ದರೆ ಹೇಗೆ ಎನ್ನುವ ಆತಂಕವೂ ಇದೆ. ತುಸುಖರ್ಚು ಹೆಚ್ಚಾದರೂ ಅವಿರೋಧ ಆಯ್ಕೆ ಸೂಕ್ತಎನ್ನುವ ನಿಲುವು ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಗ್ರಾಮಾಭಿವೃದ್ಧಿಗೆ 10 ಲಕ್ಷ ರೂ. ವರೆಗೂ ನೀಡಲು ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಇದೆ. ಪೈಪೋಟಿಇಲ್ಲವಾದರೆ ಸಮೀಪ ಸ್ಪರ್ಧೆಗೆ ಹಣ ನೀಡಿ ಅವರನ್ನು ಕಣದಿಂದ ಹಿಂದೆ ಸರಿಸುವ ರಾಜಕೀಯ ತಂತ್ರಗಾರಿಕೆ ಇಲ್ಲೂ ನಡೆದಿದೆ.

ಜಾತಿವಾರು ಲೆಕ್ಕಾಚಾರ ಜೋರು: ಇನ್ನೂ ಹಳ್ಳಿಗಳಲ್ಲಿ ಜಾತಿವಾರು ಲೆಕ್ಕಾಚಾರವೇ ಜೋರಾಗಿದೆ. ಒಂದೊಂದು ಊರಿನಲ್ಲಿ ಒಂದೊಂದು ಜಾತಿಪ್ರಾಬಲ್ಯ ಇರುತ್ತದೆ. ಹೀಗಾಗಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ ಅಲ್ಲಿ ಜಾತಿ ಲೆಕ್ಕಾಚಾರಜೋರಾಗುತ್ತಿದೆ. ಯಾವ ಜಾತಿಯ ಜನಹೆಚ್ಚಾಗಿದ್ದಾರೋ ಅವರು ಹಿಡಿತ ಸಾಧಿ ಸುತ್ತಿದ್ದಾರೆ.ಒಂದೇ ಜಾತಿಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಲ್ಲಿ ಆದ್ಯತಾನುಸಾರ ಸ್ಪರ್ಧೆಗೆ ಅವಕಾಶ ನೀಡಲಾಗುತ್ತಿದೆ.ಒಮ್ಮೆ ಗೆದ್ದವರನ್ನು ಬಿಟ್ಟು ಹೊಸಬರಿಗೆ ಅವಕಾಶ ಸಿಗಲಿ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಉದ್ಯೋಗ ಖಾತ್ರಿ ಕರಾಮತ್ತು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಪಂಗಳಿಗೆ ಈಗ ಅನುದಾನ ಹೆಚ್ಚಾಗಿ ನೀಡುತ್ತಿವೆ. ಅದರಲ್ಲೂ ಉದ್ಯೋಗ ಖಾತ್ರಿಯೋಜನೆ ಮೇಲೆ ಸಾಕಷ್ಟು ಕಣ್ಣಿದೆ. ಉದ್ಯೋಗಖಾತ್ರಿಯಡಿ ಸಾಕಷ್ಟು ಹಣ ಪಂಚಾಯಿತಿಗಳಿಗೆ ಹರಿದು ಬರುತ್ತಿದೆ. ಜಾಬ್‌ ಕಾರ್ಡ್‌ ಮಾಡಿಸಿದಲ್ಲಿ ಕಡ್ಡಾಯವಾಗಿ ಕೂಲಿ ಹಣ ಬರುವ ಖಾತರಿ ಇರುವ ಕಾರಣ ಸದಸ್ಯರಿಗೆ ಇದೊಂದು ಸುವರ್ಣಾವಕಾಶ ಎನ್ನುವಂತಾಗಿದೆ. ಉದ್ಯೋಗ ಖಾತ್ರಿಯಡಿ ಸಾಕಷ್ಟು ಕೆಲಸ ಮಾಡಿಸಿಕೊಳ್ಳಲು ಅವಕಾಶ ಇರುವುದರಿಂದ ಪಂಚಾಯಿತಿ ಫೈಟ್‌ ತೀವ್ರಗೊಳ್ಳಲು ಕಾರಣವಾಗುತ್ತಿದೆ.

ಈ ಬಾರಿ ಗ್ರಾಪಂ ಚುನಾವಣೆಯಲ್ಲೂ ಹಣದ ಮಾತು ಜೋರಾಗಿದೆ. ಖರ್ಚು ಮಾಡಲು ಹಿಂದೇಟು ಹಾಕುತ್ತಿಲ್ಲ. ಹೆಚ್ಚು ಜನಸಂಖ್ಯೆ ಇರುವ ಜಾತಿಗೆ ಮೀಸಲಾತಿ ಸಿಕ್ಕಲ್ಲಿ ಅದೇ ಸಮುದಾಯದಲ್ಲಿ ಪೈಪೋಟಿಹೆಚ್ಚಾಗುತ್ತಿದೆ. ಹೀಗಾಗಿ ಅವಿರೋಧ ಆಯ್ಕೆಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತಿದೆ.  -ಹೆಸರು ಹೇಳಲಿಚ್ಛಿಸದ ಆಕಾಂಕ್ಷಿ,ಯರಗೇರಾ

-ಸಿದ್ಧಯ್ಯಸ್ವಾಮ ಕುಕುನೂರು

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.