16 ಗ್ರಾಪಂ ಬಿಜೆಪಿಗೆ, 5ರಲ್ಲಿ ಕಾಂಗ್ರೆಸ್‌ ಪಾರಮ್ಯ

Team Udayavani, Feb 7, 2021, 2:39 PM IST

GRAMAPANCHAYATH

ಮಸ್ಕಿ: ತಾಲೂಕಿನ ಒಟ್ಟು 27 ಗ್ರಾಪಂಗಳಲ್ಲಿ 21 ಗ್ರಾಪಂಗಳಿಗೆ ಮಾತ್ರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, 16 ಬಿಜೆಪಿ, 5 ಗ್ರಾಪಂಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿದೆ!.

ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ಮುಂದಿರುವಾಗಲೇ ನಡೆದ ಗ್ರಾಪಂ ಚುನಾವಣೆ ಫಲಿತಾಂಶ ರಾಜಕೀಯ ಪಕ್ಷಗಳ ಬಲಾ-ಬಲ ವಿಶ್ಲೇಷಣೆಗೆ ದಾರಿಯಾಗಿದೆ. ಬಹು ಜಿದ್ದಿನಿಂದಲೇ ಅಖಾಡಕ್ಕೆ ಇಳಿದಿದ್ದ ಎರಡು ರಾಜಕೀಯ ಪಕ್ಷಗಳು ಕೂಡ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ತಮ್ಮ ಪಾರಮ್ಯ ಮೆರೆದಿದ್ದವು.

ಕೇವಲ ಸದಸ್ಯರ ಆಯ್ಕೆಯಲ್ಲಿ ಮಾತ್ರವಲ್ಲದೇ, ಅಧಿ ಕಾರ ಚುಕ್ಕಾಣಿ ಹಿಡಿಯುವ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲೂ ಪ್ರತಿಷ್ಠೆ ಪಣಕ್ಕೆ ಇಟ್ಟು ರಾಜಕೀಯ ದಾಳ ಉರುಳಿಸಿದ್ದರು. ಆದರೆ ಬಹುತೇಕ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರೇ ಅ ಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮುಂಚೂಣಿಯಲ್ಲಿದ್ದರೆ, ಕಾಂಗ್ರೆಸ್‌ ಮಾತ್ರ ಪಂಚಾಯಿತಿ ಸದಸ್ಯರ ಸಂಖ್ಯೆ ಎಣಿಕೆ ಮೂಲಕವೇ ತೃಪ್ತಿಪಟ್ಟುಕೊಂಡಿದೆ.

 ಎಲ್ಲಿ ಯಾವುದು?: ತಾಲೂಕಿನ 27 ಗ್ರಾಪಂಗಳ ಪೈಕಿ 4 ಪಂಚಾಯಿತಿಗಳಲ್ಲಿ ಚುನಾವಣೆ ಬಹಿಷ್ಕಾರ ಮಾಡಲಾಗಿತ್ತು. 23 ಗ್ರಾಪಂಗಳಿಗೆ ಮಾತ್ರ ಚುನಾವಣೆ ನಡೆದಿದ್ದು, ಇದರಲ್ಲಿ ಬಪೂ³ರು, ತಿಡಿಗೋಳ ಪಂಚಾಯಿತಿಗಳಿಗೆ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ತಡೆ ಬಿದ್ದಿದೆ. ಹೀಗಾಗಿ ಒಟ್ಟು 21 ಗ್ರಾಪಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಇದರಲ್ಲಿ ಸಂತೆಕಲ್ಲೂರು, ಸರ್ಜಾಪೂರ, ಮಟ್ಟೂರು, ಮಾರಲದಿನ್ನಿ, ಮೆದಕಿನಾಳ, ಕನ್ನಾಳ, ತಲೇಖಾನ್‌, ತೋರಣದಿನ್ನಿ, ಹಿರೇದಿನ್ನಿ, ಗುಡದೂರು, ಕಲ್ಮಂಗಿ, ಉಮಲೂಟಿ, ವಿರುಪಾಪುರ, ಗುಂಡಾ, ಉದಾºಳ,ಗೌಡನಭಾವಿಯಲ್ಲಿ ಬಿಜೆಪಿ ಬೆಂಬಲಿತರು ಚುಕ್ಕಾಣಿ ಹಿಡಿಯುವ ಮೂಲಕ ಬಿಜೆಪಿ ಬಲ ಹೆಚ್ಚಿಸಿದ್ದಾರೆ.

ಇಲ್ಲಿ ಕಾಂಗ್ರೆಸ್‌ ಪಾಲು: ಇನ್ನು ಉಳಿದ ಗುಂಜಳ್ಳಿ, ಕೋಳಬಾಳ, ಮಲ್ಲದಗುಡ್ಡ, ಹಾಲಾಪುರ, ಅಡವಿಭಾವಿತಾಂಡ ಗ್ರಾಪಂಗಳು ಕಾಂಗ್ರೆಸ್‌ ವಶವಾಗಿದ್ದು, ಇಷ್ಟರಲ್ಲಿ ಕೈ ಬೆಂಬಲಿತರು ಅಧಿ  ಕಾರ ಚುಕ್ಕಾಣಿಯಲ್ಲಿದ್ದಾರೆ. ವಿಶೇಷವಾಗಿ ಮಲ್ಲದಗುಡ್ಡ ಗ್ರಾಪಂನಲ್ಲಿ ಅಧ್ಯಕ್ಷ ಬಿಜೆಪಿಬೆಂಬಲಿತರಾದರೆ, ಉಪಾಧ್ಯಕ್ಷರು ಕಾಂಗ್ರೆಸ್‌ ಬೆಂಬಲಿತರು ಆಯ್ಕೆಯಾಗಿದ್ದಾರೆ. ಮೆದಕಿನಾಳ ಪಂಚಾಯಿತಿಯಲ್ಲೂ ಅಧ್ಯಕ್ಷೆ ಬಿಜೆಪಿ, ಉಪಾಧ್ಯಕ್ಷ ಕಾಂಗ್ರೆಸ್‌ ಪಾಲಾಗಿದೆ.

ಇದನ್ನೂ ಓದಿ:ನಾಮಪತ್ರ ಸಲ್ಲಿಸಿದ ಸದಸ್ಯ ಚುನಾವಣೆ ಸಭೆಗೆ ಗೈರು !

ಬಲಾಬಲ ವಿಶ್ಲೇಷಣೆ: ಮಸ್ಕಿ ಕ್ಷೇತ್ರಕ್ಕೆ ಬೈ ಎಲೆಕ್ಷನ್‌ ಬಾಕಿ ಇರುವ ಕಾರಣಕ್ಕೆ ಈ ಬಾರಿ ಪಂಚಾಯಿತಿ ಚುನಾವಣೆಯನ್ನು ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ಸಹಜವಾಗಿಯೇ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಕೇವಲ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಮಾತ್ರವಲ್ಲದೇ ಸ್ವತಃ ಎರಡು ಪಕ್ಷದ ನಾಯಕರೇ ಮುಂದಾಳತ್ವ ವಹಿಸಿ ಗ್ರಾಪಂ ಗದ್ದುಗೆ ಹಿಡಿಯಲು ರಾಜಕೀಯ ತಂತ್ರ ರೂಪಿಸಿದ್ದರು. ಸದಸ್ಯರ ಅಪಹರಣ, ಸದಸ್ಯರನ್ನು ಪ್ರವಾಸಕ್ಕೆ ಕರೆದೊಯ್ಯುವುದು ಸೇರಿ ಹಲವು ತಂತ್ರಗಳ ಮೂಲಕವೇ ಅಧಿ ಕಾರ ಚುಕ್ಕಾಣಿಗೆ ಹಲವು ರೀತಿಯ ಕಸರತ್ತು ನಡೆಸಿದ್ದರು. ಇಲ್ಲಿನ ಗುಡದೂರು ಗ್ರಾಪಂ, ಗುಂಡಾ ಸೇರಿ ಹಲವು ಕಡೆಗಳಲ್ಲಿ ಅಧಿ ಕಾರ ಚುಕ್ಕಾಣಿಗೆ ಬೆಂಬಲಿಸಿದ ಸದಸ್ಯರಿಗೆ ಚಿನ್ನದ ಉಡುಗೋರೆಯೂ ನೀಡಲಾಗಿದೆ. ಈ ಮೂಲಕ ಸದ್ಯ ಗ್ರಾಪಂಗಳನ್ನು ಎರಡು ಪಕ್ಷದವರು ತಮ್ಮ ವಶಕ್ಕೆ ಪಡೆದಿದ್ದು, ಇದೇ ಆಧಾರದ ಮೇಲೆ ಈಗ ಬೈ ಎಲೆಕ್ಷನ್‌ಗೆ ಸಿದ್ಧತೆಗಳು ನಡೆದಿವೆ.

ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.