ಅಡಿಗಲ್ಲು ಹಾಕಿದ್ರು, ಕೆಲಸ ಮಾಡೋದು ಮರೆತ್ರು!

Team Udayavani, Aug 13, 2018, 4:00 PM IST

ray-4.jpg

ಲಿಂಗಸುಗೂರು: ಕಾಮಗಾರಿಗೆ ಅಡಿಗಲ್ಲು ಹಾಕೋದು ಬೇಗ ಕೆಲಸ ಶುರು ಮಾಡಲಿ ಅಂತ. ಆದರೆ ಪಟ್ಟಣದಲ್ಲಿ ಕಾಮಗಾರಿವೊಂದಕ್ಕೆ ಅಡಿಗಲ್ಲು ಹಾಕಿ ಎರಡು ತಿಂಗಳು ಗತಿಸುತ್ತಿದ್ದರೂ ಇನ್ನೂ ಕೆಲಸ ಆರಂಭವಾಗಿಲ್ಲ..

ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನದ ಬಳಿ ನಗರೋತ್ಥಾನ ಎರಡನೇ ಹಂತದಲ್ಲಿ 90 ಲಕ್ಷ ರೂ/ ಅನುದಾನದಡಿ
ಸಿಸಿ ಚರಂಡಿ ಕಾಮಗಾರಿಗೆ ಗುತ್ತಿಗೆ ನೀಡಲಾಗಿದೆ. ಈ ಕಾಮಗಾರಿಗೆ ಕಳೆದ ಜೂನ್‌ ತಿಂಗಳಲ್ಲಿ ಶಾಸಕ ಡಿ.ಎಸ್‌.
ಹೂಲಗೇರಿ ಅಡಿಗಲ್ಲು ನೆರವೇರಿಸಿದ್ದರು. ಆದರೆ ಈವರೆಗೂ ಕಾಮಗಾರಿ ಆರಂಭವಾಗದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. 

ತೊಂದರೆ: ಪಟ್ಟಣದ ರಾಯಚೂರು ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ, ಸುತ್ತಮುತ್ತಲಿನ ಮನೆಗಳಲ್ಲಿ ಬಳಸಿದ
ನೀರು ಹಾಗೂ ಮಳೆ ಬಂದಾಗ ನೀರು ಬೆಳಗಾವಿ-ಹೈದರಾಬಾದ್‌ ರಾಜ್ಯ ಹೆದ್ದಾರಿ ಮೇಲೆ ನಿಲ್ಲುತ್ತಿದೆ. ಈ
ನೀರಿನ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುವುದರಿಂದ ರಸ್ತೆಯಲ್ಲಿ ದೊಡ್ಡ ಗುಂಡಿ ಬಿದ್ದು ಮತ್ತಷ್ಟು ನೀರು ನಿಲ್ಲಲು ಕಾರಣವಾಗಿದೆ. ಇದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಗುಂಡಿಯಲ್ಲಿ ನೀರು ತುಂಬಿರುವುದರಿಂದ ಇದನ್ನು ತಿಳಿಯದೇ ಬೈಕ್‌ ಸವಾರರು ಅವಘಡಕ್ಕೆ ಸಿಲುಕಿ ಕೈ-ಕಾಲು ಮುರಿದುಕೊಂಡ ಉದಾಹರಣೆಗಳು ಸಾಕಷ್ಟಿವೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡಬೇಕಾಗಿದೆ.

ಇಲ್ಲಿನ ನಿವಾಸಿಗಳು ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಬಹುದಿನಗಳಿಂದ ಪುರಸಭೆಗೆ ಒತ್ತಾಯಿಸಿದ್ದರಿಂದ ಪುರಸಭೆ
ನಗರೋತ್ಥಾನ ಯೋಜನೆಯಡಿ ಚರಂಡಿ ನಿರ್ಮಿಸಿಲು ಅನುದಾನ ಒದಗಿಸಿದೆ. ಆದರೆ ಗುತ್ತಿಗೆದಾರರು
ಮಾತ್ರ ಇನ್ನೂ ಕಾಮಗಾರಿ ಆರಂಭಿಸಿಲ್ಲ. ಇದರಿಂದ ಜನರು ನಿತ್ಯ ತೊಂದರೆ ಅನುಭವಿಸುವುದು ತಪ್ಪುತ್ತಿಲ್ಲ. ಈ
ಸಮಸ್ಯೆ ಪರಿಹರಿಸಲು ಪುರಸಭೆ ಆಡಳಿತಾಧಿಕಾರಿಯಾದ ತಹಶೀಲ್ದಾರ್‌ ಹಾಗೂ ಶಾಸಕರು ಈ ಬಗ್ಗೆ ಗಮನ ಹರಿಸಿ
ಕೂಡಲೇ ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚಿಸಬೇಕಾಗಿದೆ. 

ಚರಂಡಿ ಕಾಮಗಾರಿಗೆ ಟೆಂಡರ್‌ ಕರೆದು ಶಾಸಕರೇ ಅಡಿಗಲ್ಲು ಹಾಕಿದರೂ ಇನ್ನೂ ಕಾಮಗಾರಿ ಆರಂಭಗೊಳಿಸದ
ಗುತ್ತಿಗೆದಾರರ ವಿರುದ್ಧ ಕ್ರಮ ಜರಗಿಸಬೇಕೆಂದು ನಿವಾಸಿ ಹನುಮೇಶ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.