ಕೃಷಿ ಕಾಯ್ದೆ ವಾಪಸ್‌ಗೆ ಹೆದ್ದಾರಿ ತಡೆ


Team Udayavani, Feb 7, 2021, 12:40 PM IST

Highway barrier to return to agricultural act

ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಅಖೀಲ ಭಾರತ ಕಿಸಾನ್‌ ಸಂಘರ್ಷ ಸಮಿತಿ ಕರೆಯ ಮೇರೆಗೆ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಸಮೀಪದ ಅಸ್ಕಿಹಾಳ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಗಂಗಾವತಿ, ಬಳ್ಳಾರಿ, ಕಲಬುರಗಿ, ಲಿಂಗಸೂಗೂರು ಸೇರಿದಂತೆ ವಿವಿಧೆಡೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾದ ಕಾರಣ ಕೆಲ ಕಾಲ ಸಂಚಾರದಲ್ಲಿ ತುಸು ವ್ಯತ್ಯಯ ಕಂಡು ಬಂದರೂ ಪ್ರಯಾಣಿಕರಿಗೆ ಹೆಚ್ಚೇನು ತೊಂದರೆ ಆಗಲಿಲ್ಲ. ಭಾರೀ ವಾಹನಗಳನ್ನು ಮಾತ್ರ ನಿಷೇಧಿ ಸಿ ಬೈಪಾಸ್‌ ಮಾರ್ಗವಾಗಿ ಓಡಿಸಲಾಯಿತು. ಉಳಿದಂತೆ ಸಾರಿಗೆ ಬಸ್‌ ಸೇರಿದಂತೆ ಸಣ್ಣ ವಾಹನಗಳನ್ನು ಇದೇ ಮಾರ್ಗವಾಗಿ ಬಿಡಲಾಯಿತು. ಹೋರಾಟ ಸಾಂಕೇತಿಕವಾಗಿದ್ದು, ಹೆಚ್ಚು ಜನ ಪಾಲ್ಗೊಂಡಿರದ ಕಾರಣ ಪೊಲೀಸರ ಪರಿಸ್ಥಿತಿ ನಿರ್ವಹಿಸಿದರು.

ಮಧ್ಯಾಹ್ನ 12ರಿಂದ ಎರಡು ಗಂಟೆವರೆಗೆ ಹೋರಾಟ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಕರಾಳ ಕೃಷಿ ಮಸೂದೆಗಳನ್ನು ವಾಪಸ್‌ ಪಡೆಯಬೇಕು ಮತ್ತು ಕಾರ್ಮಿಕ ಸಂಹಿತೆಗಳ ತಿದ್ದುಪಡಿ ಕೈಬಿಡಬೇಕೆಂದು ಬೆಲೆ ಏರಿಕೆಯನ್ನು ತಡೆಗಟ್ಟಲು ಈ ರಸ್ತೆತಡೆ ಚಳವಳಿ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒತ್ತಾಯಿಸಲಾಗಿದೆ.

ಇದನ್ನೂ ಓದಿ:ರೈತರ ಸಮಸ್ಯೆ ಬಗೆಹರಿಸಲು ಮೋದಿ ಮಧ್ಯ ಪ್ರವೇಶಿಸಲೇ ಬೇಕು : ಪವಾರ್

ಸಮಿತಿ ರಾಜ್ಯ ಮುಖಂಡ ಚಾಮರಸ ಮಾಲಿಪಾಟೀಲ್‌, ಜಿಲ್ಲಾ ಸಂಚಾಲಕ ಕೆ.ಜಿ. ವೀರೇಶ್‌, ಸೂಗೂರಯ್ಯ ಆರ್‌.ಎಸ್‌. ಮಠ ಮಲ್ಲಣ್ಣ ದಿನ್ನಿ, ಕರಿಯಪ್ಪ ಹಚ್ಚೊಳ್ಳಿ, ಡಿ.ಎಸ್‌. ಶರಣಬಸವ, ಈ.ರಂಗನಗೌಡ, ಮಾರೆಪ್ಪ ಹರವಿ, ಖಾಜಾ ಅಸ್ಲಂಪಾಷಾ, ರಾಮಬಾಬು, ರೂಪಾ ಶ್ರೀನಿವಾಸ ನಾಯಕ, ನರಸಪ್ಪ ಶಕ್ತಿನಗರ, ಜಿಂದಪ್ಪ ವಡೂÉರು, ಶ್ರೀನಿವಾಸ ಕಲವಲದೊಡ್ಡಿ, ಎನ್‌.ಎಸ್‌. ವೀರೇಶ್‌, ಚನ್ನಬಸವ ಜಾನೇಕಲ್‌, ವಿ.ವಿ. ಭೀಮೇಶ್ವರರಾವ್‌, ಜಾನ್‌ವೇಸ್ಲಿ, ವಿದ್ಯಾಪಾಟೀಲ್‌, ಈರಣ್ಣ ಶೆಟ್ಟಿ, ಶರಣಬಸವ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಹೋರಾಟದಲ್ಲಿ ಭಾಗಿಯಾಗಿದ್ದರು

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.