ರಾಯಚೂರಿನಲ್ಲಿ ಸೋಂಕಿನ ವೇಗ ಹೆಚ್ಚಾ ದರೂ ತೀವ್ರತೆ ಕಡಿಮೆ


Team Udayavani, Jan 20, 2022, 3:18 PM IST

14covid

ರಾಯಚೂರು: ಕೋವಿಡ್‌ ಎರಡನೇ ಅಲೆ ವೇಳೆ ಸೋಂಕಿಗೆ ತುತ್ತಾದವರು ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ಬೆಡ್‌ ಸಿಗದೆ ಪರದಾಡಿದ್ದರು. ಆದರೆ, ಮೂರನೇ ಅಲೆಯಲ್ಲಿ ಮಾತ್ರ ಸೋಂಕಿತರು ಆಸ್ಪತ್ರೆಗಳತ್ತ ಮುಖ ಮಾಡುತ್ತಿಲ್ಲ.

ವೈದ್ಯರೇ ಹೇಳುವ ಪ್ರಕಾರ ಸೋಂಕು ವೇಗದಲ್ಲಿ ಹರಡುತ್ತಿದೆಯಾದರೂ ತೀವ್ರತೆ ಅಷ್ಟಾಗಿಲ್ಲ. ಜಿಲ್ಲೆಯಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ನಿತ್ಯ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟುತ್ತಿದೆ. ಜಿಲ್ಲೆಯಲ್ಲಿ ಈಗ ಕೇವಲ 15 ಜನ ಮಾತ್ರ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ, 30 ಜನ ಖಾಸಗಿ ಹೋಟೆಲ್‌, ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಉಳಿದಂತೆ 1055 ಸೋಂಕಿತರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಇನ್ನೂ ಬುಧವಾರ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಆದರೆ, ಒಂದು 2ನೇ ಅಲೆಯಿಂದ ಸಾಕಷ್ಟು ಪಾಠ ಕಲಿತ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ವಹಿಸಿಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ಹೋಂ ಐಸೋಲೇಷನ್‌ಗೆ ಒಳಪಟ್ಟ ಸೋಂಕಿತರಿಗೆ ಮನೆ ಮನೆಗೆ ತೆರಳಿ ಚಿಕಿತ್ಸೆಗೆ ಬೇಕಾದ ಪೂರಕ ಔಷಧ ಸರಬರಾಜು ಮಾಡಲಾಗುತ್ತಿದೆ.

ಎರಡನೇ ಅಲೆಯಲ್ಲಿ ಸುಮಾರು ಸಾವಿರಕ್ಕೂ ಅಧಿಕ ಕಿಟ್‌ಗಳು ಬಾಕಿ ಉಳಿದಿದ್ದು, ಈಗ ಅವುಗಳನ್ನು ಪೂರೈಸಲು ಆರೋಗ್ಯ ಇಲಾಖೆ ಮುಂದಾಗಿದೆ. ಐಸೋಲೇಷನ್‌ ಟೀಂ ಪ್ರತಿ ತಾಲೂಕಿನಲ್ಲೂ ಸಕ್ರಿಯವಾಗಿದ್ದು, ದಿನೇ ದಿನೇ ಸೋಂಕಿತರಿಗೆ ಕರೆ ಮಾಡಿ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆಯುತ್ತಿದೆ. ಸರ್ಕಾರದ ನಿರ್ದೇಶನದ ಮೇರೆಗೆ ಐದು ದಿನಗಳ ಔಷಧ ಹೊಂದಿರುವ ಕಿಟ್‌ ಪೂರೈಸಲಾಗುತ್ತಿದೆ. ಈ ಬಾರಿ ಕಿಟ್‌ನಲ್ಲಿ ಲಿವೋಸಿಟ್ರೋಜನ್‌, ಜಿಂಕ್‌, ವಿಟಮಿನ್‌ ಸಿ ಹಾಗೂ ಆ್ಯಂಟಿ ಬಯಾಟಿಕ್‌ ಮಾತ್ರೆಗಳ ಕಿಟ್‌ ನೀಡಲಾಗುತ್ತಿದೆ.

4708 ಬೆಡ್‌ಗಳ ಸಿದ್ಧತೆ

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎಂಬ ಕಾರಣಕ್ಕೆ ಸಾಕಷ್ಟು ನಗರದ ರಿಮ್ಸ್‌ ಆಸ್ಪತ್ರೆಯಲ್ಲಿ ವಿಶೇಷ ಮಕ್ಕಳ ಘಟಕ ಸಿದ್ಧಪಡಿಸಲಾಗಿತ್ತು. ಸುಮಾರು 150 ಬೆಡ್‌ಗಳು, 60 ಐಸಿಯು ಬೆಡ್‌ ಸಿದ್ಧಪಡಿಸಿದ್ದರೆ, ಶಿಲ್ಪಾ ಮೆಡಿಕೇರ್‌ ಲಿಮಿಟೆಡ್‌ ಸಂಸ್ಥೆಯವರು ಕೂಡ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ 20 ಬೆಡ್‌ ದೇಣಿಯಾಗಿ ನೀಡಿತ್ತು. ಆದರೆ, ಮೂರನೇ ಅಲೆಯಲ್ಲಿ ಮಕ್ಕಳಲ್ಲಿ ಅಂಥ ಲಕ್ಷಣಗಳು ಕಂಡು ಬಂದಿಲ್ಲ. ಬದಲಿಗೆ ಎಲ್ಲ ವರ್ಗದ ಜನರಲ್ಲಿಯೇ ಜ್ವರ, ನೆಗಡಿ, ಕೆಮ್ಮು, ಮೈ-ಕೈ ನೋವಿನಂತ ಲಕ್ಷಣಗಳು ಕಂಡು ಬರುತ್ತಿದ್ದು, ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್‌ ವರದಿ ಬರುತ್ತಿವೆ. ಅನೇಕರು ಒಂದು ವಾರ ಮನೆಯಲ್ಲಿ ಐಸೊಲೇಶನ್‌ಗೆ ಒಳಗಾಗಿ ಗುಣಮುಖರಾಗುತ್ತಿದ್ದಾರೆ. ಆದರೂ ಜಿಲ್ಲಾಡಳಿತ ತನ್ನ ಎಚ್ಚರಿಕೆಯಲ್ಲಿ ತಾನಿದ್ದು, ಸುಮಾರು 4708 ಬೆಡ್‌ಗಳ ಸಿದ್ಧತೆ ಮಾಡಿಕೊಂಡಿದೆ.

ರಿಮ್ಸ್‌ನಲ್ಲಿ 620 ಸಾಮಾನ್ಯ ಬೆಡ್‌, 75 ಐಸಿಯು, 75 ವೆಂಟಿಲೇಟರ್‌ ಬೆಡ್‌ ಗಳ ವ್ಯವಸ್ಥೆ ಮಾಡಿದ್ದರೆ, ಒಪೆಕ್‌ನಲ್ಲಿ 300 ಸಾಮಾನ್ಯ, 10 ಐಸಿಯು, 10 ವೆಂಟಿಲೇಟರ್‌ ಬೆಡ್‌ ವ್ಯವಸ್ಥೆ ಮಾಡಲಾಗಿದೆ. ನವೋದಯ ಮೆಡಿಕಲ್‌ ಕಾಲೇಜಿನಲ್ಲಿ 835 ಸಾಮಾನ್ಯ ಬೆಡ್‌, 114 ಐಸಿಯು ಹಾಗೂ 14 ವೆಂಟಿಲೇಟರ್‌ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 84 ಖಾಸಗಿ ಆಸ್ಪತ್ರೆಗಳಲ್ಲಿ 2373 ಸಾಮಾನ್ಯ ಬೆಡ್‌ಗಳಿದ್ದರೆ, 408 ಐಸಿಯು, 26 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ತಾಲೂಕು ಆಸ್ಪತ್ರೆಗಳಲ್ಲಿ ತಲಾ 100ರಂತೆ 400 ಸಾಮಾನ್ಯ ಬೆಡ್‌ಗಳು, 24 ಐಸಿಯು ಹಾಗೂ 20 ವೆಂಟಿಲೇಟರ್‌ ವ್ಯವಸ್ಥೆ ಮಾಡಲಾಗಿದೆ. ಆರು ಸಮದಾಯ ಆರೋಗ್ಯ ಕೇಂದ್ರಗಳಲ್ಲಿ 180 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ, ಈಗ ಯಾವುದೇ ಬೆಡ್‌ಗಳ ಅನಿವಾರ್ಯತೆ ಅಷ್ಟಾಗಿ ಬಂದಿಲ್ಲ. ಹೋಂ ಐಸೋಲೇಷನ್‌ ಹಾಗೂ ಕಾಂಟಾಕ್ಟ್ ಟ್ರೇಸಿಂಗ್‌ ತಂಡಗಳು ಮಾತ್ರ ಸಕ್ರಿಯವಾಗಿ ಕೆಲಸ ಮಾಡುತ್ತಿವೆ.

ಜಿಲ್ಲೆಯಲ್ಲಿ ಹೋಂ ಐಸೋಲೇಷನ್‌ ಒಳಪಟ್ಟ ಬಹುತೇಕರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಲಕ್ಷಣಗಳು ಇದ್ದಲ್ಲಿ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸುತ್ತಿದ್ದೇವೆ. ಪ್ರತಿ ತಾಲೂಕು ಕೇಂದ್ರದಲ್ಲಿ ವಾರ್‌ ರೂಂ ಮಾಡಲಾಗಿದೆ. ಐಸೋಲೇಷನ್‌ ತಂಡದವರು ನಿತ್ಯ ಸೋಂಕಿತರಿಗೆ ಕರೆ ಮಾಡಿ ಆರೋಗ್ಯ ಸ್ಥಿತಿ ವಿಚಾರಿಸುತ್ತಿದ್ದಾರೆ. ಯಾವುದೇ ಲಕ್ಷಣಗಳು ಇಲ್ಲದವರಿಗೆ ಬಿ ಕಾಂಪ್ಲೆಕ್ಸ್‌, ವಿಟಮಿನ್‌ ಸಿ ಮಾತ್ರೆ ನೀಡಲಾಗುತ್ತಿದೆ. ನಗರ ಭಾಗದಲ್ಲಿ ಸೋಂಕು ಹೆಚ್ಚಾಗಿದ್ದರಿಂದ ಪ್ರತಿ ಆರೋಗ್ಯ ಕೇಂದ್ರಕ್ಕೆ 2 ತಂಡ ಮಾಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಅಗತ್ಯವಿದ್ದಲ್ಲಿ ತಂಡ ರಚಿಸಲಾಗುತ್ತಿದೆ. -ಡಾ| ನಾಗರಾಜ್‌, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.