ಹೆಚ್ಚಾಗುತ್ತಿದೆ ಕೆಮ್ಮು-ನೆಗಡಿ-ಜ್ವರ
Team Udayavani, Jan 24, 2022, 2:43 PM IST
ದೇವದುರ್ಗ: ಹವಾಮಾನ ಬದಲಾದ ಹಿನ್ನೆಲೆಯಲ್ಲಿ ಶೀತ, ಕೆಮ್ಮು, ಜ್ವರ, ನೆಗಡಿ ಮಕ್ಕಳು ಸೇರಿದಂತೆ ಎಲ್ಲರಿಗೂ ವ್ಯಾಪಿಸಿದೆ. ಸರಕಾರಿ-ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆಯೂ ಹೆಚ್ಚಾಗಿದೆ.
ಪಟ್ಟಣ ಸೇರಿ ತಾಲೂಕಿನಾದ್ಯಂತ ಜನರಲ್ಲಿ ಜ್ವರದ ಬಾಧೆ ಹೆಚ್ಚಾಗುತ್ತಿದ್ದು, ಮಕ್ಕಳಿಂದ ಹಿಡಿದು ವಯಸ್ಕರು,ವೃದ್ಧರವರೆಗೂ ಜ್ವರ ಜೀವ ಹಿಂಡುತ್ತಿದೆ. ಪ್ರತಿದಿನ ರೋಗಿಗಳ ಸಂಖ್ಯೆ 350ರ ಗಡಿ ದಾಟಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲಾ-ಕಾಲೇಜು, ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಾಗಿವೆ.
ಜಾಲಹಳ್ಳಿ ವರಟಗೇರ ಸರಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಶೀತ, ಕೆಮ್ಮು, ನೆಗಡಿ, ಜ್ವರ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಮೇಲೆ ಶಾಲೆಗಳಿಗೆ ಬರುವಂತೆ ಸೂಚನೆ ನೀಡಲಾಗುತ್ತಿದೆ. ವಾರವಾದರೂ ಜ್ವರ ಕಡಿಮೆ ಆಗದೇ ಇದ್ದಲ್ಲಿ ಅಂತಹ ರೋಗಿಗಳಿಗೆ ಡೆಂಘೀ ರಕ್ತ ಪರೀಕ್ಷೆ ಮಾಡಲಾಗುತ್ತಿದೆ.
ಕೊರೊನಾ ಮೂರನೇ ಅಲೆಯಲ್ಲಿ ಬಹುತೇಕ ಮಕ್ಕಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಮಾಸ್ಕ್, ಹಾಕಿಕೊಳ್ಳುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಳ್ಳಿಗಳಲ್ಲಿ ಜಾಗೃತಿ ಸಾರಿದೆ.
ಬದಲಾದ ಹವಾಮಾನ ಹಿನ್ನೆಲೆಯಲ್ಲಿ ಬಹುತೇಕರಲ್ಲಿ ಕೆಮ್ಮು, ಶೀತ, ನೆಗಡಿ, ಜ್ವರದ ಲಕ್ಷಣಗಳು ಕಂಡು ಬರುತ್ತಿವೆ. ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಒಬ್ಬರಿಂದ ಮತ್ತೂಬ್ಬರಿಗೆ ವೈರಲ್ ಹರಡುತ್ತಿದೆ. -ಡಾ|ಬನದೇಶ್ವರ, ತಾಲೂಕು ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ
‘ವೀಲ್ ಚೇರ್ ರೋಮಿಯೋ’ ಚಿತ್ರ ವಿಮರ್ಶೆ; ವೀಲ್ಚೇರ್ನಿಂದ ಮೇಲೇಳುವ ಸಿನಿಮಾವಿದು…
ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ