ಕಾರ್ಮಿಕ ಕಲ್ಯಾಣ ಮಂಡಳಿ ರಕ್ಷಣೆಗೆ ಆಗ್ರಹ


Team Udayavani, Dec 6, 2021, 2:17 PM IST

17union

ರಾಯಚೂರು: ಕಾನೂನುಬದ್ಧ ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸಬೇಕು, ಕಟ್ಟಡ ಉದ್ಯಮವನ್ನು ರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟಿಸಿದರು.

ಈ ಕುರಿತು ಜಿಲ್ಲಾಡಳಿತದ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿ, ದೇಶದ ಕಟ್ಟಡ ನಿರ್ಮಾಣ ವಲಯವು ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯಿàಕರಣ ಬಳಿಕ ಜಾರಿ ಮಾಡಿದ ಸರಕು ಸೇವಾ ತೆರಿಗೆ ನೀತಿಯಿಂದ ತೀವ್ರ ಬಿಕ್ಕಟ್ಟಿಗೆ ಸಿಲುಕಿತ್ತು. ಕೊರೊನಾ ಬಿಕ್ಕಟ್ಟಿಗೆ ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಕೊರೊನಾ ಮುಗಿದ ವರ್ಷ ಕಳೆಯುತ್ತ ಬಂದರೂ ಕಾರ್ಮಿಕರ ಸಂಕಷ್ಟಗಳು ಮಾತ್ರ ಈಡೇರಿಲ್ಲ ಎಂದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾನೂನು 1996 ಹಾಗೂ ಸೆಸ್‌ ಕಾನೂನನ್ನು ಪುನಃ ಸ್ಥಾಪಿಸಬೇಕು. ಅರ್ಜಿ ಹಾಕಿದ ಎಲ್ಲರಿಗೂ ಕೂಡಲೇ 3,000 ರೂ. ಲಾಕ್‌ಡೌನ್‌ ನಗದು ಪರಿಹಾರ ಪಾವತಿಸಬೇಕು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಶೈಕ್ಷಣಿಕ ಸಹಾಯಧನ ತಂತ್ರಾಂಶ ಕೂಡಲೇ ಆರಂಭಿಸಿ ಅರ್ಜಿಗಳ ವಿಳಂಬ ವಿಲೇವಾರಿ ನಿಲ್ಲಿಸಬೇಕು. ಮದುವೆ ಸಹಾಯಧನ ವಿಳಂಬ ಮತ್ತು ಬಾಂಡ್‌ ವಿತರಣೆ ಸರಿಪಡಿಸಿ ಸಹಜ ಮರಣ ಪರಿಹಾರದ ಮೊತ್ತವನ್ನು 2 ಲಕ್ಷ ರೂ. ಗೆ ಹೆಚ್ಚಿಸಬೇಕು. ಅಪಘಾತ ಮರಣ ಪರಿಹಾರದ ಮೊತ್ತವನ್ನು 10 ಲಕ್ಷ ರೂ. ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ತೆರಿಗೆ ಭತ್ಯೆಯನ್ನು ಪುರುಷ ಫಲಾನುಭವಿಯ ಪತ್ನಿಗೂ ವಿಸ್ತರಿಸಬೇಕು. ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ಜಾರಿಗೊಳಿಸಬೇಕು. ವೈದ್ಯಕೀಯ ಸಹಾಯಧನ ಹೆಚ್ಚಿಸಿ ಬಾಕಿ ಇರುವ ವೈದ್ಯಕೀಯ ಅರ್ಜಿಗಳು ಇತ್ಯರ್ಥಗೊಳಿಸಬೇಕು. ರೇಷನ್‌ ಕಿಟ್‌, ಟೂಲ್‌ಕಿಟ್‌, ಸುರಕ್ಷ ಕಿಟ್‌, ಬೂಸ್ಟರ್‌ಕಿಟ್‌ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡದಿರುವುದು ಹಾಗೂ ಮಂಡಳಿಯ ನಿಯಮಾವಳಿ, ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಕಾರ್ಮಿಕ ಇಲಾಖೆ ನಿರ್ದೇಶನ ಉಲ್ಲಂಘನೆ ಈ ವಿಚಾರದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ನೋಂದಣಿಗೆ ಪ್ರತ್ಯೇಕ ಐಡಿ ಜಾರಿಗೊಳಿಸಬೇಕು. ಕಲ್ಯಾಣ ಮಂಡಳಿಯಲ್ಲಿ ಸಿಐಟಿಯುಗೆ ಕಾರ್ಮಿಕ ಪ್ರಾತಿನಿಧ್ಯ ನೀಡಬೇಕು. ಮಂಡಳಿ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರ ಸಂಘದ ಸಂಚಾಲಕ ಡಿ.ಎಸ್‌. ಶರಣ ಬಸವ, ಸಿಐಟಿಯು ಜಿಲ್ಲಾಧ್ಯಕ್ಷ ವರಲಕ್ಷ್ಮೀ, ಮುಖಂಡರಾದ ರಂಗಮ್ಮ ಅನ್ವರ್‌, ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಲಕ್ಷ್ಮೀ, ಮುನಿಯಮ್ಮ, ಮಾರೆಮ್ಮ, ತಿಮಲಮ್ಮ, ಬಸಮ್ಮ, ಪುಷ್ಪ, ಪದ್ದಮ್ಮ, ಸುಲೋಚನಾ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.