16ರಂದು ಲಕ್ಷ್ಮೀ ರಂಗನಾಥ ದೇವಸ್ಥಾನ ರಥೋತ್ಸವ

Team Udayavani, May 13, 2022, 5:43 PM IST

22rathostav

ದೇವದುರ್ಗ: ತಾಲೂಕಿನ ಐತಿಹಾಸಿಕ ಮಾನಸಗಲ್‌ ಲಕ್ಷ್ಮೀ ರಂಗನಾಥ ದೇವಸ್ಥಾನ ಜಾತ್ರಾ ಮಹೋತ್ಸವ ಹಿನ್ನೆಲೆ ಮೇ 16ರಂದು ರಥೋತ್ಸವ ಜರುಗಲಿದೆ.

ಈಗಾಗಲೇ ಪೂರ್ವ ಸಿದ್ಧತೆ ಜೋರಾಗಿ ನಡೆದಿದೆ. ಇಲ್ಲಿನ ಮಾನಸಗಲ್‌ ಲಕ್ಷ್ಮೀ ರಂಗನಾಥ ದೇವಸ್ಥಾನ ಸುಮಾರ 400 ವರ್ಷ ಇತಿಹಾಸ ಹೊಂದಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಟ್ಟಿರುವ ಈ ದೇವಸ್ಥಾನಕ್ಕೆ ಹೊರ ಜಿಲ್ಲೆಯ ಭಕ್ತರೂ ಭೇಟಿ ನೀಡುತ್ತಾರೆ. ಜಾತ್ರೆ ಪ್ರಯುಕ್ತ ಈಗಿನಿಂದಲೇ ವಿವಿಧ ಪೂಜಾ ಕೈಂಕರ್ಯ ನಡೆಯುತ್ತಿವೆ.

ಕಳೆದ ಎರಡ್ಮೂರು ವರ್ಷಗಳಿಂದ ಕೋವಿಡ್‌ ಹಿನ್ನೆಲೆ ಯಾವುದೇ ಜಾತ್ರೆ, ರಥೋತ್ಸವ ಕಾರ್ಯಕ್ರಮ ಜರುಗದಿರುವುದರಿಂದ ಈ ಬಾರಿ ಜಾತ್ರಾ ಮಹೋತ್ಸವ ಬಹಳ ವಿಶೇಷವಾಗಿದೆ. ಜಾತ್ರೆ ನಿಮಿತ್ತ ದೇವಸ್ಥಾನಕ್ಕೆ ಸುಣ್ಣಬಣ್ಣ ವಿಶೇಷ ಅಲಂಕಾರ ಮಾಡಲಾಗಿದೆ. ಮೇ 17ರಂದು ಉಚ್ಚಯ ಜರುಗಲಿದ್ದು, 18ರಂದು ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಆಂಧ್ರ, ಮಹಾರಾಷ್ಟ್ರ ಸೇರಿದಂತೆ ವಿವಿಧ ಜಿಲ್ಲೆಯಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

ಭಕ್ತಿ ಅಚ್ಚುಕಟ್ಟು: ಮಾನಸಗಲ್‌ ಲಕ್ಷ್ಮೀ ರಂಗನಾಥ ದೇವಸ್ಥಾನ ರಥೋತ್ಸವ ಜರುಗುವ ಮೊದಲೇ ಕೆ.ಇರಬಗೇರಾ ಗ್ರಾಮಸ್ಥರು ಕಂಕಣ ಕಟ್ಟುತ್ತಾರೆ. ಕಂಕಣ ಕಟ್ಟಿದ 9 ದಿನಕ್ಕೆ ರಥೋತ್ಸವ ಜರುಗುತ್ತದೆ. ರಥೋತ್ಸವ ಮುಗಿದು ನಾಲ್ಕೈದು ದಿನಗಳವೆರೆಗೆ ಒಬ್ಬರು ಮಂಸ ತಿನ್ನಲ್ಲ. ಕೆಲ ನಿಮಯಗಳು ಅಚ್ಚುಕಟ್ಟಾಗಿ ಪಾಲನೆ ಮಾಡುವ ಪದ್ಧತಿ ಸುಮಾರು ವರ್ಷಗಳಿಂದ ನಡೆದು ಬಂದಿವೆ.

ಜಾನುವಾರುಗಳ ಜಾತ್ರೆ ವಿಶೇಷ: ಇಲ್ಲಿನ ಮಾನಸಗಲ್‌ ಲಕ್ಷ್ಮೀ ರಂಗನಾಥ ದೇವಸ್ಥಾನ ಜಾತ್ರಾ ಮಹೋತ್ಸವ ಹಿನ್ನೆಲೆ ಜಾನುವಾರುಗಳ ಜಾತ್ರೆ ಬಹಳ ವಿಶೇಷವಾಗಿದೆ. ಜಿಲ್ಲೆಯಲ್ಲಿ ಗುರುಗುಂಟ ಮೊದಲಾದರೇ ಎರಡನೇ ಸ್ಥಾನ ಮಾನಸಗಲ್‌ ಎಂಬ ಹೆಗ್ಗಳಿಕೆ ಹೊಂದಿದೆ. ತಿಂಗಳ ಕಾಲ ಜಾತ್ರೆ ನಡೆಯುತ್ತಿರುವುದು ತಾಲೂಕಿನಲ್ಲಿ ವಿಶೇಷ ಹೊಂದಿದೆ.

ವಧು ವರರ ವಿಶೇಷ: ಮದುವೆ ಸಮಾರಂಭಗಳು ಜೋರಾಗಿ ನಡೆಯುತ್ತಿವೆ. ಬಹುತೇಕ ನವ ಜೋಡಿಗಳು ಇಲ್ಲಿನ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿರುವುದು ಬಹಳ ವಿಶೇಷ. ರಥೋತ್ಸವದಲ್ಲಿ ಎಲ್ಲಿ ನೋಡಿದರೂ ನವ ಜೋಡಿಗಳು ಕಾಣುತ್ತಾರೆ. ರಥೋತ್ಸವ ಜರುಗಿದ ನಂತರವೇ ವಧು- ವರರು ಆಗಮಿಸಿ ಇಲ್ಲಿನ ಐತಿಹಾಸಿಕ ತಿಳಿದುಕೊಳ್ಳುವ ಪದ್ಧತಿ ಮೊದಲನಿಂದ ಇದೆ.

ಮೇ 16ರಂದು ಮಾನಸಗಲ್‌ ಲಕ್ಷ್ಮೀ ರಂಗನಾಥ ದೇವಸ್ಥಾನ ರಥೋತ್ಸವ ಪ್ರಯುಕ್ತ ತಾಲೂಕಾಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಲಾಗಿದೆ. ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟು ವ್ಯವಸ್ಥೆ ಮಾಡಲಾಗಿದೆ. -ಶ್ರೀನಿವಾಸ ಚಾಪಲ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.