ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಪನ್ನ

ರಥೋತ್ಸವ ಹಿನ್ನೆಲೆಯಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿ ಮೆರವಣಿಗೆ ಜರುಗಿತು.

Team Udayavani, Aug 26, 2021, 6:36 PM IST

ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಪನ್ನ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಯತಿಕುಲ ತಿಲಕ ಶ್ರೀ ಗುರುಸಾರ್ವಭೌಮರ 350ನೇ ಆರಾಧನೆ ಮಹೋತ್ಸವ ಕೊರೊನಾ ಕರಿಛಾಯೆ ಮಧ್ಯೆಯೂ ಅದ್ಧೂರಿಯಿಂದ ನೆರವೇರಿತು. ಸಪ್ತರಾತ್ರೋತ್ಸವದ ಉತ್ತರಾರಾಧನೆ ದಿನವಾದ ಬುಧವಾರ ಮಠದಲ್ಲಿ ವಸಂತೋತ್ಸವ, ಪ್ರಹ್ಲಾದ ರಾಜರ ಉತ್ಸವ, ಮಹಾರಥೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಂದಿನ ಸಂಭ್ರಮದಂತೆಯೇ ನಡೆದವು.

ಶ್ರೀ ಮಠದಲ್ಲಿ ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ಗ್ರಂಥಗಳ ಪಾರಾಯಣ, ಪ್ರವಚನ, ದಾಸವಾಣಿ ಜರುಗಿದವು. ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಸೇವೆ ನಡೆಯಿತು. ಶ್ರೀಮಠದ ಪೀಠಾಧಿ ಪತಿ ಡಾ| ಸುಬುಧೇಂದ್ರ ತೀರ್ಥರಿಂದ ಶ್ರೀ ರಘುಪತಿ ವೇದವಾಸ್ಯ ದೇವರಿಗೆ ವಿಶೇಷ ಪೂಜೆ, ಹಸ್ತೋದಕ ಸಮರ್ಪಣೆ, ಮಹಾಮಂಗಳಾರತಿ ಸೇವೆ ನೆರವೇರಿಸಿದರು.

ರಥೋತ್ಸವ ಹಿನ್ನೆಲೆಯಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿ ಮೆರವಣಿಗೆ ಜರುಗಿತು. ಗುರುಸಾರ್ವಭೌಮ ವಿದ್ಯಾಪೀಠದಲ್ಲಿ ಸುವರ್ಣ ಪಲ್ಲಕ್ಕಿಯಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿಯನ್ನಿರಿಸಿ ಮುಖ್ಯ ರಥ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಸ್ವಾಮಿಗಳ ನೇತೃತ್ವದಲ್ಲಿ ರಾಯರ ಮೂಲ ಬೃಂದಾವನ ಪಕ್ಕದಲ್ಲಿರುವ ದಶಾವತಾರ ಮಂಟಪದಲ್ಲಿ ಪ್ರಹ್ಲಾದ ರಾಜರ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು, ಚಾಮರ ಸೇವೆ ಮಾಡಿದರು. ಬಳಿಕ ಮಹಾಮಂಗಳಾರತಿ ಮಾಡಿ ವಸಂತೋತ್ಸವವಕ್ಕೆ ಚಾಲನೆ ನೀಡಿದರು.

ಶ್ರೀಗಳು ಮಠದ ಭಕ್ತರು, ಸಿಬ್ಬಂದಿಗೆ ಪಂಡಿತ, ವಿದ್ವಾಂಸರಿಗೆ ಗುಲಾಲು ಎರಚುವ ಮೂಲಕ ಓಕುಳಿ ಆಡಿದರು. ನಂತರ ಪ್ರಹ್ಲಾದ ರಾಜರ ಉತ್ಸವ ಮೂರ್ತಿ ಹೂಗಳಿಂದ ಅಲಂಕರಿಸಿದ್ದ ರಥದಲ್ಲಿರಿಸಲಾಯಿತು. ಈ ವೇಳೆ ಪೂಜೆ ಸಲ್ಲಿಸಿದ ಶ್ರೀಗಳು, ಅನುಗ್ರಹ ಸಂದೇಶ ನೀಡಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಶ್ರೀಗಳು ರಥ ಹಾಗೂ ರಾಯರ ಮೂಲ ಬೃಂದಾವನ ಮೇಲಿನ ಕಳಶಗಳಿಗೆ ಪುಷ್ಪವೃಷ್ಟಿಗೈದರು. ಕರ್ನಾಟಕ, ಆಂಧ್ರ, ತೆಲಂಗಾಣ ಮಾತ್ರವಲ್ಲದೇ ವಿವಿಧೆಡೆಯಿಂದ ಆಗಮಿಸಿದ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.