ಬಾಗಿಲು ತೆರೆಯದ ಗ್ರಂಥಾಲಯ

5 ವರ್ಷವಾದರೂ ಉದ್ಘಾಟನೆ ಆಗದ ಅಲೆಮಾರಿ ಸಮುದಾಯ ಗ್ರಂಥಾಲಯ ಕಟ್ಟಡಗಳು

Team Udayavani, Feb 17, 2020, 12:28 PM IST

17-February-7

ಮಾನ್ವಿ: ಪಟ್ಟಣದಲ್ಲಿ ಎರಡು ಅಲೆಮಾರಿ ಸಮುದಾಯಗಳ ಗ್ರಂಥಾಲಯಗಳಿವೆ. ಈ ಗ್ರಂಥಾಲಯಗಳಿಗೆ ನೂತನ ಕಟ್ಟಡ ನಿರ್ಮಿಸಿ ನಾಲ್ಕೈದು ವರ್ಷವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಾಗಿಲು ತೆರೆಯದೇ ನಿರುಪಯುಕ್ತವಾಗಿವೆ.

2014-15ನೇ ಸಾಲಿನ ಜಿಲ್ಲಾ ಕೇಂದ್ರ ಗ್ರಂಥಾಲಯದ ಪರಿಶಿಷ್ಟ ಜಾತಿಗಳ ಯೋಜನೆ ಅನುದಾನದಲ್ಲಿ ನಿರ್ಮಿತಿ ಕೇಂದ್ರದಿಂದ ಪಟ್ಟಣದಲ್ಲಿ ಎರಡು ಅಲೆಮಾರಿ ಸಮುದಾಯದ ಗ್ರಂಥಾಲಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. ವಾರ್ಡ್‌ ನಂ.1ರ ರಾಜೀವ್‌ ಗಾಂಧಿ ನಗರದಲ್ಲಿ ಒಂದು ಮತ್ತು ಕೋನಾಪುರಪೇಟೆ ಹತ್ತಿರದ ಮಹಾತ್ಮ ಗಾಂಧಿ ನಗರದಲ್ಲಿ ಅಲೆಮಾರಿ ಸಮುದಾಯದ ಗ್ರಂಥಾಲಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. 2015ರಲ್ಲೇ ಕಟ್ಟಡ ನಿರ್ಮಿಸಿದ್ದರೂ ಇದುವರೆಗೆ ಉದ್ಘಾಟನೆ ಆಗಿಲ್ಲ. ಹೀಗಾಗಿ ಈ ಗ್ರಂಥಾಲಯ ಕಟ್ಟಡಗಳು ನಿರುಪಯುಕ್ತವಾಗಿವೆ.

ಆರೋಪ: ಈ ಗ್ರಂಥಾಲಯ ಕಟ್ಟಡ ಉದ್ಘಾಟನೆಗೆ ಜಿಲ್ಲಾ ಗ್ರಂಥಾಲಯ ಅಧಿಕಾರಿ ನಿರ್ಲಕ್ಷ್ಯ ತಾಳಿದ್ದಾರೆ. ಅಲ್ಲದೆ ಅಲೆಮಾರಿ ಸಮುದಾಯದ ಜನರೇ ಇಲ್ಲದ ಪ್ರದೇಶದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ. ನಿಯಮಬಾಹಿರವಾಗಿ ಅಲೆಮಾರಿ ಸಮುದಾಯದವರಲ್ಲದವರನ್ನು ಗ್ರಂಥಪಾಲಕರನ್ನಾಗಿ ನೇಮಕ ಮಾಡಲಾಗಿದೆ. ಗ್ರಂಥಾಲಯ ತೆರೆಯದಿದ್ದರೂ ಗ್ರಂಥಪಾಲಕರಿಗೆ ವೇತನ ಪಾವತಿ ಆಗುತ್ತಿದೆ. ಅಲ್ಲದೇ ಗ್ರಂಥಾಲಯಕ್ಕೆ ಬರುವ ಪುಸ್ತಕಗಳು ಏನಾಗುತ್ತಿವೆ ಎಂಬ ಮಾಹಿತಿ ಇಲ್ಲದಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಅನುಕೂಲ: ವಾರ್ಡ್‌ ನಂ1ರ ರಾಜೀವ್‌ ಗಾಂಧಿ ನಗರದಲ್ಲಿ ನಿರ್ಮಿಸಿದ ಅಲೆಮಾರಿ ಸಮುದಾಯದ ಗ್ರಂಥಾಲಯದ ಹತ್ತಿರ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜ್‌ ಇದೆ. ಇದು ಸ್ಲಂ ಆಗಿದೆ. ಗ್ರಂಥಾಲಯ ಬಾಗಿಲು ತೆರೆದಲ್ಲಿ ಇಲ್ಲಿನ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಮತ್ತು ಮಹಾತ್ಮ ಗಾಂಧಿ ನಗರದಲ್ಲಿಯೂ ಸಹ ಬಡ ವಿದ್ಯಾರ್ಥಿಗಳಿದ್ದಾರೆ. ಆದ್ದರಿಂದ ಕೂಡಲೇ ಗ್ರಂಥಾಲಯಗಳನ್ನು ಪ್ರಾರಂಭಿಸಿದರೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಯುವಕರಿಗೆ ಸಹಕಾರಿಯಾಗಲಿದೆ. ಗ್ರಂಥಾಲಯಕ್ಕೆ ಅಲೆಮಾರಿ ಸಮುದಾಯದವರನ್ನೇ ಗ್ರಂಥಪಾಲಕರನ್ನಾಗಿ ನೇಮಿಸಬೇಕೆಂದು ಅಖೀಲ ಕರ್ನಾಟಕ ಕೊರಮ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಆಗ್ರಹಿಸಿದ್ದಾರೆ.

ಗ್ರಂಥಾಲಯಗಳ ನಿರ್ವಹಣೆ ಬಗ್ಗೆ ಜಿಲ್ಲಾದ್ಯಂತ ಆಗಾಗ ಭೇಟಿ ನೀಡಿ ವೀಕ್ಷಣೆ ಮಾಡುತ್ತಿರುತ್ತೇನೆ. ಮಾನ್ವಿ ಪಟ್ಟಣದಲ್ಲಿ ನಿರ್ಮಿಸಿದ ಅಲೆಮಾರಿ ಸಮುದಾಯಗಳ ಗ್ರಂಥಾಲಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ. ಸಮಸ್ಯೆ ಬಗೆಹರಿಸಲಾಗುವುದು. ದೂರು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಎಂ.ಎಸ್‌.ರೆಬಿನಾಳ,
 ಜಿಲ್ಲಾ ಗ್ರಂಥಾಲಯ ಅಧಿಕಾರಿ, ರಾಯಚೂರು

ಮಾನ್ವಿ ಪಟ್ಟಣದಲ್ಲಿ ಕಳೆದ ಐದು ವರ್ಷಗಳ ಹಿಂದೆ ಅಲೆಮಾರಿ ಸಮುದಾಯಗಳ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ. ಇದುವರೆಗೆ ಉದ್ಘಾಟನೆ ಆಗಿಲ್ಲ. ಗ್ರಂಥಾಲಯ ಬಾಗಿಲು ತೆರೆಯುವಂತೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಗ್ರಂಥಾಲಯಗಳಿಗೆ ಬರುವ ಪುಸ್ತಕಗಳು, ಪೀಠೊಪಕರಣಗಳು ಏನಾಗುತ್ತಿವೆ ಎಂಬ ಅನುಮಾನ ಮೂಡುತ್ತಿದೆ. ಮೇಲಾಧಿಕಾರಿಗಳು ಗ್ರಂಥಾಲಯ ಪ್ರಾರಂಭಿಸಲು ಕ್ರಮ ವಹಿಸಬೇಕು.
ಪರಶುರಾಮ ಭಜಂತ್ರಿ ನಕ್ಕುಂದಿ,
ತಾಲೂಕು ಪ್ರಧಾನ ಕಾರ್ಯದರ್ಶಿ,
ಅಖೀಲ ಕರ್ನಾಟಕ ಕೊರಮ ಸಂಘ
ಮಾನ್ವಿ

ರವಿ ಶರ್ಮಾ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.