ಪುರಸಭೆಯಲ್ಲಿ ಹಲವು ಹುದ್ದೆಗಳು ಖಾಲಿ!

ಆಡಳಿತ ಅಭಿವೃದ್ಧಿಗೆ ಮಂಕು ,ನೂತನ ಅಧ್ಯಕ್ಷರ ಮುಂದಿವೆ ಹಲವು ಸಮಸ್ಯೆ-ಸವಾಲುಗಳು

Team Udayavani, Oct 28, 2020, 4:01 PM IST

rc-tdy-2

ದೇವದುರ್ಗ: ಪುರಸಭೆ ಮುಖ್ಯಾಧಿಕಾರಿ ಹುದ್ದೆ ಸೇರಿ 40ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಆಡಳಿತ ಅಭಿವೃದ್ಧಿಗೆ ಮಂಕು ಕವಿದಿದೆ. ಸರ್ಕಾರ ಹುದ್ದೆಗಳ ಭರ್ತಿಗೆ ಮುಂದಾಗದ ಹಿನ್ನೆಲೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಹರಸಾಹಸ ಪಡುವಂತಾಗಿದೆ. ಹೀಗಾಗಿ ವಾರ್ಡ್‌ಗಳ ಅಭಿವೃದ್ಧಿ ಕೆಲಸಗಳು ಆಮೆಗತಿಯಲ್ಲಿ ಸಾಗಿವೆ.

ಪುರಸಭೆಯಲ್ಲಿ ಮುಖ್ಯಾಧಿಕಾರಿ ಹುದ್ದೆ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇವೆ. ಮಂಜೂರು ಹುದ್ದೆಗಳು 97 ಇದ್ದು ಅದರಲ್ಲಿ 48 ಭರ್ತಿ 49 ಹುದ್ದೆಗಳು ಸುಮಾರು ವರ್ಷಗಳಿಂದ ಖಾಲಿ ಇವೆ. ಆರೇಳು ತಿಂಗಳಿಗೊಮ್ಮೆ ಪ್ರಭಾರಿ ಮುಖ್ಯಾಧಿ ಕಾರಿ ಬದಲಾಗುತ್ತಿರುವ ಹಿನ್ನೆಲೆ ವಾರ್ಡ್‌ಗಳ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಸಮುದಾಯ ಸಂಘಟನಾ ಧಿಕಾರಿ, ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಸಮುದಾಯ ಸಂಘಟಕರು, ದ್ವಿತೀಯ ದರ್ಜೆ ಸಹಾಯಕರು, ಜೆಇ 15 ಪೌರ ಕಾರ್ಮಿಕರು ಸೇರಿದಂತೆ ಹಲವು ಹುದ್ದೆಗಳು ಪುರಸಭೆಯಲ್ಲಿ ಖಾಲಿ ಖಾಲಿ ಎಂಬಂತಾಗಿದೆ. ಸರ್ಕಾರ ಹುದ್ದೆಗಳ ಭರ್ತಿಗೆ ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಅಭಿವೃದ್ಧಿಗೆ ಹುದ್ದೆಗಳೇ ಅಡ್ಡಿಯಾದಂತಾಗಿದೆ.

ತಾತ್ಕಾಲಿಕ ಜೆಇ ನೇಮಕ: ಪಟ್ಟಣದಲ್ಲಿ ಮೂರನೇ ಹಂತದ ನಗರೋತ್ಥಾನ ಯೋಜನೆಡಿ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿವೆ. ಶಾಸಕರ ಅನುದಾನ ಸೇರಿ ಇತರೆ ಯೋಜನೆ ಮೂಲಕ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ. ಎರಡು ಇಂಜಿನಿಯರ್‌ ಹುದ್ದೆಗಳು ಖಾಲಿರುವ ಕಾರಣ ಜಿಲ್ಲಾಧಿಕಾರಿ ಕೆಎಂಆರ್‌ಪಿ ಯೋಜನೆಯಲ್ಲಿ ಮಲ್ಲಣ್ಣ ಎಂಬುವರನ್ನು ನೇಮಕ ಮಾಡಲಾಗಿದ್ದು, ನಾಲ್ಕೈದು ವರ್ಷಗಳ ಹಿಂದೆ ಜಾಕೀರ್‌ ಎಂಬುವರನ್ನು ಹೊರಗುತ್ತಿಗೆ ಆಧಾರದ ಮೇಲೆ ನಿಯೋಜನೆ ಮಾಡಲಾಗಿದೆ. ತಾತ್ಕಾಲಿಕ ಇಂಜಿನಿಯರ್‌ಗಳು ಇದ್ದು, ಕಾಮಗಾರಿ ಪರಿಶೀಲನೆ ಸ್ಥಳಕ್ಕೆ ಅಪರೂಪ ಭೇಟಿ ಎನ್ನಲಾಗುತ್ತಿದೆ. ಕಳಪೆ ಕಾಮಗಾರಿ ಕುರಿತು ವಾರ್ಡ್‌ ನಿವಾಸಿಗಳಿಂದ ದೂರು ಬಂದಲ್ಲಿ ಕ್ರಮ ಕೈಗೊಳ್ಳುವವರು ಇಲ್ಲದಂತಾಗಿದೆ.

ವಿದ್ಯಾರ್ಥಿಗಳಿಗೆ ಸೌಲಭ್ಯವಿಲ್ಲ: ಪುರಸಭೆ ಇಲಾಖೆಯಿಂದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ ಒದಗಿಸಲಾಗುತ್ತದೆ. ಸಮುದಾಯ ಸಂಘಟನಾ ಧಿಕಾರಿ ಹುದ್ದೆ ಖಾಲಿ ಇರುವ ಕಾರಣ ಪ್ರತಿ ವರ್ಷ ವಿದ್ಯಾರ್ಥಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಎಸ್‌ಸಿ ವಿದ್ಯಾರ್ಥಿಗಳಿಗೆ ಶೇ.20ರಲ್ಲಿ ಎಸ್‌ಟಿ ವಿದ್ಯಾರ್ಥಿಗಳಿಗೆಶೇ.7ರಲ್ಲಿ ಹಲವು ಸೌಲಭ್ಯ ನೀಡಲಾಗುತ್ತಿದೆ. ಕೋವಿಡ್ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಸದ್ಯಕ್ಕೆ ಯೋಜನೆ ಸ್ಥಗಿತಗೊಳಿಸಲಾಗಿದೆ. ಸರ್ಕಾರ ಜಾರಿಗೆ ತರುವಂತ ಪ್ರತಿಯೊಂದು ಯೋಜನೆಗಳು ಸಕಾಲಕ್ಕೆ ಅನುಷ್ಠಾನಗೊಳಿಸಲು ಅಧಿಕಾರಿಗಳ ಹುದ್ದೆ ಖಾಲಿಯಾದ ಹಿನ್ನೆಲೆಯಲ್ಲಿ ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ.

ಅಧ್ಯಕ್ಷರ ಮುಂದೆ ಸವಾಲು: ದಿನಗೂಲಿ ಪೌರ ಕಾರ್ಮಿಕರ ಸುಮಾರು ತಿಂಗಳ ವೇತನ ಸೇರಿ ಅಗತ್ಯ ಮೂಲಭೂತ ಸೌಲಭ್ಯಗಳಿಗೆ ನಿವಾಸಿಗಳು ಪೇಚಾಡುವಂತಾಗಿದೆ. ಸಾರ್ವಜನಿಕ ಕ್ಲಬ್‌ ಆವರಣದಿಂದ ಡಾ|ಬಿ.ಆರ್‌. ಅಂಬೇಡ್ಕರ್‌ ವೃತ್ತದವರೆಗೆ ರಸ್ತೆಯ ಎರಡು ಬದಿ ಹೈಮಾಸ್ಟ್‌ ದೀಪಗಳು ಬೆಳಕು ನೀಡಲಾರದಷ್ಟು ಸಮಸ್ಯೆ ಎದುರಾಗಿದೆ. ಬಹುತೇಕ ವಾರ್ಡ್‌ನಲ್ಲಿ ಕುಡಿಯುವ ನೀರು, ಶೌಚಾಲಯ, ರಸ್ತೆ ಸೇರಿ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿದ್ದಾರೆ. ಇಲ್ಲಿನ ಸಮಸ್ಯೆ ನೂತನ ಅಧ್ಯಕ್ಷರ ಮುಂದಿನ ಸವಾಲುಗಳು ಎಂಬಂತಾಗಿದೆ.

ಕಚೇರಿಯಲ್ಲಿ ಬಹುತೇಕ ಹುದ್ದೆಗಳು ಖಾಲಿ ಇರುವುದು ಮೇಲಾಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಕೆಎಂಆರ್‌ಪಿ ಯೋಜನೆ ಮೂಲಕ ಜೆಇ ನೇಮಕ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತದೆ.  –ಶರಣಪ್ಪ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ

ಇತ್ತೀಚೆಗೆ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಪುರಸಭೆ ಇಲಾಖೆ ಸಮಸ್ಯೆ ಕುರಿತು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹಂತ ಹಂತವಾಗಿ ಸಮಸ್ಯೆ ಬಗೆಹರಿಸಲಾಗುತ್ತದೆ. –ಹನುಮಗೌಡ ಶಂಕರಬಂಡಿ, ಪುರಸಭೆ ಅಧ್ಯಕ್ಷ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

muddy

ಆರು ಭಾಷೆಗಳಲ್ಲಿ ತೆರೆಕಾಣುತ್ತಿದೆ ‘ಮಡ್ಡಿ’

1-asds-a

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ; 18 ರ ತರುಣ ಸಾವು

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

h d kumaraswamy

ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ.. ಆಟ ಈಗ ಆರಂಭ..!: ಎಚ್ ಡಿಕೆ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ

ಸಿಎಂ ಬೊಮ್ಮಾಯಿ

ರಾಜ್ಯಕ್ಕೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್

ಆ್ಯಶಸ್ ಟ್ರೋಫಿ: ಆಸೀಸ್ ವೇಗದ ದಾಳಿಗೆ ತತ್ತರಿಸಿದ ಇಂಗ್ಲೆಂಡ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30indian

ಭಾರತೀಯ ನೆಲದಲ್ಲಿ ಜನಿಸಿದ ನಾವೇ ಧನ್ಯರು

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

11vaccine

ಮೂರನೇ ಅಲೆ ಭೀತಿಗೆ 2ನೇ ಡೋಸ್‌ಗೆ ಬೇಡಿಕೆ!

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24lawyer

ನಿತ್ಯ ಅಧ್ಯಯನ ಶೀಲರಾದಾಗ ಮಾತ್ರ ಯಶಸ್ಸು: ಹಿರೇಮಠ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

omicron

ದುಬೈನಿಂದ ಬಂದ ವ್ಯಕ್ತಿಗೆ ಕೊರೊನಾ:ಒಮಿಕ್ರಾನ್‌ ಭೀತಿ; ಮಾಸ್ಕ್ ಧರಿಸದಿದ್ದರೆ ದಂಡ

muddy

ಆರು ಭಾಷೆಗಳಲ್ಲಿ ತೆರೆಕಾಣುತ್ತಿದೆ ‘ಮಡ್ಡಿ’

ನಗರಸಭೆ ಹೊರಗುತ್ತಿಗೆ ಸಿಬ್ಬಂದಿಗಳಿಂದ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ನಗರಸಭೆ ಹೊರಗುತ್ತಿಗೆ ಸಿಬ್ಬಂದಿಗಳಿಂದ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂಘದಿಂದ ಸಮಾಜ ಬಾಂಧವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ: ಮುರಳಿ ಕೆ. ಶೆಟ್ಟಿ

ಸಂಘದಿಂದ ಸಮಾಜ ಬಾಂಧವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ: ಮುರಳಿ ಕೆ. ಶೆಟ್ಟಿ

1-asds-a

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ; 18 ರ ತರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.