ದೇಣಿಗೆ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು? ಸಚಿವ ಈಶ್ವರಪ್ಪ ವಾಗ್ದಾಳಿ
Team Udayavani, Feb 19, 2021, 12:26 PM IST
ರಾಯಚೂರು: ರಾಮ ಮಂದಿರ ನಿರ್ಮಾಣಕ್ಕೆ 10 ರೂ ದೇಣಿಗೆ ನೀಡಿದವರು ಲೆಕ್ಕ ಕೇಳಲಿ. ಅದು ಬಿಟ್ಟು ಸುಪ್ರೀಂ ಕೋರ್ಟ್ ತೀರ್ಪಿಗೂ ಗೌರವ ನೀಡದೆ ವಿವಾದಿತ ಸ್ಥಳ ಎಂದಿರುವ ಸಿದ್ದರಾಮಯ್ಯ ಯಾವನು ಲೆಕ್ಕ ಕೇಳೋಕೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮಮಂದಿರದ ನಿರ್ಮಾಣದ ಸ್ಥಳ ವಿವಾದಿತ ಸ್ಥಳ. ಅಲ್ಲಿ ಮಂದಿರ ನಿರ್ಮಾಣಕ್ಕೆ ತಾವು ಹಣ ನೀಡುವುದಿಲ್ಲ ಎಂದಿರುವ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೆ ಮಾತನಾಡಿದ್ದಾನೆ. ಅವನು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಬಹುದೇ? ಕೂಲಿ ಮಾಡುವ ಒಬ್ಬ 10 ರೂ. ನೀಡಿದ್ದಾರೆ. ಅವರು ಲೆಕ್ಕ ಕೇಳಲಿ. ದೇಣಿಗೆ ನೀಡುವುದಿಲ್ಲ ಎಂದಿರುವ ಇವನಾರು ಲೆಕ್ಕ ಕೇಳಲು ಎಂದು ಕಿಡಿಕಾರಿದರು.
ಮಾಜಿ ಸಿಎಂ ಕುಮಾರಸ್ವಾಮಿ ಹಣ ನೀಡದವರ ಮನೆಗಳಿಗೆ ಗುರುತು ಹಾಕಲಾಗಿದೆ ಎಂದಿದ್ದಾರೆ. ರಾಯಚೂರಿನಲ್ಲಿ ಯಾರ ಮನೆಗೆ ಗುರುತು ಮಾಡಲಾಗಿದೆ ತೋರಿಸಲಿ ಎಂದು ಸವಾಲೆಸೆದರು. ಅವರು ಮೊದಲು ರಾಮನ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿ ಬಿಡಲಿ ಎಂದರು.
ಇದನ್ನೂ ಓದಿ:ಬಜೆಟ್ ಮಂಡನೆ ಹಿನ್ನೆಲೆ: ಎಲ್ಲಾ ಇಲಾಖೆಗಳ ಸಭೆ ನಡೆಸಿದ ಸಿಎಂ ಬಿಎಸ್ ವೈ
ಬಿಹಾರದಲ್ಲಿ ಬಿಜೆಪಿ ಸೋಲಿಸಲು ವಿಜಯೇಂದ್ರ ಹಣ ನೀಡಿದ್ದಾರೆ ಎಂಬ ಯತ್ನಾಳರ ಆರೋಪಕ್ಕೆ ನಾನು ಹೇಗೆ ಉತ್ತರಿಸಲಿ. ಆರೋಪ ಮಾಡಿದ ಯತ್ನಾಳರೂ ಇಲ್ಲಿಲ್ಲ, ಆರೋಪ ಹೊತ್ತ ವಿಜಯೇಂದ್ರರು ಇಲ್ಲಿಲ್ಲ. ಎಲ್ಲಿಯೋ ಇರುವ ಬಿಹಾರದ ಬಗ್ಗೆ ನಾನೇನು ಹೇಳಲಿ. ಯತ್ನಾಳರಿಗೆ ಈಗಾಗಲೇ ನೋಟಿಸ್ ನೀಡಿದ್ದು, ಅವರು ಉತ್ತರಿಸುತ್ತಾರೆ ಎಂದು ಹೇಳಿದರು.
ಪಂಚಮಸಾಲಿಗೆ ಮೀಸಲಾತಿ ನೀಡಲು ಕುರಿತು ಕ್ಯಾಬಿನೆಟ್ ನಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಈ ಕುರಿತು ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ವರದಿ ನೀಡಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ