Udayavni Special

ಹದಗೆಟ್ಟ ರಾಜ್ಯ ಹೆದ್ದಾರಿ: ಸಂಚಾರಕ್ಕೆ ಸಂಚಕಾರ


Team Udayavani, Feb 26, 2020, 1:00 PM IST

26-February-08

ಮುದಗಲ್ಲ: ಪಟ್ಟಣದ ಪೆಟ್ರೋಲ್‌ ಪಂಪ್‌ ಕ್ರಾಸ್‌ ನಿಂದ ಮೇಗಳಪೇಟೆ ದಾಟುವವರೆಗೆ ಸುಮಾರು ಮೂರುವರೆ ಕಿಮೀ ರಾಜ್ಯ ಹೆದ್ದಾರಿ ಸಂಪೂರ್ಣ ಹಳಾಗಿದ್ದು, ಪ್ರಯಾಣಿಕರು, ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಪಟ್ಟಣದೊಳಗೆ ಹಾದು ಹೋಗಿರುವ ರಾಜ್ಯ ಹೆದ್ದಾರಿ ಅಭಿವೃದ್ಧಿಗಾಗಿ ಸರಕಾರದಿಂದ ನಗರೋತ್ಥಾನ ಮೂರನೇ ಹಂತದಲ್ಲಿ ಸಾಕಷ್ಟು ಅನುದಾನ ನಿಗದಿ ಮಾಡಿ ರಸ್ತೆ ಅಗಲೀಕರಣಕ್ಕೆ ಮತ್ತು ನಿರ್ಮಾಣಕ್ಕೆ ಮುಹೂರ್ತ ನಿಗದಿ ಮಾಡುವಷ್ಟರಲ್ಲಿ ಸರ್ಕಾರ ಅನುದಾನ ಹಿಂಪಡೆದ ಕಾರಣ ಕಾಮಗಾರಿ ನನೆಗುದಿಗೆ ಬಿದ್ದಿದೆ. ಪಟ್ಟಣದ ಹೊರಬಾಗದಲ್ಲಿ ರಾಜ್ಯಹೆದ್ದಾರಿ ದುರಸ್ತಿ ಮಾಡಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪಟ್ಟಣದಲ್ಲಿನ ರಸ್ತೆ ಪುರಸಭೆ ವ್ಯಾಪ್ತಿಗೆ ಬರುತ್ತದೆ ಎಂದು ಹೇಳುವ ಮೂಲಕ ತಮ್ಮ ಜವಾಬ್ದಾರಿಯಿಂದ ಜಾರಿಕೊಂಡಿದ್ದಾರೆ. ಪಟ್ಟಣದಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಗುಂಡಿಗಳು ಬಿದ್ದಿವೆ.

ಈ ಗುಂಡಿಗಳಿಗೆ ಪುರಸಭೆ ಎರಡ್ಮೂರು ಬಾರಿ ಮರಂ ಹಾಕಿ ತೇಪೆ ಹಚ್ಚುವ ಕಾರ್ಯ ಮಾಡಿದೆ. ಆದರೆ ದುರಸ್ತಿಗೆ ಮಾತ್ರ ಮುಂದಾಗಿಲ್ಲ.

ಧೂಳು: ರಾಜ್ಯ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ಪದೇ ಪದೇ ಮರಂ ಹಾಕುವುದರಿಂದ ಧೂಳಿನಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ. ವಾಹನಗಳು ವೇಗವಾಗಿ ಸಂಚರಿಸಿದರೆ ಧೂಳು ಏಳುತ್ತಿದೆ. ಜನರು ಮೂಗು ಮುಚ್ಚಿಕೊಂಡು, ಇಲ್ಲವೇ ಮೂಗಿಗೆ ಬಟ್ಟೆ ಕಟ್ಟಿಕೊಂಡು ಸಂಚರಿಸುವಂತಾಗಿದೆ. ಇನ್ನು ರಸ್ತೆ ಅಕ್ಕಪಕ್ಕದ ಅಂಗಡಿಗಳಲ್ಲಿನ ತಿಂಡಿ-ತಿನಿಸುಗಳು, ಹಣ್ಣು-ಹಂಪಲುಗಳ ಮೇಲೆ, ಹೋಟೆಲ್‌ನ ತಿಂಡಿಗಳ ಮೇಲೆ ಧೂಳು ಕುಳಿತುಕೊಳ್ಳುತ್ತಿದೆ. ಇಂತಹ ಪದಾರ್ಥಗಳನ್ನೇ ಮಾರಲಾಗುತ್ತಿದೆ. ಹೀಗಾಗಿ ಪುರಸಭೆಯಿಂದ ನಿತ್ಯ ರಸ್ತೆಗೆ ನೀರು ಸಿಂಪಡಿಸಿ ಧೂಳು ಏಳದಂತೆ ಕ್ರಮ ವಹಿಸಬೇಕು. ಇಲ್ಲವೇ ಬೇಗ ಹೆದ್ದಾರಿ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆದ್ದಾರಿ ದುರಸ್ತಿ ಹಾಗೂ ಅಗಲೀಕರಣಕ್ಕೆ ನಿಗದಿಯಾಗಿದ್ದ ಅನುದಾನವನ್ನು ಸರಕಾರ ತಾಂತ್ರಿಕ ಕಾರಣದಿಂದ ಹಿಂದಕ್ಕೆ ಪಡೆದುಕೊಂಡಿದ್ದರಿಂದ ರಾಜ್ಯ ಹೆದ್ದಾರಿ ಕಾಮಗಾರಿ ತಡವಾಗಿದೆ.
ಟಿ.ನರಸಿಂಹಮೂರ್ತಿ,
ಮುಖ್ಯಾಧಿಕಾರಿ ಪುರಸಭೆ ಮುದಗಲ್ಲ

ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಾಜ್ಯ ಹೆದ್ದಾರಿ ಕಾಮಗಾರಿ ಕೈ ಬಿಡಲಾಗಿದೆ. ಸಂಬಂಧಿಸಿದವರು ಸರಕಾರದಿಂದ ಅನುದಾನ ತಂದು ಪಟ್ಟಣದಲ್ಲಿನ ಮೂರುವರೆ ಕಿ.ಮೀ.ಹೆದ್ದಾರಿ ದುರಸ್ತಿಗೆ ಮುಂದಾಗಬೇಕು.
ಗುಂಡಪ್ಪ ಗಂಗಾವತಿ,
ಪುರಸಭೆ ಸದಸ್ಯ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

world-wide-covid19

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump-jpeg

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

Water-Drowning

ಜಾರಿ ಬಿದ್ದ ಮೊಬೈಲ್ ತೆಗೆಯಲು ಹೋಗಿ ನಾಲ್ಕು ಕಂದಮ್ಮಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rc-tdy-1

ಅಧಿಕಾರಿಗಳಿಂದ 13 ಜನರ ಮಾಹಿತಿ ಸಂಗ್ರಹ

rc-tdy-1

ಪಿಎಂ ಗರೀಬ್‌ ಯೋಜನೆ ಹಣ ಮುಂದಿನ ವಾರ ಖಾತೆಗೆ

ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಅಧಿಕಾರಿಯ ಕುಟುಂಬದ ವಿರುದ್ಧ ಪ್ರಕರಣ

ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಅಧಿಕಾರಿಯ ಕುಟುಂಬದ ವಿರುದ್ಧ ಪ್ರಕರಣ

ಹಳ್ಳಿ ಗಳಲ್ಲಿ ಹೆಚ್ಚಿದ ಕಿಕ್‌; ಸಿಗರೇಟ್‌, ಗುಟ್ಕಾ ತುಟ್ಟಿ

ಹಳ್ಳಿ ಗಳಲ್ಲಿ ಹೆಚ್ಚಿದ ಕಿಕ್‌; ಸಿಗರೇಟ್‌, ಗುಟ್ಕಾ ತುಟ್ಟಿ

ಮಹಿಳೆಯರಿಗೆ ಉದ್ಯೋಗ ಸೃಷ್ಟಿಸಿದ ಕೋವಿಡ್ 19.!

ಮಹಿಳೆಯರಿಗೆ ಉದ್ಯೋಗ ಸೃಷ್ಟಿಸಿದ ಕೋವಿಡ್ 19.!

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಶಿಕ್ಷಕರಿಂದ ಕೋವಿಡ್ 19 ಜಾಗೃತಿ

ಶಿಕ್ಷಕರಿಂದ ಕೋವಿಡ್ 19 ಜಾಗೃತಿ

ಕೋವಿಡ್ 19 ಲಾಕ್‌ಡೌನ್‌  ಬಳಿಕ ಟೋಲ್‌ ಹೆಚ್ಚಳ ಬಿಸಿ

ಕೋವಿಡ್ 19 ಲಾಕ್‌ಡೌನ್‌  ಬಳಿಕ ಟೋಲ್‌ ಹೆಚ್ಚಳ ಬಿಸಿ

ಎ. 14ರೊಳಗೆ ಪರಿಸ್ಥಿತಿ ಸುಧಾರಿಸಿದರೆ ಲಾಕ್‌ಡೌನ್‌ ಸಡಿಲ

ಎ. 14ರೊಳಗೆ ಪರಿಸ್ಥಿತಿ ಸುಧಾರಿಸಿದರೆ ಲಾಕ್‌ಡೌನ್‌ ಸಡಿಲ

ಸಾರಿಗೆ ನಿಯಂತ್ರಣ ಕೊಠಡಿ: ಸವದಿ

ಸಾರಿಗೆ ನಿಯಂತ್ರಣ ಕೊಠಡಿ: ಸವದಿ

ಗಡಿ ಬಂದ್‌ ಸಡಿಲಿಕೆ ಇಲ್ಲ : ಬಿಎಸ್‌ವೈ

ಗಡಿ ಬಂದ್‌ ಸಡಿಲಿಕೆ ಇಲ್ಲ : ಬಿಎಸ್‌ವೈ