ಕೆಲವೇ ದಿನಗಳಲ್ಲಿ ಪಿಜಿ ಸೆಂಟರ್‌ಗೆ ಹೊಸ ರಸ್ತೆ

Team Udayavani, Nov 14, 2021, 4:45 PM IST

22pgroad2

ಸಿಂಧನೂರು: ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೂಲಕ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣ ಕನಸು ನನಸಾಗಿಸಲು ಬಹುಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತಿದ ಕೇಂದ್ರಕ್ಕೆ ಕೊನೆಗೂ ರಸ್ತೆ ಯೋಗ ಒಲಿಯುವ ಮುನ್ಸೂಚನೆ ಲಭಿಸಿದೆ.

ಅಕ್ಕಮಹಾದೇವಿ ವಿವಿ ಮಾಜಿ ಸಿಂಡಿಕೇಟ್‌ ಸದಸ್ಯ ಆರ್‌.ಸಿ. ಪಾಟೀಲ್‌ ನೇತೃತ್ವದ ತಂಡ ಕೊನೆಗೂ ವಿವಿ ಕೇಂದ್ರದ ಪಿಜಿ ಸೆಂಟರ್‌ಗೆ ರಸ್ತೆ ಕಲ್ಪಿಸಲು ಮುಂದಾಗಿದೆ. ಕಂದಾಯ ಇಲಾಖೆಗೆ ಸೇರಿದ ಭೂಮಿ ಬಳಸಿಕೊಂಡು ಸರ್ಕಾರಿ ಜಮೀನಿನ ಮಾರ್ಗವಾಗಿ ವಿವಿ ಕೇಂದ್ರಕ್ಕೆ 50 ಅಡಿ ವಿಸ್ತೀರ್ಣದ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿದೆ. ರಸ್ತೆ ದಿಕ್ಕಿಲ್ಲದ ಕೇಂದ್ರಕ್ಕೆ ಕೊನೆಗೂ ಒಂದು ರಸ್ತೆ ದೊರೆಯಲಾರಂಭಿಸಿದೆ.

ವಿದ್ಯಾರ್ಥಿನಿಯರ ಬೇಡಿಕೆ

ಅಕ್ಕಮಹಾದೇವಿ ವಿವಿಯ ಕೇಂದ್ರ ಅತ್ಯಾಧುನಿಕ ಸೌಲಭ್ಯ ಹೊಂದಿದೆ. ಸುಸಜ್ಜಿತ ಕಟ್ಟಡ ಒಳಗೊಂಡು ಬೋಧನಾ ಸಿಬ್ಬಂದಿಯೂ ಲಭ್ಯವಾಗುತ್ತಿದ್ದಾರೆ. 200ಕ್ಕೂ ಹೆಚ್ಚು ಬಡ ವಿದ್ಯಾರ್ಥಿನಿಯರು ಇಲ್ಲಿ ಉನ್ನತ ಶಿಕ್ಷಣ ಬಯಸಿದ್ದಾರೆ. 5 ಸಾವಿರ ರೂ.ಗಿಂತಲೂ ಕಡಿಮೆ ವೆಚ್ಚದಲ್ಲಿ ಎಂಎ, ಎಂಎಸ್ಸಿ, ಎಂಕಾಂ ಹಾಗೂ ಬಿಎಸ್ಸಿ, ಬಿಕಾಂ ಓದಲು ಅವಕಾಶವಿದೆ. ವಿವಿ ದರ್ಜೆಯ ಶಿಕ್ಷಣ ಕಲ್ಪಿಸುವ ಈ ಕೇಂದ್ರ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರೂ ಇದಕ್ಕೆ ರಸ್ತೆಯೇ ಇಲ್ಲವಾಗಿತ್ತು. ವಿದ್ಯಾರ್ಥಿನಿಯರು ಮುಳ್ಳುಕಂಟಿ ದಾಟಿ ಕೇಂದ್ರಕ್ಕೆ ಹೋಗಬೇಕಾದ ಹಿನ್ನೆಲೆಯಲ್ಲಿ ಸತತವಾಗಿ ದೂರು ಸಲ್ಲಿಸಿದ್ದರು.

ಕೊನೆಗೂ ಮೋಕ್ಷ

ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರಕ್ಕೆ ನೇರವಾಗಿ ರಸ್ತೆ ಕಲ್ಪಿಸಲು ಇದೀಗ ಕೆಲಸ ಆರಂಭಿಸಲಾಗಿದೆ. ಆರ್‌.ಸಿ. ಪಾಟೀಲ್‌ ಅವರೇ ಮುಂದೆ ನಿಂತು ಕೆಲಸಕ್ಕೆ ಕೈ ಹಾಕಿದ್ದಾರೆ. ಅವರ ಪ್ರಯತ್ನಕ್ಕೆ ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌ ಕೈ ಜೋಡಿಸಿದ್ದಾರೆ. ನಗರಸಭೆಯಲ್ಲಿ ಲಭ್ಯ ಇರುವ ಜೆಸಿಬಿ, ರೋಲರ್‌ ಬಳಸಿಕೊಂಡು ತಮ್ಮ ಮಿತಿಯಲ್ಲೇ ರಸ್ತೆ ಸುಧಾರಿಸಲು ಹೊರಟಿದ್ದಾರೆ. ಸರ್ಕಾರದಿಂದ ಉಚಿತ ಜೆಸಿಬಿ, ರೋಲರ್‌ ಹೊರತುಪಡಿಸಿ, ಯಾವುದೇ ಅನುದಾನ ಇಲ್ಲವಾದರೂ ಕೆಲಸ ಪೂರ್ಣಗೊಳಿಸಲು ಮುಂದಾಗಿದ್ದು, ಗಮನ ಸೆಳೆದಿದೆ.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರ ಇಬ್ಬರು ಕಾಂಗ್ರೆಸ್ ನಾಯಕರ ರಾಜಕೀಯ ವೈಷಮ್ಯದ ಪ್ರತಿಫಲನ: ಬಿಜೆಪಿ

ತಾತ್ಕಾಲಿಕ ಸುಧಾರಣೆ

ವಿವಿ ಕೇಂದ್ರಕ್ಕೆ ಹೋಗಲು ಬರೋಬ್ಬರಿ 50 ಅಡಿ ವಿಸ್ತೀರ್ಣದ ರಸ್ತೆ ನಿರ್ಮಿಸುವ ಮುನ್ನ ಎರಡು ಬದಿಯಲ್ಲಿ ದೊಡ್ಡ ಚರಂಡಿಗಳನ್ನು ಅಗೆಯಲಾಗುತ್ತಿದೆ. ಎರಡು ಬದಿಯ ಮಣ್ಣನ್ನು ರಸ್ತೆಗೆ ಹಾಕಿ, ನಂತರದಲ್ಲಿ ಅದಕ್ಕೆ ಹೊರಗಿನಿಂದ ಮರಂ ಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಬಳಿಕ ರೋಲರ್‌ ಮಾಡುವುದರಿಂದ ರಸ್ತೆ ಸಂಚಾರಕ್ಕೆ ಸುಗಮವಾಗಲಿದೆ. ಜೊತೆಗೆ, ರಸ್ತೆಯೇ ಕಾಣದ ವಿವಿಗೆ ಇದೇ ಮೊದಲ ಬಾರಿಗೆ ರಸ್ತೆ ಯೋಗ ಒಲಿಯಲಿದೆ.

ಆರ್‌.ಸಿ. ಪಾಟೀಲ್‌ ಅವರೇ ರಸ್ತೆ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. ನಮ್ಮ ಕಡೆಯಿಂದ ಯಂತ್ರಗಳನ್ನು ಮಾತ್ರ ಒದಗಿಸುತ್ತಿದ್ದೇವೆ. ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಮಲ್ಲಿಕಾರ್ಜುನ ಪಾಟೀಲ್‌, ನಗರಸಭೆ ಅಧ್ಯಕ್ಷ, ಸಿಂಧನೂರು

ನಗರಸಭೆ ಸಹಕಾರ ಮತ್ತು ನಮ್ಮ ಕೈಲಾಗುವ ಕೆಲಸಕ್ಕೆ ಮುಂದಾಗಿದ್ದು, ಅಕ್ಕಮಹಾದೇವಿ ಮಹಿಳಾ ವಿವಿ ಕೇಂದ್ರಕ್ಕೆ ರಸ್ತೆ ಕಲ್ಪಿಸಲಾಗುತ್ತಿದೆ. ಇರುವುದರಲ್ಲಿಯೇ ಎಷ್ಟು ಸಾಧ್ಯವೋ ಅಷ್ಟು ಮಾಡಲಿದ್ದು, ಖರ್ಚು ನಿಭಾಯಿಸಲಾಗುವುದು. ಆರ್‌.ಸಿ. ಪಾಟೀಲ್‌, ಸಿಂಡಿಕೇಟ್ಮಾಜಿ ಸದಸ್ಯ, ಅಕ್ಕಮಹಾದೇವಿ ಮಹಿಳಾ ವಿವಿ ವಿಜಯಪುರ

-ಯಮನಪ್ಪ ಪವಾರ

ಟಾಪ್ ನ್ಯೂಸ್

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.